ತುಮಕೂರು : ರಾಷ್ಟ್ರೀಯ ಸ್ವಯಂ ಸೇವಕ ಸಂಘ, ಐಟಿ ಮಿಲನ್ ತುಮಕೂರು, ಪರ್ಯಾವರಣ ಸಂರಕ್ಷಣ ಗತಿವಿಧಿ, ತುಮಕೂರು ಹಾಗೂ ಬ್ಯೂಗಲ್ ಟ್ರಸ್ಟ್ ತುಮಕೂರು ಇವರ ಆಶ್ರಯದಲ್ಲಿ ವಿಶ್ವ ಪರಿಸರ ದಿನಾಚರಣೆಯನ್ನು ವಿಶಿಷ್ಟವಾಗಿ ಆಚರಿಸಲಾಯಿತು.
ನಗರದ ಶಿರಾಗೇಟ್ ಬಳಿಯಲ್ಲಿರುವ ಶ್ರೀದೇವಿ ಇಂಜಿನಿಯರಿಂಗ್ ಕಾಲೇಜಿನ ಹಿಂಭಾಗದ ಜಾಗದಲ್ಲಿ ಗಿಡಗಳನ್ನು ನೆಡುವ ಮೂಲಕ ಪರಿಸರ ದಿನಾಚರಣೆ ಆಚರಿಸಲಾಯಿತು.
ಇತ್ತೀಚಿನ ದಿನಗಳಲ್ಲಿ ಪರಿಸರ ನಾನಾ ಕಾರಣದಿಂದ ಕಲುಷಿತವಾಗುತ್ತಿದೆ. ಕೊರೊನಾ ಸಂಕಷ್ಟದ ಕಾಲದಲ್ಲಿ ಆಮ್ಲಜನಕ ಸಿಗದೆ ಜನರು ಪರದಾಡುವ ಸ್ಥಿತಿ ನಿರ್ಮಾಣವಾಗಿತ್ತು. ಇಂತಹ ಸ್ಥಿತಿ ಮರುಕಳಿಸ ಬಾರದು ಅನ್ನೋ ಕಾರಣಕ್ಕೆ ಗಿಡನೆಡುವ ಮೂಲಕ ಜನರಲ್ಲಿ ಜಾಗೃತಿ ಮೂಡಿಸಲಾಯಿತು.