ಬ್ರಹ್ಮಾವರ : ಕೊರೊನಾ ಲಾಕ್ ಡೌನ್ ಹಿನ್ನೆಲೆಯಲ್ಲಿ ಹೊರ ರಾಜ್ಯಗಳಿಂದ ಬಂದವರ ಮಾಹಿತಿಯನ್ನು ಉಡುಪಿ ಜಿಲ್ಲಾಡಳಿತ ಕಲೆ ಹಾಕುತ್ತಿದೆ. ಅಲ್ಲದೇ ಮುನ್ನೆಚ್ಚರಿಕಾ ಕ್ರಮವಾಗಿ ಕ್ವಾರಂಟೈನ್ ಗೆ ಒಳಪಡಿಸಲಾಗುತ್ತಿದೆ.

ಈ ನಿಟ್ಟಿನಲ್ಲಿ ಬ್ರಹ್ಮಾವರದ ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ನೋಂದಣಿ ಕೇಂದ್ರವನ್ನು ಆರಂಭಿಸಲಾಗಿದೆ. ನೋಂದಣಿ ಕೇಂದ್ರಕ್ಕೆ ಉಡುಪಿ ಶಾಸಕ ಕೆ.ರಘುಪತಿ ಭಟ್ ಅವರು ಭೇಟಿ ನೀಡಿದ್ದಾರೆ.

ತಾಲೂಕು ಆಡಳಿತ, ತಹಶೀಲ್ದಾರ್ ಹಾಗೂ ಕಂದಾಯ ನಿರೀಕ್ಷಕರು ನೋಂದಣಿ ಕೇಂದ್ರದಲ್ಲಿ ಮಾಡಿಕೊಂಡಿರುವ ವ್ಯವಸ್ಥೆಯ ಬಗ್ಗೆ ಪರಿಶೀಲನೆ ನಡೆಸಿದ್ದಾರೆ.

ಬ್ರಹ್ಮಾವರ ತಹಶೀಲ್ದಾರ್, ಕಿರಣ್ ಗೋರಯ್ಯ, ಕಂದಾಯ ನಿರೀಕ್ಷರಾದ ಲಕ್ಷ್ಮೀನಾರಾಯಣ ಭಟ್ ಮತ್ತು ಅಧಿಕಾರಿಗಳು ಹಾಗೂ ನೋಂದಣಿ ಸಿಬ್ಬಂಧಿಗಳು ಉಪಸ್ಥಿತರಿದ್ದರು.
