Mysore Dussehra : ವಿಶ್ವ ವಿಖ್ಯಾತ ಮೈಸೂರು ದಸರಾ- ಯುವ ಸಂಭ್ರಮಕ್ಕೆ ಚಾಲನೆ

World famous Mysore Dussehra : ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವ 2022 ಇದರ ಯುವ ದಸರಾಗೆ ಮುನ್ನುಡಿ ಬರೆಯಲಾಗಿದೆ‌‌. ಯುವ ಸಂಭ್ರಮಕ್ಕೆ ಇಂದು ಚಾಲನೆ ನೀಡುವ ಮೂಲಕ ಯುವ ದಸರಾವನ್ನು ಅಧಿಕೃತವಾಗಿ ಶುರು ಮಾಡಲಾಗಿದೆ. ದೀಪ ಬೆಳೆಗುವ ಮೂಲಕ ಯುವ ಸಂಭ್ರಮ ಕಾರ್ಯಕ್ರಮಕ್ಕೆ ಉಸ್ತುವಾರಿ ಸಚಿವ ಎಸ್.ಟಿ ಸೋಮಶೇಖರ್ ಚಾಲನೆ ನೀಡಿದ್ದಾರೆ.

ನಗರದ ಮಾನಸ ಗಂಗೋತ್ರಿ ಬಯಲು ರಂಗ ಮಂದಿರದಲ್ಲಿ ಈ ಯುವ ಸಂಭ್ರಮ ಕಾರ್ಯಕ್ರಮ ನಡೆಯುತ್ತಿದೆ. ನಾಗರಿ, ಕಂಸಾಳೆ ಡೊಳ್ಳು ಭಾರಿಸುವ ಮೂಲಕ ಕಾರ್ಯಕ್ರಮಕ್ಕೆ ಗಣ್ಯರು ಅಧಿಕೃತ ಚಾಲನೆ ನೀಡಿದ್ದಾರೆ. ಕಾರ್ಯಕ್ರಮಕ್ಕೆ ಬಿಳಿಯ ಶರ್ಟ್, ಪಂಚೆ ಧರಿಸಿ ನಟ ಡಾಲಿ ಧನಂಜಯ ವಿಶೇಷ ಅತಿಥಿಯಾಗಿ ಆಗಮಿಸಿದ್ದರು. ಇಂದಿನಿಂದ 8 ದಿನಗಳ ಕಾಲ ನಗರದ ವಿವಿಧ ಕಾಲೇಜು ವಿದ್ಯಾರ್ಥಿಗಳಿಂದ ಇಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ.

ಯುವ ಸಂಭ್ರಮದಲ್ಲಿ ಆಯ್ಕೆಯಾದ ತಂಡಗಳಿಗೆ ಯುವ ದಸರಾದಲ್ಲಿ ಕಾರ್ಯಕ್ರಮಕ್ಕೆ ಅವಕಾಶವನ್ನು ಕಲ್ಪಿಸಿಕೊಡಲಾಗುತ್ತದೆ. ಹೀಗಾಗಿ ವಿದ್ಯಾರ್ಥಿಗಳು ಬಹಳ ಆಸಕ್ತಿಯಿಂದ ಈ ಕಾರ್ಯಕ್ರಮದಲ್ಲಿ ಭಾಗಿಯಾಗಲು ಉತ್ಸುಹುಕರಾಗಿದ್ದಾರೆ. ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿರುವುದರಿಂದ ಹೆಚ್ಚಿನ ಪೊಲೀಸ್ ಭದ್ರತೆಯನ್ನು ಸಹ ನಿಯೋಜಿಸಲು‌ ನಿರ್ಧರಿಸಲಾಗಿದೆ.

ಈಗಾಗಲೇ ಮೈಸೂರು ಅರಮನೆ ಸೇರಿದಂತೆ ಇಡೀ ನಗರದಾದ್ಯಂತ ದಸರಾ ಸಂಭ್ರಮ ಕಳೆಗಟ್ಟಿದೆ‌. ಬೀದಿ ಬೀದಿಗಳಲ್ಲಿ ವಿದ್ಯುತ್ ದೀಪಗಳದ ಅಲಂಕಾರ ಮಾಡಲಾಗಿದೆ. ರಾಜ್ಯ ಮಾತ್ರವಲ್ಲದೆ, ಹೊರ ರಾಜ್ಯ, ವಿದೇಶಗಳಿಂದಲೂ ಪ್ರವಾಸಿಗರು ದಸರಾ ವೈಭವ ಕಣ್ತುಂಬಿಕೊಳ್ಳಲು ಅರಮನೆ ನಗರಿಗೆ ಆಗಮಿಸುತ್ತಿದ್ದಾರೆ. ಭದ್ರತೆ ದೃಷ್ಟಿಯಿಂದ ಹೆಚ್ಚುವರಿ ಪೊಲೀಸರನ್ನು ಹೊರಜಿಲ್ಲೆಗಳಿಂದ ಕರೆಸಿಕೊಳ್ಳಲಾಗುತ್ತಿದೆ.

ಈಗಾಗಲೇ ದಸರಾ ಉದ್ಘಾಟನೆಗೆ ದೇಶದ ಪ್ರಥಮ ಪ್ರಜೆ ದ್ರೌಪದಿ ಮುರ್ಮು ಬರುವುದು ಕನ್ಫರ್ಮ್ ಆಗಿದ್ದು ಜಂಬೂಸವಾರಿ ಉದ್ಘಾಟನೆಗೆ ಪ್ರಧಾನಿ ನರೇಂದ್ರ ಮೋದಿ ಬರುವ ಸಾದ್ಯತೆಯಿದೆ. ಒಟ್ಟಿನಲ್ಲಿ ವಿಶ್ವವಿಖ್ಯಾತ ದಸರಾ ವೈಭವವನ್ನು ಕಣ್ತುಂಬಿಕೊಳ್ಳಲು‌ ಜನ ಕಾತರದಿಂದ ಕಾಯುತ್ತಿದ್ದಾರೆ.

ಇದನ್ನು ಓದಿ : Mark Boucher MI Head Coach : ದಕ್ಷಿಣ ಆಫ್ರಿಕಾದ ದಿಗ್ಗಜ ಮುಂಬೈ ಇಂಡಿಯನ್ಸ್ ಕೋಚ್ ; ಮಾರ್ಕ್ ಬೌಷರ್ ಹೆಗಲೇರಿದ ಮುಂಬೈ ಗುರು ಪಟ್ಟ

ಇದನ್ನೂ ಓದಿ : Virat Kohli: ಲಂಡನ್‌ನಲ್ಲಿ ವಿರಾಟ್ ಕೊಹ್ಲಿಯನ್ನು ನೋಡಿ ಹೌಹಾರಿದ ಪತ್ನಿಯ ಜೊತೆಗಿದ್ದ ಬಾಲಿವುಡ್ ನಟಿ !

World famous Mysore Dussehra- Launching for youth celebration

Comments are closed.