ಶಿರಸಿ : ಕೊರೊನಾ ವೈರಸ್ ಸೋಂಕಿನ ಎಫೆಕ್ಟ್ ಇದೀಗ ಶಿರಸಿಯ ಮಾರಿಕಾಂಬಾ ದೇವಸ್ಥಾನಕ್ಕೂ ತಟ್ಟಿದೆ. ಕೊರೊನಾ ವೈರಸ್ ಹರಡುವ ಭೀತಿಯ ಹಿನ್ನೆಲೆಯಲ್ಲಿ ಶಿರಸಿಯ ಮಾರಿಕಾಂಬಾ ದೇಗುಲವನ್ನು ಸೀಲ್ ಡೌನ್ ಮಾಡಲಾಗಿದೆ. ಒಂದು ವಾರಗಳ ಕಾಲ ದೇವಸ್ಥಾನ ಬಂದ್ ಆಗಲಿದೆ.

ದೇವಸ್ಥಾನದ ಪಕ್ಕದ ಮನೆಯ ವ್ಯಕ್ತಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ವ್ಯಕ್ತಿ ನಿತ್ಯವೂ ದೇವಸ್ಥಾನಕ್ಕೆ ಬಂದು ಹೋಗುತ್ತಿದ್ದರು. ಈ ಹಿನ್ನೆಲೆಯಲ್ಲೀಗ ಸೀಲ್ ಡೌನ್ ಮಾಡಲಾಗಿದೆ. ದೇವಸ್ಥಾನವನ್ನು ಒಂದು ವಾರಗಳ ಕಾಲ ಬಂದ್ ಮಾಡಲಾಗುತ್ತಿದ್ದು, ಈ ವೇಳೆಯಲ್ಲಿ ಸ್ಯಾನಿಟೈಸ್ ಮಾಡಲಾಗುತ್ತದೆ. ನಂತರದಲ್ಲಿ ಪರಿಸ್ಥಿತಿಯನ್ನು ನೋಡಿಕೊಂಡು ದೇವಸ್ಥಾನವನ್ನು ತೆರೆಯಲಾಗುತ್ತದೆ. ವ್ಯಕ್ತಿಯ ಜೊತೆಗೆ ಸಂಪರ್ಕದಲ್ಲಿದ್ದವರನ್ನು ಕ್ವಾರಂಟೈನ್ ಗೆ ಒಳಪಡಿಸಲಾಗುತ್ತಿದ್ದು, ದೇವಸ್ಥಾನದಲ್ಲಿ ಕೊರೊನಾ ಸೋಂಕು ಹರಡದಂತೆ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗಿದೆ.