Heavy rain : ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಭಾರೀ ಮಳೆ : ಜನ ಜೀವನ ಅಸ್ತವ್ಯಸ್ತ

ಉಡುಪಿ / ಮಂಗಳೂರು : Heavy rain : ಕಳೆದ ಎರಡು ದಿನಗಳಿಂದ ಮಂಗಳೂರು ಸೇರಿದಂತೆ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಎಡಬಿಡದೇ ಮಳೆ ಸುರಿಯುತ್ತಿದೆ. ಭಾರೀ ಮಳೆಗೆ ಕರಾವಳಿ ಭಾಗದ ಜನತೆಯ ಜೀವನ ಸಂಪೂರ್ಣ ಅಸ್ತವ್ಯಸ್ಥಗೊಂಡಿದೆ. ರಸ್ತೆಗಳು ನದಿಯಂತಾಗಿದ್ದರೆ, ಅಂಗಡಿ ಮುಂಗಟ್ಟುಗಳು ಹಾಗೂ ಆಸ್ಪತ್ರೆಗಳ ಒಳಗೆ ನೀರು ನುಗ್ಗಿದ್ದು ಅವಾಂತರವೇ ಸೃಷ್ಟಿಯಾಗಿದೆ. ಮುಂಜಾಗ್ರತಾ ಕ್ರಮವಾಗಿ ಕೆಲವು ಖಾಸಗಿ ಶಿಕ್ಷಣ ಸಂಸ್ಥೆಗಳು ಇಂದು ರಜೆಯನ್ನು ಘೋಷಣೆ ಮಾಡಿವೆ.


ರಸ್ತೆಗಳಿಗೆ ನೀರು ನುಗ್ಗಿದ ಪರಿಣಾಮ ಆಡ್ಯಾರ್​ನಿಂದ ಕಣ್ಣೂರಿಗೆ ತೆರಳುವ ರಸ್ತೆ ಮಾರ್ಗ ಕೆಲ ಕಾಲ ಬಂದ್​ ಆಗಿತ್ತು. ಇದರಿಂದಾಗಿ ವಾಹನ ಸವಾರರು ಗಂಟೆಗಟ್ಟಲೇ ಭಾರೀ ಮಳೆಯ ನಡುವೆ ರಸ್ತೆಯಲ್ಲೇ ನಿಂತು ದಾರಿ ಸುಗಮಗೊಳ್ಳಲು ಕಾಯುವಂತಹ ಪರಿಸ್ಥಿತಿ ನಿರ್ಮಾಣವಾಗಿತ್ತು. ಕಣ್ಣೂರಿನ ಖಾಸಗಿ ಆಸ್ಪತ್ರೆಯ ಒಳಗೆ ನೀರು ನುಗ್ಗಿದ ಪರಿಣಾಮ ರೋಗಿಗಳು ಪರದಾಡುವಂತಾಗಿದೆ.


ಮಂಗಳೂರು – ಮೂಡುಬಿದ್ರಿಯಲ್ಲಿಯೂ ಭಾರೀ ಮಳೆಯಿಂದಾಗಿ ರಸ್ತೆಯು ಸಂಪೂರ್ಣ ಜಲಾವೃತಗೊಂಡ ಪರಿಣಾಮ ಭಾರೀ ಟ್ರಾಫಿಕ್​ ಜಾಮ್​ ಉಂಟಾಗಿತ್ತು. ಕುಡುಪುವಿನಿಂದ ಶಕ್ತಿನಗರದವರೆಗೂ ಸಂಚಾರ ಸಂಪೂರ್ಣ ಅಸ್ತವ್ಯಸ್ತಗೊಂಡಿತ್ತು. ಸಂಚಾರ ದುಸ್ಥರಗೊಂಡ ಪರಿಣಾಮ ಜನತೆ ಗಂಟೆಗೂ ಹೆಚ್ಚು ಕಾಲ ಸಂಚಾರ ದಟ್ಟಣೆಯಲ್ಲಿ ಸಿಲುಕಿ ಹಾಕಿಕೊಂಡಿದ್ದರು . ಇತ್ತ ಕೊಟ್ಟಾರ ಚೌಕಿಯಲ್ಲಿಯೂ ಭಾರೀ ಮಳೆಯಿಂದಾಗಿ ಸಂಚಾರ ದುಸ್ಥರವಾಗಿದೆ.
ಜಿಲ್ಲೆಯಲ್ಲಿ ಸುರಿಯುತ್ತಿರುವ ಭಾರೀ ಮಳೆಯ ವಿಚಾರವಾಗಿ ಮಾತನಾಡಿದ ಜಿಲ್ಲಾಧಿಕಾರಿ ಡಾ. ಕೆ.ವಿ ರಾಜೇಂದ್ರ, ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿದ್ದು ಇದರಿಂದಾಗಿ ಯಾವುದೇ ಪ್ರಾಣಹಾನಿ ಸಂಭವಿಸದಂತೆ ಕಟ್ಟೆಚ್ಚರ ವಹಿಸಲಾಗಿದೆ. ವಿದ್ಯಾರ್ಥಿಗಳು ಶಾಲೆಗೆ ಬಂದಿದ್ದರೆ ತರಗತಿ ಪ್ರಾರಂಭಿಸಿ ಎಂದು ಶಾಲೆಗಳಿಗೆ ಸೂಚನೆ ನೀಡಿದ್ದೇವೆ. ವಿದ್ಯಾರ್ಥಿಗಳಿಗೆ ಶಾಲೆಗೆ ತೆರಳಲು ಸಾಧ್ಯವೇ ಇಲ್ಲ ಎಂಬೆಲ್ಲ ಕಡೆಗಳಲ್ಲಿ ರಜೆ ಘೋಷಣೆ ಮಾಡಲಾಗಿದೆ ಎಂದು ಹೇಳಿದ್ದಾರೆ.


ಹವಾಮಾನ ಇಲಾಖೆ ಗುರುವಾರ ಆರೆಂಜ್ ಅಲರ್ಟ್ ಘೋಷಿಸಿದೆ.ನಾಳೆಯ ಇದೇ ರೀತಿ ಮಳೆ ಮುಂದುವರಿದರೆ ಪರಿಸ್ಥಿತಿ ಅವಲೋಕಿಸಿ ಶಾಲೆಗಳಿಗೆ ರಜೆ ಘೋಷಿಸಲು ತೀರ್ಮಾನಿಸಲಾಗುವುದು ಎಂದು ಡಿಸಿ ರಾಜೇಂದ್ರ ಹೇಳಿದರು.

ಇದನ್ನು ಓದಿ : Eoin Morgan : ಇಂಗ್ಲಿಷ್ ಕ್ರಿಕೆಟ್ ದಿಕ್ಕನ್ನೇ ಬದಲಿಸಿದ ಐರಿಷ್ ಆಟಗಾರ ; ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಇಂಗ್ಲೆಂಡ್ ದಿಗ್ಗಜನ ವಿದಾಯ

ಇದನ್ನೂ ಓದಿ : KL Rahul : ಕೆ.ಎಲ್​ ರಾಹುಲ್​ಗೆ ಯಶಸ್ವಿ ಶಸ್ತ್ರಚಿಕಿತ್ಸೆ : ಶೀಘ್ರ ಚೇತರಿಕೆಯ ಹಾದಿಯಲ್ಲಿದ್ದೇನೆಂದ ಕನ್ನಡಿಗ

Mangaluru: Heavy rains submerge roads; water gushes into hospital

Comments are closed.