helpline to prevent rain damage : ನೆರೆ ಹಾನಿ ತಡೆಗೆ ಸಹಾಯವಾಣಿ ಆರಂಭಿಸಿದ ಉಡುಪಿ ಜಿಲ್ಲಾಡಳಿತ

ಉಡುಪಿ : helpline to prevent rain damage : ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಕಳೆದೊಂದು ವಾರದಿಂದ ಧಾರಾಕಾರ ಮಳೆಯಾಗುತ್ತಿದೆ. ವಾರಗಳಿಂದ ಬೀಗ ಜಡಿದಿದ್ದ ಶಾಲೆಗಳು ಈಗ ಬಾಗಿಲು ತೆರೆದಿವೆ. ಮುಂಜಾಗ್ರತಾ ಕ್ರಮವಾಗಿ ಮೀನುಗಾರಿಕೆಗೆ ತೆರಳದಂತೆ ಕಡಲ ಮಕ್ಕಳಿಗೆ ಎಚ್ಚರಿಕೆ ನೀಡಲಾಗಿದೆ. ಸಿಎಂ ಬೊಮ್ಮಾಯಿ ಕೂಡ ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಿಗೆ ಭೇಟಿ ನೀಡಿ ನೆರೆ ಹಾನಿ ಪರಿಶೀಲನೆ ನಡೆಸಿದ್ದಾರೆ. ಅಲ್ಲದೇ ಉತ್ತರ ಕನ್ನಡ , ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಅಧಿಕಾರಿಗಳ ಜೊತೆಯಲ್ಲಿ ಸಭೆ ನಡೆಸಿದ ಸಿಎಂ ಬೊಮ್ಮಾಯಿ ನೆರೆ ಸಂತ್ರಸ್ತರಿಗೆ ಯಾವುದೇ ರೀತಿಯಲ್ಲಿ ಸಮಸ್ಯೆ ಆಗದಂತೆ ನೋಡಿಕೊಳ್ಳುವಂತೆ ಸೂಚನೆ ನೀಡಿದ್ದಾರೆ.


ಉಡುಪಿ ಜಿಲ್ಲಾಡಳಿತ ಕೂಡ ನೆರೆಯಿಂದಾಗಿ ಜನತೆಗೆ ಯಾವುದೇ ರೀತಿಯಲ್ಲಿ ತೊಂದರೆಯಾಗಾರದೆಂದು ಎಲ್ಲಾ ರೀತಿಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುತ್ತಿದೆ. ಈ ನಡುವೆ ಇಂದು ಮಳೆಯಿಂದಾಗಿ ಯಾವುದೇ ರೀತಿಯ ತುರ್ತು ಪರಿಸ್ಥಿತಿ ಉಂಟಾದ ಸಂದರ್ಭದಲ್ಲಿ ನೇರವಾಗಿ ಜಿಲ್ಲಾಡಳಿತದ ನೆರವನ್ನು ಪಡೆಯಲು ಅನುಕೂಲವಾಗುವ ನಿಟ್ಟಿನಲ್ಲಿ ದಿನದ 24 ಗಂಟೆಯೂ ಕಾರ್ಯ ನಿರ್ವಹಿಸುವ ಟೋಲ್​ ಫ್ರೀ ಸಹಾಯವಾಣಿಯನ್ನು ಆರಂಭಿಸಿದೆ. ಈ ಬಗ್ಗೆ ಉಡುಪಿ ಜಿಲ್ಲಾಧಿಕಾರಿ ಕೂರ್ಮಾರಾವ್​ ಎಂ ಮಾಹಿತಿ ನೀದಿದ್ದಾರೆ.


ನೆರೆ ಹಾನಿಗೆ ಸಿಲುಕಿದವರು ಕಂಟ್ರೋಲ್​ ರೂಂ 1077 ಹಾಗೂ ದೂರವಾಣಿ ಸಂಖ್ಯೆ 0820-2574202 ಸಂಖ್ಯೆಗೆ ಕರೆ ಮಾಡಿ ಉಡುಪಿ ಜಿಲ್ಲಾಡಳಿತದ ಸಹಾಯವನ್ನು ಪಡೆಯಬಹುದಾಗಿದೆ. ಇದರ ಜೊತೆಯಲ್ಲಿ ನೆರೆ ಹಾನಿಗೆ ಒಳಗಾದ ಪ್ರದೇಶಗಳ ಮಾಹಿತಿ ಸಿಕ್ಕಲ್ಲಿ ಆ ಪ್ರದೇಶದ ಫೋಟೋವನ್ನು ತೆಗೆದು ಸಾರ್ವಜನಿಕರು ನೇರವಾಗಿ ಉಡುಪಿ ಜಿಲ್ಲಾಡಳಿತಕ್ಕೆ ವಾಟ್ಸಾಪ್​ ಮಾಡಬಹುದಾಗಿದೆ. 9880831516 ಈ ಸಂಖ್ಯೆಗೆ ಮಳೆಯಿಂದ ಹಾನಿಗೊಳಗಾದ ಪ್ರದೇಶಗಳ ಫೋಟೋವನ್ನು ಹಂಚಿಕೊಳ್ಳುವ ಮೂಲಕ ಉಡುಪಿ ಜಿಲ್ಲಾಡಳಿತದ ನೆರೆ ಹಾನಿ ಪರಿಹಾರದ ಕಾರ್ಯಕ್ಕೆ ಕೈ ಜೋಡಿಸಬಹುದಾಗಿದೆ.

ಇದನ್ನು ಓದಿ : Robin Uthappa blessed with a baby girl : ರಾಬಿನ್ ಉತ್ತಪ್ಪಗೆ ಹೆಣ್ಣು ಮಗು, 2ನೇ ಮಗುವಿಗೆ ತಂದೆಯಾದ ಕೊಡಗಿನ ವೀರ

ಇದನ್ನೂ ಓದಿ : Pakistan Captain Babar Backs Kohli : “ಧೈರ್ಯವಾಗಿರು ಗೆಳೆಯ” ಪಾಕ್ ನಾಯಕನಿಂದ ವಿರಾಟ್ ಕೊಹ್ಲಿ ಪರ ಬ್ಯಾಟಿಂಗ್ !

Udupi district administration started a helpline to prevent rain damage

Comments are closed.