ಮೈಸೂರು : ರಸ್ತೆಯಲ್ಲಿ ಅಪಘಾತಕ್ಕೀಡಾಗಿ ಗಾಯಾಳುಗಳಾಗಿದ್ದ ಯುವಕರನ್ನು ಆಸ್ಪತ್ರೆಗೆ ಸೇರಿಸುವ ಮೂಲಕ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಪುತ್ರ ವಿಜಯೇಂದ್ರ ಮಾನವೀಯತೆ ಮೆರೆದಿದ್ದಾರೆ.
ಬಿ.ವೈ.ವಿಜಯೇಂದ್ರ ಅವರು ಮೈಸೂರಿನ ಕಡೆಗೆ ಕಾರಿನಲ್ಲಿ ಹೊರಟಿದ್ದರು. ಈ ವೇಳೆಯಲ್ಲಿ ಮಾರುತಿ ಕಾರ್ ಹಾಗೂ ಬೈಕ್ ನಡುವೆ ಢಿಕ್ಕಿಯಾಗಿ ಇಬ್ಬರು ಯುವಕರಿಗೆ ಗಾಯವಾಗಿತ್ತು. ಇದನ್ನು ಕಂಡ ವಿಜಯೇಂದ್ರ ಕಾರಿನಿಂದ ಇಳಿದು ಯುವಕರ ನೆರವಿಗೆ ದಾವಿಸಿದ್ದಾರೆ. ಅಲ್ಲದೇ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸೋ ಮೂಲಕ ಮಾನವೀಯತೆ ಮೆರೆದಿದ್ದಾರೆ. ಘಟನೆಯ ಕುರಿತು ಆಲನಹಳ್ಳೀ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿ ಮಾನವೀಯತೆ ಮೆರೆದ ವಿಜಯೇಂದ್ರ
- Advertisement -
RELATED ARTICLES