Mysore Dussehra:ಮೈಸೂರು ದಸರಾ: ಜಂಬೂಸವಾರಿಗೆ ಚಾಲನೆ ನೀಡಲಿದ್ದಾರಾ ಪ್ರಧಾನಿ ಮೋದಿ

ಮೈಸೂರು : Mysore Dussehra: ವಿಶ್ವವಿಖ್ಯಾತ ಮೈಸೂರು ದಸರಾ ಈ ಬಾರಿ ಹಲವು ವಿಶೇಷತೆಗಳಿಗೆ ಸಾಕ್ಷಿಯಾಗಲಿದೆ. ಒಂದು ಕಡೆಯಿಂದ ದಸರಾ ಮಹೋತ್ಸವವನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಉದ್ಘಾಟಿಸಿದ್ರೆ ಇನ್ನೊಂದು ಕಡೆ ಪ್ರಧಾನಿ ನರೇಂದ್ರ ಮೋದಿ ತಾಯಿ ಚಾಮುಂಡೇಶ್ವರಿಗೆ ಪುಷ್ಪಾರ್ಚಣೆ ಮಾಡಿ ಜಂಬೂ ಸವಾರಿಗೆ ಚಾಲನೆ ನೀಡುವ ಸಾಧ್ಯತೆಯಿದೆ.

ದಸರಾ ಜಂಬೂ ಸವಾರಿಗೆ ಪ್ರಧಾನಿ ಮೋದಿ ಮೈಸೂರಿಗೆ ಆಗಮಿಸುವ ವಿಚಾರದ ಕುರಿತಂತೆ ಮೈಸೂರಿನಲ್ಲಿ ಸಂಸದ ಪ್ರತಾಪ್ ಸಿಂಹ ಹೇಳಿಕೆ ನೀಡಿದ್ದು ಯೋಗ ದಿನಕ್ಕೆ ಬಂದಾಗಲೇ ಮೋದಿ ಅವರು ದಸರಾ ನೋಡುವ ಇಚ್ಚೆ, ಆಸೆ ವ್ಯಕ್ತಪಡಿಸಿದ್ದರು. ಹೀಗಾಗಿ ದಸರಾ ಕಾರ್ಯಕ್ರಮ ಬಗ್ಗೆ ತಿಳಿಯಲು ಪ್ರಧಾನಿ ಕಾರ್ಯಾಲಯದಿಂದ ಮುಖ್ಯ ಕಾರ್ಯದರ್ಶಿಗೆ ಫೋನ್ ಕರೆ ಬಂದಿತ್ತು. ಪ್ರಧಾನಿಗಳು ಬರ್ತಾ ಇದ್ದಾರೋ ಇಲ್ಲವೋ ಎಂಬುದು ನಿಖರವಾಗಿ ತಿಳಿದಿಲ್ಲ ಎಂದರು. ಯೋಗ ದಿನಕ್ಕೆ ಪ್ರಧಾನಿಗಳು ಮೈಸೂರಿಗೆ ಬಂದಾಗ
ತಾಯಿ ಚಾಮುಂಡಿ ದರ್ಶನ ಮಾಡಿದ್ದರು. ಆಗ ಮತ್ತೊಮ್ಮೆ ದರ್ಶನಕ್ಕೆ ಬರುವ ಇಚ್ಚೆ ವ್ಯಕ್ತಪಡಿಸಿದ್ದರು.ದಸರಾ ವೇಳೆ ತಾಯಿ ದರ್ಶನ ಇನ್ನೂ ವಿಶೇಷ ಎಂದು ಪ್ರತಾಪ್ ಸಿಂಹ ಹೇಳಿದರು.

ಪ್ರಧಾನಿ ಕಾರ್ಯಾಲಯದಿಂದ ಈಗಾಗಲೇ ಮಾಹಿತಿ ಪಡೆಯಲಾಗಿದೆ. ದಸರಾ ಸಿದ್ಧತೆ ಹೇಗಿದೆ, ಪ್ರಧಾನಿಗಳು ದಸರಾಗೆ ಬರುವುದಾದರೆ ಯಾವಾಗ ಬಂದರೆ ಉತ್ತಮ ಎಂಬ ಮಾಹಿತಿ ಪಡೆದಿದ್ದಾರೆ. ಇನ್ನು ರಾಷ್ಟ್ರಪತಿ ಬರುತ್ತಿರುವ ಕಾರಣ ಪ್ರಧಾನಿ ಬರುವ ಬಗ್ಗೆ ನಿಶ್ಚಿತವಾಗಿ ಹೇಳಲು ಸಾಧ್ಯವಿಲ್ಲ ಎಂದು ಸಹ ಸಂಸದ ಪ್ರತಾಪ್ ಸಿಂಹ ಇದೇ ಸಂದರ್ಭ ತಿಳಿಸಿದರು.

ಈಗಾಗಲೇ ದಸರಾ ಮಹೋತ್ಸವಕ್ಕೆ ಅಂತಿಮ ಹಂತದ ಸಿದ್ದತೆ ನಡೆಸಲಾಗುತ್ತಿದೆ. ಮೈಸೂರಿನ ಚಾಮುಂಡಿಬೆಟ್ಟದಲ್ಲಿ ಸೆಪ್ಟೆಂಬರ್ 2ರಂದು ದೇಶದ ಮೊದಲ ಪ್ರಜೆ ದ್ರೌಪದಿ ಮುರ್ಮು ದಸರಾ ಉದ್ಘಾಟನೆ ಮಾಡಲಿದ್ದಾರೆ. ಅಕ್ಟೋಬರ್ 5ರಂದು ಮೈಸೂರು ಅರಮನೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಚಾಮುಂಡೇಶ್ವರಿ ದೇವಿಗೆ ಪುಷ್ಪಾರ್ಚಣೆ ಮಾಡಿ ವಿಶ್ವ ಪ್ರಸಿದ್ಧ ಮೈಸೂರು ದಸರಾ ಮಹೋತ್ಸವದ ಜಂಬೂ ಸವಾರಿಗೆ ಚಾಲನೆ ನೀಡಲಿದ್ದಾರೆ ಎಂದು ಹೇಳಲಾಗುತ್ತಿದೆ. ಆದ್ರೆ ಪ್ರಧಾನಿ ಕಚೇರಿಯಿಂದ ಈ ಬಗ್ಗೆ ಇನ್ನಷ್ಟೇ ಸ್ಪಷ್ಟತೆ ಸಿಗಬೇಕಾಗಿದೆ.

ಈ ಬಾರಿ‌ ಮೈಸೂರು ದಸರಾವನ್ನು ಅಂದಾಜು 50 ಕೋಟಿ ವೆಚ್ಚದಲ್ಲಿ ಆಚರಣೆ ಮಾಡೋದಕ್ಕೆ ನಿರ್ಧಾರ ಮಾಡಲಾಗಿದೆ. ಈ ಹಿಂದಿನ ಎರಡು ವರ್ಷ ಕೋವಿಡ್ ಕಾರಣದಿಂದ ಸರಳವಾಗಿ ಆಚರಿಸಿದ್ದರಿಂದ ಈ ಬಾರಿ ವೈಭವದಿಂದ ದಸರಾ ಕಾರ್ಯಕ್ರಮ ನಡೆಯಲಿದೆ.

ಇದನ್ನು ಓದಿ : Dk Shivakumar: ನನ್ನ ಹಾಗೂ ನನ್ನ ಸ್ನೇಹಿತರಿಗೆ ಇಡಿ ಕಿರುಕುಳ ನೀಡುತ್ತಿದೆ : ಡಿ.ಕೆ ಶಿವಕುಮಾರ್​ ಗಂಭೀರ ಆರೋಪ

ಇದನ್ನೂ ಓದಿ : Mark Boucher MI Head Coach : ದಕ್ಷಿಣ ಆಫ್ರಿಕಾದ ದಿಗ್ಗಜ ಮುಂಬೈ ಇಂಡಿಯನ್ಸ್ ಕೋಚ್ ; ಮಾರ್ಕ್ ಬೌಷರ್ ಹೆಗಲೇರಿದ ಮುಂಬೈ ಗುರು ಪಟ್ಟ

Mysore Dussehra: Will PM Modi start Jamboosawari

Comments are closed.