ಕೊರೊನಾ ಎಫೆಕ್ಟ್ : ಮಂಗಳೂರು ಮಹಾನಗರ ಪಾಲಿಕೆಯಲ್ಲಿ ಸಾರ್ವಜನಿಕರಿಗಿಲ್ಲ ಪ್ರವೇಶ

0

ಮಂಗಳೂರು : ಕೊರೊನಾ ವೈರಸ್ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಇಂದಿನಿಂದ ಒಂದು ವಾರಗಳ ಕಾಲ ಸಾರ್ವಜನಿಕರಿಗೆ ಪ್ರವೇಶ ನಿರಾಕರಿಸಲಾಗಿದೆ.

ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಕೊರೊನಾವನ್ನು ತಡೆಗಟ್ಟಲು ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳಬೇಕಾಗಿದೆ. ಆದರೆ ಪಾಲಿಕೆಗೆ ನಿತ್ಯವೂ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಆಗಮಿಸುವುದರಿಂದ ಸಮಸ್ಯೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಪಾಲಿಕೆಯನ್ನು ಜೂನ್ 29 ರಿಂದ ಒಂದು ವಾರಗಳ ಕಾಲ ಸಾರ್ವಜನಿಕರ ಪ್ರವೇಶವನ್ನು ನಿಷೇಧಿಸಲಾಗಿದೆ ಎಂದು ಮಂಗಳೂರು ಮಹಾನಗರ ಪಾಲಿಕೆಯ ಮೇಯರ್ ದಿವಾಕರ್ ಪಾಂಡೇಶ್ವರ ಅವರು ತಿಳಿಸಿದ್ದಾರೆ.

Leave A Reply

Your email address will not be published.