Muruga Mutt: ಮುರುಘಾ ಮಠದ ಆಡಳಿತಾಧಿಕಾರಿಯಾಗಿ ನಿವೃತ್ತ IAS ಅಧಿಕಾರಿ ವಸ್ತ್ರದ್ ನೇಮಕಗೊಳಿಸಿ ರಾಜ್ಯ ಸರ್ಕಾರ ಆದೇಶ

ಚಿತ್ರದುರ್ಗ: ಇತ್ತೀಚೆಗೆ ಸದಾ ಸುದ್ದಿಯಲ್ಲಿರುವ ಚಿತ್ರದುರ್ಗದ ಮುರುಘಾ ಮಠಕ್ಕೆ (Muruga Mutt) ಸರ್ಕಾರ ಕೊನೆಗೂ ಆಡಳಿತಾಧಿಕಾರಿಯನ್ನು ನೇಮಿಸಿ ಆದೇಶ ಹೊರಡಿಸಿದೆ. ನಿವೃತ್ತ ಐಎಎಸ್ ಅಧಿಕಾರಿ ಪಿ.ಎಸ್.ವಸ್ತ್ರದ್ ಅವರನ್ನು ಚಿತ್ರದುರ್ಗದ ಮುರುಘಾಮಠದ ಆಡಳಿತಾಧಿಕಾರಿಯನ್ನಾಗಿ ನೇಮಕಗೊಳಿಸಿ ರಾಜ್ಯ ಸರ್ಕಾರದ ಉಪ ಕಾರ್ಯದರ್ಶಿ ಟಿ.ಸಿ.ಕಾಂತರಾಜ್ ಆದೇಶ ಹೊರಡಿಸಿದ್ದಾರೆ.

ಮುರುಘಾಮಠದ ಮುರುಘಾ ಶ್ರೀ ವಿರುದ್ಧ ಪೋಕ್ಸೋ ಕೇಸ್ ದಾಖಲಾಗಿ ಕಳೆದ 3 ತಿಂಗಳಿನಿಂದ ಅವರು ನ್ಯಾಯಾಂಗ ಬಂಧನದಲ್ಲಿದ್ದಾರೆ. ಹೀಗಾಗಿ ಮುರುಘಾ ಮಠಕ್ಕೆ ನೂತನ ಆಡಳಿತಾಧಿಕಾರಿ ನೇಮಕ ಮಾಡಬೇಕೆಂಬ ಒತ್ತಾಯಗಳು ಕಳೆದ ಕೆಲ ದಿನಗಳಿಂದ ಕೇಳಿಬರುತ್ತಿದ್ದವು. ಹೀಗಾಗಿ ಅಂತಿಮವಾಗಿ ರಾಜ್ಯ ಸರ್ಕಾರ ಜಿಲ್ಲಾಧಿಕಾರಿ ಅವರಿಂದ ವರದಿ ತರಿಸಿಕೊಂಡು ಅದರ ಆಧಾರದ ಮೇಲೆ ನೂತನ ಆಡಳಿತಾಧಿಕಾರಿಯನ್ನು ನೇಮಕ ಮಾಡಿದೆ. ಅಲ್ಲದೇ ಆಡಳಿತಾಧಿಕಾರಿಯನ್ನು ನೇಮಕ ಮಾಡುವ ಸಂಬಂಧ ಸರ್ಕಾರದ ಅಡ್ವೊಕೇಟ್ ಜನರಲ್ ಅವರ ಅಭಿಪ್ರಾಯವನ್ನು ಕೂಡಾ ಪಡೆದಿರುವುದಾಗಿ ರಾಜ್ಯ ಸರ್ಕಾರದ ಆದೇಶ ಪ್ರತಿಯಲ್ಲಿ ತಿಳಿಸಿದೆ.

ಇದನ್ನೂ ಓದಿ: Christmas Gifts For Children: ಮಕ್ಕಳಿಗೆ ಕ್ರಿಸ್‌ಮಸ್‌ ಗಿಫ್ಟ್‌ ಕೊಡಬೇಕಾ; ಇಲ್ಲಿದೆ ಬೆಸ್ಟ್‌ ಐಡಿಯಾಗಳು

ಮಠದ ಟ್ರಸ್ಟಿ ಶಿವಮೂರ್ತಿ ಮುರುಘಾ ಶರಣರು ನ್ಯಾಯಾಂಗ ಬಂಧನದಲ್ಲಿರುವ ಹಿನ್ನೆಲೆ ಟ್ರಸ್ಟಿನ ಸ್ವತ್ತನ್ನು ರಕ್ಷಿಸುವ ನಿಟ್ಟಿನಲ್ಲಿ ಭಾರತ ಸಂವಿಧಾನದ ಅನುಚ್ಛೇದ 52ರನ್ವಯ ಸರ್ಕಾರವು ಸದರಿ ಸಂಸ್ಥೆಗೆ ಆಡಳಿತಾಧಿಕಾರಿಯನ್ನು ನೇಮಿಸಬಹುದು ಎಂದು ಅಡ್ವೊಕೇಟ್ ಜನರಲ್ ಅವರು ಅಭಿಪ್ರಾಯಪಟ್ಟಿದ್ದಾರೆ. ಅಲ್ಲದೇ ಈ ಬಗ್ಗೆ ಸ್ಪಷ್ಟ ಅಭಿಪ್ರಾಯವನ್ನು ನೀಡುವಂತೆ ಚಿತ್ರದುರ್ಗ ಡಿಸಿ ಅವರನ್ನೂ ರಾಜ್ಯ ಸರ್ಕಾರ ಕೇಳಿತ್ತು. ಅವರು ಕೂಡಾ ಆಡಳಿತಾಧಿಕಾರಿ ಬೇಕು ಎಂಬ ಅಭಿಪ್ರಾಯವನ್ನು ಸಲ್ಲಿಸಿದ್ದರು. ಮುರುಘಾ ಮಠದ ಟ್ರಸ್ಟ್ ಸಾರ್ವಜನಿಕ ಟ್ರಸ್ಟ್ ಆಗಿದ್ದು, ಆಸ್ತಿಗಳ ನಿರ್ವಹಣೆಗೆ ತೊಡಕುಂಟಾಗುತ್ತಿದೆ. ಆಡಳಿತ ಅಥವಾ ಹಣಕಾಸು ದುರುಪಯೋಗವಾದಲ್ಲಿ ಸಾರ್ವಜನಿಕ ಹಿತಾಸಕ್ತಿಗೆ ಧಕ್ಕೆಯುಂಟಾಗುತ್ತದೆ ಎಂದು ಅಭಿಪ್ರಾಯಪಟ್ಟಿದ್ದರು ಎಂಬುದನ್ನು ಸರ್ಕಾರ ಈಗ ಹೊರಡಿಸಿರುವ ಆದೇಶ ಪ್ರತಿಯಲ್ಲಿ ಉಲ್ಲೇಖಿಸಿದೆ. ಸಾರ್ವಜನಿಕ ಹಿತದೃಷ್ಟಿಯಿಂದ ಮಠದ ಚರಾ-ಸ್ಥಿರ ಆಸ್ಥಿಗಳನ್ನು ಸಂರಕ್ಷಿಸುವ ಹಿತದೃಷ್ಟಿಯಿಂದ ಹಾಗೂ ಸಂಸ್ಥೆಯ ಹಣ ದುರುಪಯೋಗ ಆಗದಂತೆ ಲೆಕ್ಕಪತ್ರಗಳನ್ನು ನಿರ್ವಹಿಸುವ ಸಂಬಂಧ ಈ ನೇಮಕ ಮಾಡಲಾಗಿದೆ ಎಂದು ಸರ್ಕಾರ ಆದೇಶದಲ್ಲಿ ತಿಳಿಸಿದೆ.

ಇದನ್ನೂ ಓದಿ: Siddaramaiah Secret meeting : ಹೈಕಮಾಂಡ್ ಗೂ ಕ್ಯಾರೇ ಎನ್ನದ ಸಿದ್ಧರಾಮಯ್ಯ: ವರಿಷ್ಠರ ಭೇಟಿ ಬಳಿಕ ಅಪ್ತರೊಂದಿಗೆ ರಹಸ್ಯ ಮೀಟಿಂಗ್

Muruga Mutt: The state government has appointed retired IAS officer Vastrad as the administrator of Muruga Mutt

Comments are closed.