omicron alert : ಉಡುಪಿಯಲ್ಲಿ ಓಮಿಕ್ರಾನ್ ಕಟ್ಟೆಚ್ಚರ : ಕೊರೊನಾ ಟೆಸ್ಟ್‌ ಹೆಚ್ಚಳಕ್ಕೆ ಡಿಸಿ ಕೂರ್ಮರಾವ್‌ ಸೂಚನೆ

ಉಡುಪಿ : ದಕ್ಷಿಣ ಆಫ್ರಿಕಾ ಸೇರಿದಂತೆ ವಿಶ್ವದ ಕೆಲವು ದೇಶಗಳಲ್ಲಿ ಕೋವಿಡ್ ನ ಹೊಸ ರೂಪಾಂತರಿ ತಳಿ ಒಮಿಕ್ರಾನ್ (omicron alert) ಸೋಂಕಿನ ಆರ್ಭಟ ಹೆಚ್ಚುತ್ತಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರಕಾರ ಕೋವಿಡ್‌ ಪರೀಕ್ಷೆಯನ್ನು ಹೆಚ್ಚಿಸುವಂತೆ ಸುತ್ತೋಲೆ ಹೊರಡಿಸಿದ್ದು, ಈ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲೆಯಲ್ಲಿ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಉಡುಪಿ ಜಿಲ್ಲಾಧಿಕಾರಿ ಎಂ.ಕೂರ್ಮರಾವ್‌ ತಿಳಿಸಿದ್ದಾರೆ.

ಉಡುಪಿ ಜಿಲ್ಲೆಯಲ್ಲಿ ದೈನಂದಿನ ಕೋವಿಡ್ ಪರೀಕ್ಷೆ ಗುರಿ 3000 ದಿಂದ 4000 ಹೆಚ್ಚಿಸಿ ನಿಗದಿಪಡಿಸಲಾಗಿದೆ. ರೋಗಲಕ್ಷಣ ಹೊಂದಿರುವವರು ILI / SARI ಪ್ರಕರಣಗಳು, ಸೋಂಕಿತರ ಪ್ರಾಥಮಿಕ ಮತ್ತು ದ್ವಿತೀಯ ಹಂತದ ಸಂಪರ್ಕ ಹೊಂದಿರುವವರು ಮತ್ತು ಹೈ ರಿಸ್ಕ್ ಹೊಂದಿರುವ ದೇಶಗಳಿಂದ ಬಂದಿರುವ ವ್ಯಕ್ತಿಗಳಿಗೆ ಕೋವಿಡ್‌ ಪರೀಕ್ಷೆ ಮಾಡುವ ಕಾರ್ಯವನ್ನು ಮುಂದುವರಿಸುವ ಜೊತೆಗೆ ಪರೀಕ್ಷಾ ಪ್ರಮಾಣವನ್ನು ಹೆಚ್ಚಳ ಮಾಡಲಾಗುವುದು ಎಂದಿದ್ದಾರೆ.

ಇನ್ನು ಪ್ರೌಢಶಾಲೆಗಳು ಮತ್ತು ಕಾಲೇಜುಗಳ ವಿದ್ಯಾರ್ಥಿಗಳು ಮತ್ತು ಬೋಧಕ ಸಿಬ್ಬಂದಿ. ಹೋಟೆಲ್ ಗಳು ಮತ್ತು ರೆಸ್ಟೋರೆಂಟ್ ಗಳ ಸಿಬ್ಬಂದಿ, ಮಾಲ್ ಗಳಲ್ಲಿರುವ ಅಂಗಡಿ ಮುಂಗಟ್ಟುಗಳ ವರ್ತಕರು. ಕ್ಯಾಟರಿಂಗ್ ಸಿಬ್ಬಂದಿ ಮತ್ತು ಮನೆಮನೆಗಳಿಗೆ ವಿತರಣೆ ಮಾಡುವ ಸಿಬ್ಬಂದಿ. ಕಾರ್ಖಾನೆಗಳ ಸಿಬ್ಬಂದಿ. ಎಲ್ಲಾ ಕಚೇರಿಗಳ ಸಿಬ್ಬಂದಿಗಳಿಗೆ ಹಾಗೂ ಪಬ್ ಮತ್ತು ಬಾರ್ ಗಳಲ್ಲಿ ಕೆಲಸ ಮಾಡುವ ಸಿಬ್ಬಂದಿಗಳಿಗೆ ರಾಂಡಮ್‌ ಪರೀಕ್ಷೆಯನ್ನು ನಡೆಸಲಾಗುತ್ತದೆ.

ಸಾರ್ವಜನಿಕವಾಗಿ ಗುಂಪು ಸೇರಿದ ಸಂದರ್ಭದಲ್ಲಿ ಕೊರೊನಾ ಟೆಸ್ಟ್‌ ನಡೆಸಲಾಗುತ್ತದೆ. ಶೇ. 50 ರಷ್ಟು ಜಿಲ್ಲಾ ಕೇಂದ್ರ ಹಾಗೂ ಉಳಿದ ಶೇ. 50 ಗ್ರಾಮೀಣ ಪ್ರದೇಶಗಳಲ್ಲಿ ಪರೀಕ್ಷೆ ನಡೆಸಲಾಗುತ್ತದೆ. ಈ ಪೈಕಿ ಪರೀಕ್ಷೆಯಲ್ಲಿ ಶೇಕಡ 10 ರಷ್ಟು ಮಕ್ಕಳನ್ನು ಪರೀಕ್ಷೆಗೆ ಒಳಪಡಿಸಲಾಗುತ್ತದೆ.. ಐಸಿಎಂಆರ್ ಮಾರ್ಗಸೂಚಿ ಪ್ರಕಾರ ಎಲ್ಲಾ ರೋಗಲಕ್ಷಣ ಸಹಿತ ಪ್ರಕರಣಗಳನ್ನು ಮೊದಲಿಗೆ Rat ಪರೀಕ್ಷೆಗೆ ಒಳಪಡಿಸುವುದು, ಫಲಿತಾಂಶ ನೆಗಟಿವ್ ಬಂದಲ್ಲಿ ಆರ್ಟಿಪಿಸಿಆರ್ ಪರೀಕ್ಷೆ ಮಾಡುವುದು. ರೋಗಲಕ್ಷಣ ಇಲ್ಲದವರಿಗೆ Rat ಪರೀಕ್ಷೆ ಮಾಡಬಾರದು ಎಂದಿದ್ದಾರೆ.

ದಕ್ಷಿಣ ಆಫ್ರಿಕಾ, ಬೋಟ್ಸುವಾನ ಮತ್ತು ಹಾಂಕಾಂಗ್ ನಿಂದ ಬರುವ ಪ್ರಯಾಣಿಕರಿಗೆ ಕಡ್ಡಾಯವಾಗಿ RTPCR ಪರೀಕ್ಷೆ ಮಾಡಬೇಕು ಮತ್ತು ನೆಗೆಟಿವ್ ವರದಿ ಬಂದ ನಂತರವೇ ವಿಮಾನ ನಿಲ್ದಾಣದಿಂದ ನಿರ್ಗಮಿಸಲು ಅನುಮತಿಸಬೇಕು. ಈ ಮೂರು ದೇಶಗಳಿಂದ ಕಳೆದ 15 ದಿನಗಳಿಂದ ಈಚೆಗೆ ಬಂದಿರುವ ಪ್ರಯಾಣಿಕರನ್ನು ಪತ್ತೆ ಹಚ್ಚಿ RTPCR ಪರೀಕ್ಷೆಗೆ ಒಳಪಡಿಸಬೇಕು. ಪ್ರಯಾಣಿಕರು ಕೋವಿಡ್ ಸೋಂಕಿತ ಆಗಿದ್ದಲ್ಲಿ ಅವರನ್ನು 10 ದಿನಗಳ ಕಾಲ ಕಡ್ಡಾಯ ಸಾಂಸ್ಥಿಕ ಪ್ರತ್ಯೇಕತೆಗೆ ಒಳಪಡಿಸಬೇಕು. ಪಾಸಿಟಿವ್ ಬಂದಿರುವ ಪರೀಕ್ಷಾ ಮಾದರಿಗಳನ್ನು ಕಡ್ಡಾಯವಾಗಿ ತಕ್ಷಣ ಜಿನೋಮಿಕ್ ಸಿಕ್ವೆನ್ಸಿಂಗ್ ಪರೀಕ್ಷೆಗೆ ಒಳಪಡಿಸಬೇಕು. ವಿದೇಶದಿಂದ ಬರುವ ಎಲ್ಲಾ ಪ್ರಯಾಣಿಕರು ಪರೀಕ್ಷೆಗೆ ಒಳಪಡಬೇಕು. ಉಡುಪಿ ಜಿಲ್ಲೆಯಲ್ಲಿ ಈ ಎಲ್ಲಾ ಮುನ್ನೆಚ್ಚರಿಕಾ ಕ್ರಮಗಳನ್ನು ಪ್ರಥಮ ಆದ್ಯತೆ ಎಂದು ಪರಿಗಣಿಸಿ, ಆರೊಗ್ಯ ಇಲಾಖೆ ಮತ್ತು ಇತರ ಪ್ರಮುಖ ಇಲಾಖೆಗಳ ಸಹಕಾರದೊಂದಿಗೆ ಜಿಲ್ಲಾಡಳಿತ ಸೂಕ್ತ ಮಾರ್ಗದರ್ಶನದಲ್ಲಿ ಮಾರ್ಗಸೂಚಿಯನ್ನು ಕಟ್ಟುನಿಟ್ಟಾಗಿ ಪಾಲನೆ ಮಾಡಲಾಗುತ್ತದೆ ಎಂದಿದ್ದಾರೆ.

ಇದನ್ನೂ ಓದಿ : Tree Lover Police : ಗಿಡನೆಟ್ಟು ಸರಳವಾಗಿ ಹುಟ್ಟುಹಬ್ಬ ಆಚರಣೆ : ಕರಾವಳಿಯಲ್ಲಿ ವೃಕ್ಷ ಪ್ರೇಮಿ ಪೊಲೀಸ್‌ ಅಧಿಕಾರಿ

ಇದನ್ನೂ ಓದಿ : ಮಲ್ಪೆಯಲ್ಲಿ 1.80 ಲಕ್ಷಕ್ಕೆ ಮಾರಾಟವಾಯ್ತು ಅಪರೂಪದ ಗೋಳಿ ಮೀನು

ಇದನ್ನೂ ಓದಿ : ಹೆಣ್ಣು ಮಗುವಿಗೆ ಜನ್ಮ ನೀಡಿದ 10 ನೇ ತರಗತಿ ವಿದ್ಯಾರ್ಥಿನಿ !

( Omicron Alert Corona Test Increases In Udupi)

Comments are closed.