ಪತ್ರಕರ್ತರ ರಾಜ್ಯ ಸಮ್ಮೇಳನ : ಆಮಂತ್ರಣ ಪತ್ರಿಕೆ ಬಿಡುಗಡೆ

0

ಮಂಗಳೂರು : 35ನೇ ರಾಜ್ಯ ಪತ್ರಕರ್ತರ ಸಮ್ಮೇಳನ ಈ ಬಾರಿ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನಲ್ಲಿ ನಡೆಯಲಿದೆ. ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ ಆಶ್ರಯದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸಹಯೋಗದಲ್ಲಿ ಮಾರ್ಚ್ 7 ಮತ್ತು 8 ರಂದು ಕುದ್ಮುಲ್ ರಂಗರಾವ್ ಪುರಭವನದಲ್ಲಿ ನಡೆಯಲಿರೋ ಪತ್ರಕರ್ತರ ಸಮ್ಮೇಳನದ ಆಮಂತ್ರಣ ಪತ್ರಿಕೆಯನ್ನು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಬಿಡುಗಡೆ ಮಾಡಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಿಂಧೂ ಬಿ ರೂಪೇಶ್ ,ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ಉಪಾಧ್ಯಕ್ಷ ಮದನ ಗೌಡ, ಅಪರ ಜಿಲ್ಲಾಧಿಕಾರಿ ಎಂ.ಜೆ.ರೂಪ, ಪಿಲಿಕುಳ ನಿಸರ್ಗಧಾಮದ ಆಡಳಿತ ನಿರ್ದೇಶಕಿ ಮೇಘನಾ ಆರ್,  ಜಿಲ್ಲಾ ವಾರ್ತಾಧಿಕಾರಿ ಖಾದರ್ ಷಾ, ಸಿಟಿ ಬಸ್ ಮಾಲೀಕರ  ಸಂಘದ ಅಧ್ಯಕ್ಷ ದಿಲ್ ರಾಜ್ ಆಳ್ವ, ಜಯರಾಮ ಶೇಖರ್, ದಕ್ಷಿಣ ಕನ್ನಡ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ, ಪ್ರಧಾನ ಕಾರ್ಯದರ್ಶಿ ಇಬ್ರಾಹಿಂ ಅಡ್ಕಸ್ಥಳ ,ರಾಜ್ಯ ಸಮಿತಿ ಸದಸ್ಯ ಜಗನ್ನಾಥ ಶೆಟ್ಟಿ ಬಾಳ, ಪದಾಧಿಕಾರಿಗಳಾದ ಪುಷ್ಪರಾಜ್ ಬಿ ಎನ್,ಜೀತೇಂದ್ರ ಕುಂದೇಶ್ವರ ,ಭಾಸ್ಕರ ರೈ ಕಟ್ಟ, ದಯಾನಂದ ಕುಕ್ಕಾಜೆ ,ರಾಜೇಶ್ ಶೆಟ್ಟಿ ,ಪತ್ರಕರ್ತ ಸುಖ್ ಪಾಲ್ ಪೊಳಲಿ ಸೇರಿದಂತೆ  ವಿವಿಧ  ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು .

Leave A Reply

Your email address will not be published.