KCET 2025: ಕೆಸೆಟ್-2025ರ ಅಂತಿಮ ಕೀ ಉತ್ತರ ಮತ್ತು ತಾತ್ಕಾಲಿಕ ಅಂಕಪಟ್ಟಿ ಪ್ರಕಟ
ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (KEA) ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ (ಕೆಸೆಟ್)-2025ಕ್ಕೆ ಸಂಬಂಧಿಸಿದಂತೆ ಪ್ರಮುಖ ಪ್ರಕಟಣೆಯನ್ನು ಹೊರಡಿಸಿದೆ. ನವೆಂಬರ್ 2ರಂದು ನಡೆಸಲಾಗಿದ್ದ ಈ ಪರೀಕ್ಷೆಯ ಅಂತಿಮ ಕೀ ಉತ್ತರಗಳು ಮತ್ತು ಅಭ್ಯರ್ಥಿಗಳು ಗಳಿಸಿದ ತಾತ್ಕಾಲಿಕ ಅಂಕಪಟ್ಟಿಯನ್ನು ಇಂದು, ಅಧಿಕೃತ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗಿದೆ.
ಅಂತಿಮ ಕೀ ಉತ್ತರ ಪ್ರಕಟಣೆ
ಪ್ರಾಧಿಕಾರವು ನವೆಂಬರ್ 4 ರಂದು ತಾತ್ಕಾಲಿಕ ಕೀ ಉತ್ತರಗಳನ್ನು ಪ್ರಕಟಿಸಿ, ದಿನಾಂಕ 06.11.2025 ರವರೆಗೆ ಆಕ್ಷೇಪಣೆಗಳನ್ನು ಆಹ್ವಾನಿಸಿತ್ತು. ಅಭ್ಯರ್ಥಿಗಳಿಂದ ಸ್ವೀಕರಿಸಲಾದ ಆಕ್ಷೇಪಣೆಗಳನ್ನು ವಿಷಯ ತಜ್ಞರ ಸಮಿತಿಯ ಮೂಲಕ ಪರಿಶೀಲಿಸಿ, ಪರಿಷ್ಕೃತ ಕೀ ಉತ್ತರಗಳನ್ನು ದಿನಾಂಕ 12.11.2025 ರಂದು ಮತ್ತು ಅಂತಿಮ ಕೀ ಉತ್ತರಗಳನ್ನು ದಿನಾಂಕ 15.11.2025 ರಂದು ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗಿದೆ.
ತಾತ್ಕಾಲಿಕ ಅಂಕಪಟ್ಟಿಗೆ ಆಕ್ಷೇಪಣೆ ಸಲ್ಲಿಸಲು ಅವಕಾಶ
ಅಂತಿಮ ಕೀ ಉತ್ತರಗಳ ಆಧಾರದ ಮೇಲೆ ಅಭ್ಯರ್ಥಿಗಳು ಪರೀಕ್ಷೆಯಲ್ಲಿ ಗಳಿಸಿದ ತಾತ್ಕಾಲಿಕ ಅಂಕಪಟ್ಟಿಯನ್ನು ಕೂಡ KEA ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗಿದೆ.
ಈ ತಾತ್ಕಾಲಿಕ ಅಂಕಪಟ್ಟಿಗೆ ಆಕ್ಷೇಪಣೆಗಳಿದ್ದಲ್ಲಿ, ಅಭ್ಯರ್ಥಿಗಳು ಪ್ರಾಧಿಕಾರದ ವೆಬ್‌ಸೈಟ್‌ನಲ್ಲಿ ಒದಗಿಸಲಾದ ಲಿಂಕ್ ಮೂಲಕ ದಿನಾಂಕ 17.11.2025ರ ಮಧ್ಯಾಹ್ನ 12.00 ಗಂಟೆಯೊಳಗೆ ಪೂರಕ ದಾಖಲೆಗಳೊಂದಿಗೆ ಆಕ್ಷೇಪಣೆ ಸಲ್ಲಿಸಲು ಅವಕಾಶ ನೀಡಲಾಗಿದೆ. ಕೀ ಉತ್ತರಗಳಿಗೆ ಸಂಬಂಧಿಸಿದ ಅಥವಾ ಸೂಕ್ತ ದಾಖಲೆಗಳಿಲ್ಲದ ಆಕ್ಷೇಪಣೆಗಳನ್ನು ಪರಿಗಣಿಸಲಾಗುವುದಿಲ್ಲ ಎಂದು KEA ಸ್ಪಷ್ಟಪಡಿಸಿದೆ.
ಇದನ್ನೂ ಓದಿ: ಮಹಿಳೆಯರೇ ಇದನ್ನು ಮಿಸ್ ಮಾಡ್ದೇ ಓದಿ
ಹೆಚ್ಚಿನ ಮಾಹಿತಿಗಾಗಿ, KEA ವೆಬ್‌ಸೈಟ್‌ಗೆ ಭೇಟಿ ನೀಡಿ: http://kea.kar.nic.in ಸಹಾಯವಾಣಿ (Helpline): 080-23 460 460 ಸಂಪರ್ಕಿಸುವಂತೆ ಕೋರಲಾಗಿದೆ.



