Orange alert : ದಕ್ಷಿಣ ಒಳನಾಡಿನಲ್ಲಿ ಮಳೆಯ ಅಬ್ಬರ : ಕರಾವಳಿ ಜಿಲ್ಲೆಗಳಲ್ಲಿ ಇನ್ನೂ 2 ದಿನ ಆರೆಂಜ್​ ಅಲರ್ಟ್​

ಉಡುಪಿ/ ಮಂಗಳೂರು : Orange alert : ರಾಜ್ಯದಲ್ಲಿ ಕಳೆದೊಂದು ವಾರದಿಂದ ವರುಣನ ಆರ್ಭಟ ಜೋರಾಗಿದೆ. ಭಾರೀ ಮಳೆಯಿಂದಾಗಿ ಈಗಾಗಲೇ ಜನ ಜೀವನ ಸಂಪೂರ್ಣ ಅಸ್ತವ್ಯವಸ್ತವಾಗಿದೆ. ದಕ್ಷಿಣ ಒಳನಾಡಿನಲ್ಲಿ ಧಾರಾಕಾರ ಮಳೆಯಾಗುತ್ತಿದ್ದು ಆರೆಂಜ್​ ಅಲರ್ಟ್ ಘೋಷಣೆಯಾಗಿದೆ. ಉತ್ತರ ಒಳನಾಡು ಪ್ರದೇಶಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ .

ಕರಾವಳಿ ಜಿಲ್ಲೆಗಳಲ್ಲಿ ಈ ಬಾರಿಗೆ ವಾಡಿಕೆಗೂ ಮೀರಿದ ಮಳೆಯಾಗಿದೆ. ಜುಲೈ ತಿಂಗಳ ಮಳೆಯಲ್ಲೇ ಕರಾವಳಿ ಜಿಲ್ಲೆಗಳಲ್ಲಿ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದೆ. ರಾಜ್ಯದಲ್ಲಿ ಮುಂದಿನ ಎರಡು ದಿನಗಳ ಕಾಲ ಆರೆಂಜ್​ ಅಲರ್ಟ್ ಘೋಷಣೆ ಮಾಡಲಾಗಿದೆ. ಹೀಗಾಗಿ ಕರಾವಳಿ ಭಾಗಗಳಲ್ಲಿ ಮುಂದಿನ ಎರಡು ದಿನಗಳ ಕಾಲ ಮಳೆ ಗಂಡಾಂತರ ಮುಂದುವರಿಯಲಿದೆ. ಮೀನುಗಾರರಿಗೆ ಸಮುದ್ರಕ್ಕೆ ತೆರಳದಂತೆ ಜಿಲ್ಲಾಡಳಿತಗಳು ಸೂಚನೆ ನೀಡಿವೆ.

ಇನ್ನು ಚಿಕ್ಕಮಗಳೂರು, ಶಿವಮೊಗ್ಗ, ಮೈಸೂರು ಹಾಗೂ ಕೊಡಗು ಜಿಲ್ಲೆಗಳಲ್ಲಿಯೂ ಭಾರೀ ಪ್ರಮಾಣದಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಇಂದು ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಅತೀ ಹೆಚ್ಚು ಪ್ರಮಾಣದಲ್ಲಿ ಮಳೆಯಾಗಿದೆ ಎನ್ನಲಾಗಿದೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿಂದು ಮೋಡ ಮುಸುಕಿದ ವಾತಾವರಣ ನಿರ್ಮಾಣವಾಗಿತ್ತು. ಕೆಲವು ಭಾಗಗಳಲ್ಲಿ ಮಾತ್ರ ಅಲ್ಪ ಪ್ರಮಾಣದಲ್ಲಿ ಮಳೆಯಾಗಿದೆ. ನಾಳೆ ಕೂಡ ಇದೇ ಪರಿಸ್ಥಿತಿ ಮುಂದುವರಿಯುವ ನಿರೀಕ್ಷೆ ಇದೆ .

ನೆರೆ ಹಾನಿ ತಡೆಗೆ ಸಹಾಯವಾಣಿ ಆರಂಭಿಸಿದ ಉಡುಪಿ ಜಿಲ್ಲಾಡಳಿತ

ಉಡುಪಿ : ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಕಳೆದೊಂದು ವಾರದಿಂದ ಧಾರಾಕಾರ ಮಳೆಯಾಗುತ್ತಿದೆ. ವಾರಗಳಿಂದ ಬೀಗ ಜಡಿದಿದ್ದ ಶಾಲೆಗಳು ಈಗ ಬಾಗಿಲು ತೆರೆದಿವೆ. ಮುಂಜಾಗ್ರತಾ ಕ್ರಮವಾಗಿ ಮೀನುಗಾರಿಕೆಗೆ ತೆರಳದಂತೆ ಕಡಲ ಮಕ್ಕಳಿಗೆ ಎಚ್ಚರಿಕೆ ನೀಡಲಾಗಿದೆ. ಸಿಎಂ ಬೊಮ್ಮಾಯಿ ಕೂಡ ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಿಗೆ ಭೇಟಿ ನೀಡಿ ನೆರೆ ಹಾನಿ ಪರಿಶೀಲನೆ ನಡೆಸಿದ್ದಾರೆ. ಅಲ್ಲದೇ ಉತ್ತರ ಕನ್ನಡ , ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಅಧಿಕಾರಿಗಳ ಜೊತೆಯಲ್ಲಿ ಸಭೆ ನಡೆಸಿದ ಸಿಎಂ ಬೊಮ್ಮಾಯಿ ನೆರೆ ಸಂತ್ರಸ್ತರಿಗೆ ಯಾವುದೇ ರೀತಿಯಲ್ಲಿ ಸಮಸ್ಯೆ ಆಗದಂತೆ ನೋಡಿಕೊಳ್ಳುವಂತೆ ಸೂಚನೆ ನೀಡಿದ್ದಾರೆ.

ಉಡುಪಿ ಜಿಲ್ಲಾಡಳಿತ ಕೂಡ ನೆರೆಯಿಂದಾಗಿ ಜನತೆಗೆ ಯಾವುದೇ ರೀತಿಯಲ್ಲಿ ತೊಂದರೆಯಾಗಾರದೆಂದು ಎಲ್ಲಾ ರೀತಿಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುತ್ತಿದೆ. ಈ ನಡುವೆ ಇಂದು ಮಳೆಯಿಂದಾಗಿ ಯಾವುದೇ ರೀತಿಯ ತುರ್ತು ಪರಿಸ್ಥಿತಿ ಉಂಟಾದ ಸಂದರ್ಭದಲ್ಲಿ ನೇರವಾಗಿ ಜಿಲ್ಲಾಡಳಿತದ ನೆರವನ್ನು ಪಡೆಯಲು ಅನುಕೂಲವಾಗುವ ನಿಟ್ಟಿನಲ್ಲಿ ದಿನದ 24 ಗಂಟೆಯೂ ಕಾರ್ಯ ನಿರ್ವಹಿಸುವ ಟೋಲ್​ ಫ್ರೀ ಸಹಾಯವಾಣಿಯನ್ನು ಆರಂಭಿಸಿದೆ. ಈ ಬಗ್ಗೆ ಉಡುಪಿ ಜಿಲ್ಲಾಧಿಕಾರಿ ಕೂರ್ಮಾರಾವ್​ ಎಂ ಮಾಹಿತಿ ನೀದಿದ್ದಾರೆ.

ನೆರೆ ಹಾನಿಗೆ ಸಿಲುಕಿದವರು ಕಂಟ್ರೋಲ್​ ರೂಂ 1077 ಹಾಗೂ ದೂರವಾಣಿ ಸಂಖ್ಯೆ 0820-2574202 ಸಂಖ್ಯೆಗೆ ಕರೆ ಮಾಡಿ ಉಡುಪಿ ಜಿಲ್ಲಾಡಳಿತದ ಸಹಾಯವನ್ನು ಪಡೆಯಬಹುದಾಗಿದೆ. ಇದರ ಜೊತೆಯಲ್ಲಿ ನೆರೆ ಹಾನಿಗೆ ಒಳಗಾದ ಪ್ರದೇಶಗಳ ಮಾಹಿತಿ ಸಿಕ್ಕಲ್ಲಿ ಆ ಪ್ರದೇಶದ ಫೋಟೋವನ್ನು ತೆಗೆದು ಸಾರ್ವಜನಿಕರು ನೇರವಾಗಿ ಉಡುಪಿ ಜಿಲ್ಲಾಡಳಿತಕ್ಕೆ ವಾಟ್ಸಾಪ್​ ಮಾಡಬಹುದಾಗಿದೆ. 9880831516 ಈ ಸಂಖ್ಯೆಗೆ ಮಳೆಯಿಂದ ಹಾನಿಗೊಳಗಾದ ಪ್ರದೇಶಗಳ ಫೋಟೋವನ್ನು ಹಂಚಿಕೊಳ್ಳುವ ಮೂಲಕ ಉಡುಪಿ ಜಿಲ್ಲಾಡಳಿತದ ನೆರೆ ಹಾನಿ ಪರಿಹಾರದ ಕಾರ್ಯಕ್ಕೆ ಕೈ ಜೋಡಿಸಬಹುದಾಗಿದೆ.

ಇದನ್ನು ಓದಿ : Pakistan Captain Babar Backs Kohli : “ಧೈರ್ಯವಾಗಿರು ಗೆಳೆಯ” ಪಾಕ್ ನಾಯಕನಿಂದ ವಿರಾಟ್ ಕೊಹ್ಲಿ ಪರ ಬ್ಯಾಟಿಂಗ್ !

ಇದನ್ನೂ ಓದಿ : Sushmita Sen : ಮಾಜಿ ವಿಶ್ವಸುಂದರಿ ಸುಶ್ಮಿತಾ ಸೇನ್ ಜೊತೆ ಮಾಜಿ ಐಪಿಎಲ್ ಬಾಸ್ ಲಲಿತ್ ಮೋದಿ ಡೇಟಿಂಗ್

Orange alert for two more days in coastal districts

Comments are closed.