ಮಂಗಳವಾರ, ಏಪ್ರಿಲ್ 29, 2025
Homedistrict Newscar accident at anekal : ಮರಕ್ಕೆ ಡಿಕ್ಕಿ ಹೊಡೆದ ಕಾರು : ಇಬ್ಬರು ದುರ್ಮರಣ,...

car accident at anekal : ಮರಕ್ಕೆ ಡಿಕ್ಕಿ ಹೊಡೆದ ಕಾರು : ಇಬ್ಬರು ದುರ್ಮರಣ, ಮೂವರ ಸ್ಥಿತಿ ಗಂಭೀರ

- Advertisement -

ಆನೇಕಲ್​ : car accident at anekal : ಮಳೆಗಾಲದ ಈ ಸಂದರ್ಭದಲ್ಲಿ ಎಷ್ಟು ಎಚ್ಚರಿಕೆಯಿಂದ ವಾಹನ ಚಲಾಯಿಸಿದರೂ ಸಹ ಒಂದಿಲ್ಲೊಂದು ಅವಘಡಗಳು ಸಂಭವಿಸುತ್ತಲೇ ಇರುತ್ತದೆ. ಈ ಸಮಯದಲ್ಲಿ ರಸ್ತೆ ಅಪಘಾತಗಳ ಸಂಖ್ಯೆ ಕೂಡ ಹೆಚ್ಚಿರುತ್ತದೆ. ಆನೇಕಲ್​​ನ ಸೋಲೂರು ಗೇಟ್​ ಬಳಿಯಲ್ಲಿ ರಸ್ತೆ ಅಪಘಾತವೊಂದು ಸಂಭವಿಸಿದೆ. ರಸ್ತೆಗೆ ಅಂಟಿಕೊಂಡಿದ್ದ ಮರಕ್ಕೆ ಕಾರು ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ದಾರುಣವಾಗಿ ಮೃತಪಟ್ಟ ಘಟನೆಯೊಂದು ವರದಿಯಾಗಿದೆ.

ಕಾರು ಅಪಘಾತದಲ್ಲಿ ಇಬ್ಬರು ಮೃತಪಟ್ಟಿದ್ದರೆ ಮೂವರ ಸ್ಥಿತಿ ಗಂಭೀರವಾಗಿದೆ ಎನ್ನಲಾಗಿದೆ. ಮೃತ ಪಟ್ಟವರನ್ನು ಹೊಂಗಸಂದ್ರ ನಿವಾಸಿ ಮೂವತ್ತೊಂದು ವರ್ಷದ ಶಶಿಧರ್​ ಹಾಗೂ ಕುಣಿಗಲ್​ ಮೂಲದ ಮೂವತ್ನಾಲ್ಕು ವರ್ಷದ ಭೈರೇಶ್​ ಎಂದು ಗುರುತಿಸಲಾಗಿದೆ. ಮೃತರಿಬ್ಬರೂ ಕೂಡ್ಲು ಬಳಿಯ ಗಾರ್ಮೆಂಟ್ಸ್​ವೊಂದರ ನೌಕರರಾಗಿದ್ದರು ಎನ್ನಲಾಗಿದೆ.

ಇನ್ನು ಕಾರಿನ ಹಿಂಬಧಿ ಸೀಟಿನಲ್ಲಿ ಕುಳಿತುಕೊಂಡಿದ್ದ ರಾಹುಲ್​. ಮಿಥುನ್​ ಹಾಗೂ ತಿಪ್ಪೇಶ್​ ಗಂಭೀರವಾಗಿ ಗಾಯಗೊಂಡಿದ್ದು ಇವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಗಾಯಗೊಂಡ ಮೂವರ ಸ್ಥಿತಿ ಚಿಂತಾಜನಕವಾಗಿದೆ ಎಂದು ವೈದ್ಯರು ಮಾಹಿತಿ ನೀಡಿದ್ದಾರೆ.

ಘಟನೆ ಬಗ್ಗೆ ಮಾಹಿತಿ ತಿಳಿಯುತ್ತಿದ್ದಂತೆಯೇ ಆನೇಕಲ್​ ಠಾಣಾ ಪೊಲೀಸರು ಸ್ಥಳಕ್ಕೆ ಧಾವಿಸಿದ್ದಾರೆ. ಹಾಗೂ ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ರಸ್ತೆಗೆ ಅಂಟಿಕೊಂಡೇ ಮರ ಇರುವುದರ ಬಗ್ಗೆ ಇಲ್ಲಿನ ನಿವಾಸಿಗಳು ಅನೇಕ ಬಾರಿ ವಲಯ ಅರಣ್ಯಾಧಿಕಾರಿಗಳಿಗೆ ದೂರು ನೀಡಿದ್ದರು ಎನ್ನಲಾಗಿದೆ. ಆದರೆ ಈ ರೀತಿಯ ಮರಗಳನ್ನು ವಿಲೇವಾರಿ ಮಾಡುವ ಬಗ್ಗೆ ವಲಯ ಅರಣ್ಯಾಧಿಕಾರಿಗಳು ನಿರ್ಲಕ್ಷ್ಯ ತೋರಿರುವುದೇ ಈ ಅವಘಡಕ್ಕೆ ಕಾರಣ ಎನ್ನವುದು ಸ್ಥಳೀಯ ನಿವಾಸಿಗಳ ಆರೋಪವಾಗಿದೆ.

ಇದನ್ನು ಓದಿ : ಇಂಗ್ಲೆಂಡ್ ನೆಲದಲ್ಲಿ ಸರಣಿ ಗೆಲ್ಲಿಸಿಕೊಟ್ಟ ‘’ಪಾಂಡು’’ಗೆ ವಿಶೇಷ ಅಭಿನಂದನೆ ತಿಳಿಸಿದ ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ

ಇದನ್ನೂ ಓದಿ : Suryakumar Yadav Success :ಸೂರ್ಯಕುಮಾರ್ ಯಾದವ್ ಯಶಸ್ಸಿನ ಹಿಂದೆ ರೋಹಿತ್ ಶರ್ಮಾ ಪಾತ್ರ ; ರಹಸ್ಯ ಬಿಚ್ಚಿಟ್ಟ SKY !

two died in car accident at anekal

RELATED ARTICLES

Most Popular