Udupi Heavy rain Red Alert School College Holiday : ಉಡುಪಿ : ಕರಾವಳಿ ಜಿಲ್ಲೆಗಳು ಮಳೆಯ ಆರ್ಭಟಕ್ಕೆ ತತ್ತರಿಸಿ ಹೋಗಿವೆ. ಹವಾಮಾಣ ಇಲಾಖೆಯ ಮುನ್ಸೂಚನೆಯಂತೆ ರೆಡ್ ಅಲರ್ಟ್ ಘೋಷಿಸಲಾಗಿದ್ದು, ಉಡುಪಿ ಜಿಲ್ಲೆಯಾದ್ಯಂತ ಜುಲೈ 9ರಂದು ಶಾಲೆ, ಕಾಲೇಜುಗಳಿಗೆ ರಜೆಯನ್ನು ಘೋಷಣೆ ಮಾಡಿ ಜಿಲ್ಲಾಧಿಕಾರಿ ವಿದ್ಯಾ ಕುಮಾರಿ ಅವರು ಆದೇಶ ಹೊರಡಿಸಿದ್ದಾರೆ.

ಉಡುಪಿ ಜಿಲ್ಲೆಯಾದ್ಯಂತ ಕಳೆದ ಕೆಲವು ದಿನಗಳಿಂದಲೂ ನಿರಂತರವಾಗಿ ಮಳೆ ಸುರಿಯುತ್ತಿದೆ. ಹವಾಮಾನ ಇಲಾಖೆ ಜುಲೈ 9 ರಂದು ಭಾರೀ ಮಳೆ ಸುರಿಯುವ ಕುರಿತು ಮುನ್ಸೂಚನೆಯನ್ನು ನೀಡಿದೆ. ಈ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿನ ಅಂಗನವಾಡಿ, ಸರಕಾರಿ, ಅನುದಾನಿತ, ಅನುದಾನ ರಹಿತ, ಪ್ರಾಥಮಿಕ, ಪ್ರೌಢ ಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ರಜೆಯನ್ನು ಘೋಷಣೆ ಮಾಡಲಾಗಿದೆ.
ಇದನ್ನೂ ಓದಿ : 7ನೇ ವೇತನ ಆಯೋಗ ವರದಿ ಅಗಸ್ಟ್‌ನಿಂದ ಜಾರಿ : ವೇತನ ಹೆಚ್ಚಳದ ನಿರೀಕ್ಷೆಯಲ್ಲಿದ್ದವರಿಗೆ ಭರ್ಜರಿ ಗುಡ್‌ನ್ಯೂಸ್

ಆದರೆ ಪದವಿ, ಡಿಪ್ಲೋಮಾ, ಸ್ನಾತಕೋತ್ತರ ಪದವಿ, ಐಟಿಐ, ಇಂಜಿನಿಯರಿಂಗ್ ಕಾಲೇಜುಗಳಿಗೆ ರಜೆ ಘೋಷಣೆ ಮಾಡಿಲ್ಲ. ಆದರೆ ಶಾಲೆಗಳ ಮುಖುಸ್ಥರು ಕೆಲವು ನಿಯಮಗಳನ್ನು ಕಡ್ಡಾಯವಾಗಿ ಪಾಲನೆ ಮಾಡುವಂತೆ ಸೂಚಿಸಲಾಗಿದೆ. ಆದರೆ ಯಾವುದೇ ಕಾರಣಕ್ಕೂ ವಿದ್ಯಾರ್ಥಿಗಳಿಗೆ ಶಾಲೆಯಲ್ಲಿ ಹಾಜರಾತಿಯನ್ನು ಕಡ್ಡಾಯಗೊಳಿಸುವಂತಿಲ್ಲ ಎಂದು ಆದೇಶದಲ್ಲಿ ತಿಳಿಸಲಾಗಿದೆ.
ಇದನ್ನೂ ಓದಿ : 7ನೇ ವೇತನ ಹೆಚ್ಚಳ ಯಾವಾಗ ಜಾರಿ ? ಯಾರಿಗೆ ಎಷ್ಟು ಹೆಚ್ಚಳ ? ಇಲ್ಲಿದೆ ಸಂಪೂರ್ಣ ಮಾಹಿತಿ

ಉಡುಪಿ ನಗರದಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಕಲ್ಸಂಕ ಬೈಲಕೆರೆ, ಕರಂಬಳ್ಳಿ, ಶ್ರೀ ಕೃಷ್ಣಮಠದ ಪಾರ್ಕಿಂಗ್, ಮಣಿಪಾಲ, ನಿಟ್ಟೂರು, ಮಲ್ಪೆ, ಪಾಡಿಗಾರು, ಗುಂಡಿಬೈಲು ಸೇರಿದಂತೆ ಬಹುತೇಕ ಪ್ರದೇಶಗಳು ಜಲಾವೃತಗೊಂಡಿದೆ. ಜನರು ಮನೆಯಿಂದ ಹೊರಗೆ ಬರಲು ಭಯ ಪಡುವ ಸ್ಥಿತಿ ನಿರ್ಮಾಣವಾಗಿದೆ. ಅದ್ರಲ್ಲೂ ನೆರೆ ಹಾವಳಿ ಸಿಲುಕಿರುವ ಮನೆಗಳಲ್ಲಿ ವಾಸಿಸುತ್ತಿರುವ ಜನರನ್ನು ಸುರಕ್ಷಿತ ಸ್ಥಳಕ್ಕೆ ಸಾಗಿಸುವ ಕಾರ್ಯ ನಡೆಯುತ್ತಿದೆ.
ಇದನ್ನೂ ಓದಿ : Gruha Lakshmi Yojana : ಗೃಹಲಕ್ಷ್ಮೀ ಯೋಜನೆ ಹಣ ಜಮೆ ಆಗಿಲ್ವಾ : ಚಿಂತೆ ಬಿಡಿ ಎನ್‌ಪಿಸಿಐ ಚೆಕ್ ಮಾಡಿ
ಬ್ರಹ್ಮಾವರ ತಾಲೂಕಿನ ಬ್ರಹ್ಮಾವರ, ಉಪ್ಪಿನಕೋಟೆ, ಬಾರಕೂರು, ಕೋಟ, ಸಾಲಿಗ್ರಾಮ, ಸಾಯಿಬ್ರಕಟ್ಟೆ, ಮಂದಾರ್ತಿ, ಕೊಕ್ಕರ್ಣೆ ಸೇರಿದಂತೆ ಹಲವು ಕಡೆಗಳಲ್ಲಿ ಧಾರಾಕಾರ ಮಳೆ ಸುರಿಯುತ್ತಿದೆ. ಇನ್ನು ಕುಂದಾಪುರ ತಾಲೂಕಿನ ಹಲವು ಕಡೆಗಳಲ್ಲಿ ಭಾರೀ ಪ್ರಮಾಣದಲ್ಲಿ ಮಳೆ ಸುರಿಯುತ್ತಿದ್ದು, ನದಿಗಳು ಉಕ್ಕಿ ಹರಿಯುತ್ತಿವೆ. ವಾರಾಹಿ, ಸೀತಾ, ಸ್ವರ್ಣ ನದಿಯಲ್ಲಿಯೂ ನೀರಿನ ಮಟ್ಟ ಹೆಚ್ಚಳವಾಗಿದೆ.
Udupi Heavy rain Red Alert School College Holiday Declared