BIG NEWS : ಶಾಲಾರಂಭದ ಹೊತ್ತಲೇ ಶಾಕ್ : 4 ತಿಂಗಳಲ್ಲಿ 1.88 ಲಕ್ಷ ಮಕ್ಕಳಿಗೆ ಕೊರೊನಾ ಸೋಂಕು ..!!

ಬೆಂಗಳೂರು : ಕೊರೊನಾ ಸೋಂಕು ಕಡಿಮೆಯಾಗುತ್ತಿರುವ ಬೆನ್ನಲ್ಲೇ ಜನಜೀವನ ಸಹಜ ಸ್ಥಿತಿಗೆ ಮರಳುತ್ತಿದೆ. ಶಾಲೆ, ಕಾಲೇಜುಗಳನ್ನು ಆರಂಭಿಸಲು ಸಿದ್ದತೆ ನಡೆಯುತ್ತಿದೆ. ಈ ಹೊತ್ತಲೇ ಶಾಕಿಂಗ್‌ ಮಾಹಿತಿಯೊಂದು ಹೊರಬಿದ್ದಿದ್ದು, ಕಳೆದ 4 ತಿಂಗಳಲ್ಲಿ 1.88 ಲಕ್ಷ ಮಕ್ಕಳು ಕೊರೋನಾ ಸೋಂಕಿಗೆ ತುತ್ತಾಗಿದ್ದಾರೆ.

ರಾಜ್ಯದಲ್ಲಿ ಜುಲೈ 26 ರಿಂದ ಕಾಲೇಜುಗಳು ಆರಂಭಗೊಳ್ಳುತ್ತಿದ್ದು, ವಿದ್ಯಾರ್ಥಿಗಳು ತರಗತಿಗೆ ಹಾಜರಾಗಲು ಅವಕಾಶ ಕಲ್ಪಿಸಿದೆ. ಅಲ್ಲದೇ ಅಗಸ್ಟ್‌ ಆರಂಭದಲ್ಲಿ ಎಸ್‌ಎಸ್‌ಎಲ್‌ಸಿ, ಪಿಯುಸಿ ತರಗತಿಗಳು ಆರಂಭವಾಗುವ ಸಾಧ್ಯತೆಯೂ ಇದೆ. ಸರಕಾರದ ಲೆಕ್ಕಾಚಾರದಂತೆ ಎಲ್ಲವೂ ನಡೆದ್ರೆ ಅಗಸ್ಟ್‌ ಅಂತ್ಯಕ್ಕೆ ಪ್ರಾಥಮಿಕ ಶಾಲೆಗಳು ಆರಂಭವಾಗೋದು ಖಚಿತ.

ಐಸಿಎಂಆರ್‌ (ವೈದ್ಯಕೀಯ ಸಂಶೋಧನಾ ಮಂಡಳಿ) ನಿರ್ದೇಶಕ ಬಲರಾಮ್ ಭಾರ್ಗವ ಅವರು ಮಕ್ಕಳಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚಾಗಿರುತ್ತದೆ. ಹೀಗಾಗಿ ಪ್ರಾಥಮಿಕ ಶಾಲೆಗಳನ್ನು ಆರಂಭಿಸಬಹುದು ಎಂದು ಸಲಹೆಯನ್ನು ನೀಡಿದ್ದರು. ಆದರೆ ಸೂಕ್ತ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಿದ್ದರು. ಆದ್ರೀಗ ಕೊರೊನಾ ಸೋಂಕಿಗೆ ತುತ್ತಾಗಿರುವ ಮಕ್ಕಳ ಮಾಹಿತಿಯನ್ನು ಆರೋಗ್ಯ ಇಲಾಖೆ ಪ್ರಕಟಿಸಿದೆ. ಅಲ್ಲದೇ ಅಗಸ್ಟ್‌ನಲ್ಲಿ ಮೂರನೇ ಅಲೆ ಹರಡುವ ಸಾಧ್ಯತೆಯಿದ್ದು, ಮಕ್ಕಳ ಮೇಲೆ ಗಂಭೀರ ಪರಿಣಾಮ ಬೀರಲಿದೆ ಎಂದು ಕೆಲ ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

ಕಳೆದ ಮಾರ್ಚ್ ನಿಂದ ಜೂನ್ ವರೆಗೆ ಸುಮಾರು 4 ತಿಂಗಳಲ್ಲಿ ಬರೋಬ್ಬರಿ1.88 ಲಕ್ಷ ಮಕ್ಕಳು ಕೊರೋನಾ ಸೋಂಕಿಗೆ ತುತ್ತಾಗಿರುವುದು ಬೆಳಕಿಗೆ ಬಂದಿದೆ. ಈ ಸಂಬಂಧ ಆರೋಗ್ಯ ಇಲಾಖೆ ವರದಿಯೊಂದನ್ನು ಅಂಕಿ ಅಂಶದೊಂದಿಗೆ ಪ್ರಕಟಿಸಿದ್ದು, ರಾಜ್ಯದಲ್ಲಿ ಈವರೆಗೆ ಸೋಂಕಿಗೆ 1,212 ಮಕ್ಕಳು ಮೃತಪಟ್ಟಿದ್ದಾರೆ ಎಂದು ಹೇಳಿದೆ. ಮೊದಲ ಅಲೆಯಲ್ಲಿ ಶೇ 8ರಷ್ಟು ಮಕ್ಕಳು ಸೋಂಕಿಗೆ ತುತ್ತಾಗಿದ್ರೆ, ಎರಡನೇ ಅಲೆಯಲ್ಲಿ ಶೇ10ರಷ್ಟು ಮಕ್ಕಳು ಸೋಂಕಿಗೆ ತುತ್ತಾಗಿದ್ದಾರೆ. ಮೊದಲ ಅಲೆಗಿಂತ ಎರಡನೇ ಅಲೆಯಲ್ಲಿಯೇ ಅತೀ ಹೆಚ್ಚು ಮಕ್ಕಳನ್ನು ಸೋಂಕು ಬಾಧಿಸಿದೆ.

Comments are closed.