ಹೊರಗುತ್ತಿಗೆ ಕಾರ್ಮಿಕನಿಗೆ ಕೊರೊನಾ ಸೋಂಕು : ಉಡುಪಿ ಜಿಲ್ಲಾ ಪಂಚಾಯತ್ ಸೀಲ್ ಡೌನ್ !

0

ಉಡುಪಿ : ಹೊರಗುತ್ತಿಗೆ ನೌಕರನಿಗೆ ಕೊರೊನಾ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲಾ ಪಂಚಾಯತ್ ನ್ನು ಸೀಲ್ ಡೌನ್ ಮಾಡಲಾಗಿದ್ದು, ಕಚೇರಿಯನ್ನು ಸಂಪೂರ್ಣವಾಗಿ ಸ್ಯಾನಿಟೈಸ್ ಮಾಡಲಾಗುವುದು ಎಂದು ಜಿಲ್ಲಾ ಪಂಚಾಯತ್ ಸಿಇಓ ಪ್ರೀತಿ ಗೆಹ್ಲೊಟ್ ತಿಳಿಸಿದ್ದಾರೆ.

ಕೊರೊನಾ ಸೋಂಕಿನ ವ್ಯಕ್ತಿ ಮೇ 19ರಂದು ಕೊನೆಯ ಬಾರಿಗೆ ಜಿಲ್ಲಾ ಪಂಚಾಯತ್ ಗೆ ಭೇಟಿ ಕೊಟ್ಟಿದ್ದಾನೆ. ಹೊರಗುತ್ತಿಗೆ ನೌಕರನಾಗಿರುವ ವ್ಯಕ್ತಿ ಕಚೇರಿಗೆ ಬಂದಿದ್ದಾಗ ಶೀತ ಮತ್ತು ಕೆಮ್ಮಿನ ಲಕ್ಷಣಗಳಿತ್ತು.

ಕೊರೊನಾ ಸೋಂಕಿನ ಲಕ್ಷಣಗಳಿರುವ ಹಿನ್ನೆಲೆಯಲ್ಲಿ ವ್ಯಕ್ತಿಯ ಗಂಟಲು ದ್ರವನ್ನು ತಪಾಸಣೆಗೆ ಒಳಪಡಿಸಲಾಗಿತ್ತು. ಇದೀಗ ನೌಕರನಿಗೆ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ.

ಈ ಹಿನ್ನೆಲೆಯಲ್ಲೀಗ ಮೇ 26ರಂದು ಜಿಲ್ಲಾ ಪಂಚಾಯತ್ ಕಚೇರಿ ಸಂಪೂರ್ಣವಾಗಿ ಮುಚ್ಚಿರುತ್ತದೆ. ಸಿಇಓ ಸಹಿತ ಯಾವುದೇ ಸಿಬ್ಬಂಧಿಗಳು ಕಚೇರಿಗೆ ಬರುವುದಿಲ್ಲ. ಜಿಲ್ಲಾ ಪಂಚಾಯತ್ ಕಚೇರಿಯನ್ನು ಕಳೆದೈದು ದಿನಗಳಿಂದಲೂ ಅನೇಕ ಬಾರಿ ಸ್ಯಾನಿಟೈಸ್ ಮಾಡಲಾಗಿದ್ದು, ನಾಳೆ ಕೂಡ ಮತ್ತೊಮ್ಮೆ ಕಚೇರಿಯನ್ನು ಸಂಪೂರ್ಣವಾಗಿ ಸ್ಯಾನಿಟೈಸ್ ಮಾಡಲಾಗುತ್ತದೆ ಎಂದು ಅವರು ತಿಳಿಸಿದ್ದಾರೆ.

Leave A Reply

Your email address will not be published.