ಕಾರವಾರ : Multi specialty hospital : ಉತ್ತರ ಕನ್ನಡ ಜಿಲ್ಲೆ ಜನತೆ ತಮಗೊಂದು ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಬೇಕೆಂದು ಪಟ್ಟು ಹಿಡಿದಿದ್ದರು. ಆದರೆ ಆರ್ಥಿಕ ಇಲಾಖೆಯು ಆರೋಗ್ಯ ಇಲಾಖೆಯ ಪ್ರಸ್ತಾವನೆಯನ್ನು ತಿರಸ್ಕರಿಸಿತ್ತು. ಆದರೆ ಇದೀಗ ಮತ್ತೆ ಉತ್ತರ ಕನ್ನಡ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಕನಸಿಗೆ ಮರು ಜೀವ ಬಂದಂತಿದೆ. ಉತ್ತರ ಕನ್ನಡ ಜಿಲ್ಲೆಗೆ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣ ಮಾಡುವ ಸಲುವಾಗಿ ಆರ್ಥಿಕ ಇಲಾಖೆಗೆ ಕಡತ ಕಳಿಸಿದ್ದೇವೆ ಎಂದು ಆರೋಗ್ಯ ಸಚಿವ ಡಾ.ಕೆ ಸುಧಾಕರ್ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಈ ವಿಚಾರವಾಗಿ ಮಾತನಾಡಿದ ಡಾ.ಕೆ ಸುಧಾಕರ್, ಉತ್ತರ ಕನ್ನಡ ಜಿಲ್ಲೆಯಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣ ಮಾಡಲು ಇನ್ನೂ ಸೂಕ್ತ ಸ್ಥಳವನ್ನು ನಾವು ಆಯ್ಕೆ ಮಾಡಿಲ್ಲ. ಈ ಅಧಿವೇಶನ ಮುಗಿಯುತ್ತಿದ್ದಂತೆಯೇ ಉತ್ತರ ಕನ್ನಡ ಜಿಲ್ಲೆಗೆ ಪ್ರವಾಸ ಕೈಗೊಂಡು ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಗೆ ಸೂಕ್ತವಾದ ಸ್ಥಳವನ್ನು ಅಂತಿಮಗೊಳಿಸಲಾಗುತ್ತದೆ ಎಂದು ಮಾಹಿತಿ ನೀಡಿದ್ದಾರೆ.
ಇನ್ನು ಉತ್ತರ ಕನ್ನಡ ಜಿಲ್ಲೆ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣಕ್ಕೆ ತಾತ್ವಿಕ ಒಪ್ಪಿಗೆ ಸಿಕ್ಕ ಹಿನ್ನೆಲೆಯಲ್ಲಿ ಇಂದು ಕುಮಟಾದ ಹಲವು ಕಡೆಗಳಲ್ಲಿ ಜಿಲ್ಲಾಧಿಕಾರಿ ಮುಲೈ ಮಹಿಲನ್ ಸ್ಥಳ ಪರಿಶೀಲನೆ ನಡೆಸಿದ್ದಾರೆ. ಮಿರ್ಜಾನ್ ಗ್ರಾಮ, ಕುಮಟಾ ರೈಲ್ವೆ ನಿಲ್ದಾಣ ಪ್ರದೇಶ, ಕೊಂಕಣ ಎಜ್ಯುಕೇಷನ್ ಸಮೀಪದ ಸ್ಥಳಗಳಿಗೆ ಭೇಟಿ ನೀಡಿದ ಜಿಲ್ಲಾಧಿಕಾರಿ ಮುಲೈ ಮಹಿಲನ್ ಬಳಿಕ ಉಪವಿಭಾಗಾಧಿಕಾರಿ ಕಚೇರಿಯಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ರು. ಸ್ಥಳ ಪರಿಶೀಲನೆ ಸಂದರ್ಭದಲ್ಲಿ ಮಂಗಳೂರಿನ ಕೆ.ಎಸ್ ಹೆಗಡೆ ಆಸ್ಪತ್ರೆ ಸಿಬ್ಬಂದಿ ಕೂಡ ಭಾಗಿಯಾಗಿದ್ದರು. ಸಭೆಯಲ್ಲಿ ಆಸ್ಪತ್ರೆ ಜಾಗದ ಕುರಿತಂತೆ ಆರೋಗ್ಯ ಹಾಗೂ ಕಂದಾಯ ಇಲಾಖೆಯ ಅಧಿಕಾರಿಗಳೊಂದಿಗೆ ಜಿಲ್ಲಾಧಿಕಾರಿ ಮುಲೈ ಮಹಿಲನ್ ಚರ್ಚೆ ನಡೆಸಿದ್ದಾರೆ .
ಇದನ್ನೂ ಓದಿ : Virat Kohli : ಕ್ರಿಕೆಟ್ ದೇವರ 100 ಶತಕಗಳ ವಿಶ್ವದಾಖಲೆಯನ್ನು ಮುರಿಯಲಿದ್ದಾರೆ ವಿರಾಟ್ “ಕಿಂಗ್” ಕೊಹ್ಲಿ
Multi specialty hospital soon for Uttara Kannada district: Site inspection by District Collector