ಬೆಂಗಳೂರು : ಕೊರೊನಾ ಲಾಕ್ ಡೌನ್ ಹಿನ್ನೆಲೆಯಲ್ಲಿ ರಾಜ್ಯದ 11 ಜಿಲ್ಲೆಗಳ ಶಿಕ್ಷಕರಿಗೆ ವರ್ಕ್ ಫ್ರಂ ಹೋಮ್ ಆದೇಶ ಜಾರಿಗೊಳಿಸಿ ಸಾರ್ವಜನಿಕ ಶಿಕ್ಷಣ ಇಲಾಖೆಯ ಆಯುಕ್ತರು ಆದೇಶ ಹೊರಡಿಸಿದ್ದಾರೆ.
ಚಿಕ್ಕಮಗಳೂರು, ಶಿವಮೊಗ್ಗ, ದಾವಣಗೆರೆ, ಮೈಸೂರು, ಚಾಮರಾಜನಗರ, ಹಾಸನ, ದಕ್ಷಿಣ ಕನ್ನಡ, ಬೆಂಗಳೂರು ಗ್ರಾಮಾಂತರ, ಬೆಳಗಾವಿ, ಚಿಕ್ಕೋಡಿ (ಶೈಕ್ಷಣಿಕ ಜಿಲ್ಲೆ), ಮಂಡ್ಯ, ಕೊಡಗು ಜಿಲ್ಲೆಗಳ ಶಿಕ್ಷಕರು ಮನೆಯಿಂದಲೇ ಕಾರ್ಯನಿರ್ವಹಸಬಹುದಾಗಿದೆ. ಕಠಿಣ ನಿರ್ಬಂಧಗಳು ಭಾಗಶಃ ತೆರವುಗೊಳಿಸಿದ ತಕ್ಷಣವೇ ಶಿಕ್ಷಕರು ಶಾಲೆಗೆ ತೆರಳಬೇಕು.
ಇನ್ನುಳಿದಂತೆ ಅನ್ ಲಾಕ್ ಆದೇಶ ಜಾರಿಯಲ್ಲಿರುವ ಜಿಲ್ಲೆಗಳ ಶಿಕ್ಷಕರು ಜೂನ್ 15ರಿಂದಲೇ ಶಾಲೆಗಳಿಗೆ ತೆರಳುವಂತೆ ಆದೇಶದಲ್ಲಿ ತಿಳಿಸಲಾಗಿದೆ.
