2nd puc exam results : ನಾಳೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ : ಸಚಿವ ಬಿ.ಸಿ ನಾಗೇಶ್​ ಮಾಹಿತಿ

ಬೆಂಗಳೂರು : 2nd puc exam results : 2021-22ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ನಾಳೆ ಪ್ರಕಟವಾಗಲಿದೆ ಎಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಬಿ.ಸಿ ನಾಗೇಶ್​ ಅಧಿಕೃತ ಮಾಹಿತಿ ನೀಡಿದ್ದಾರೆ. ನಾಳೆ ಸುದ್ದಿಗೋಷ್ಠಿ ನಡೆಸುವ ಮೂಲಕ ಸಚಿವ ಬಿ,ಸಿ ನಾಗೇಶ್​ ದ್ವಿತೀಯ ಪಿಯುಸಿ ಫಲಿತಾಂಶ ಘೋಷಣೆ ಮಾಡಲಿದ್ದಾರೆ.

ಈ ಸಂಬಂಧ ಟ್ವೀಟ್​ ಮಾಡಿರುವ ಸಚಿವ ಬಿ.ಸಿ ನಾಗೇಶ್​, ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶವನ್ನು ನಾಳೆ (ಜೂನ್​ 18)ರಂದು ಪ್ರಕಟಿಸಲಾಗುತ್ತದೆ , ವಿದ್ಯಾರ್ಥಿಗಳಿಗೆ ಶುಭಾಶಯಗಳು ಎಂದು ಬರೆದಿದ್ದಾರೆ. 2021-22ನೇ ಸಾಲಿನಲ್ಲಿ, ರಾಜ್ಯಾದಂತ ಒಟ್ಟು 1076 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಸಲಾಗಿತ್ತು. ಈ ಬಾರಿ ಒಟ್ಟು 6,84,255 ವಿದ್ಯಾರ್ಥಿ ಗಳು ಪರೀಕ್ಷೆಗೆ ಹಾಜರಾಗಿದ್ದರು.ಇದರಲ್ಲಿ 3,46,936 ಬಾಲಕರು ಹಾಗೂ 3,37,319 ಬಾಲಕಿಯರು ಪರೀಕ್ಷೆ ಬರೆದಿದ್ದಾರೆ. ಇದರಲ್ಲಿ 6,00,519 ರೆಗ್ಯುಲರ್ ವಿದ್ಯಾರ್ಥಿಗಳಿದ್ದರೆ, 61,808 ಪುನರಾವರ್ತಿತ ವಿದ್ಯಾರ್ಥಿಗಳಿದ್ದಾರೆ.

2021 -22ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಗಳು ಏಪ್ರಿಲ್​ 22ಕ್ಕೆ ಆರಂಭವಾಗಿದ್ದವು. ಹಾಗೂ ಮೇ 18ಕ್ಕೆ ಮುಕ್ತಾಯಗೊಂಡಿದ್ದವು. ಪರೀಕ್ಷೆ ಮುಗಿಯುತ್ತಿದ್ದಂತೆಯೇ ಪದವಿ ಪೂರ್ವ ಶಿಕ್ಷಣ ಇಲಾಖೆ ಪರೀಕ್ಷೆಯ ಮೌಲ್ಯಮಾಪನವನ್ನು ಆರಂಭಿಸಿತ್ತು. ಅಲ್ಲದೇ ಜೂನ್​ 20ರ ಒಳಗಾgಗಿ ದ್ವಿತೀಯ ಪಿಯುಸಿ ಫಲಿತಾಂಶವನ್ನು ಪ್ರಕಟಿಸುವುದಾಗಿ ಪಿಯು ಬೋರ್ಡ್ ಹೇಳಿತ್ತು.

2nd puc exam results : ಪಿಯುಸಿ ಫಲಿತಾಂಶ ವೀಕ್ಷಿಸಲು ಇಲ್ಲಿ ಕ್ಲಿಕ್‌ ಮಾಡಿ

  • ಫಲಿತಾಂಶವನ್ನು ವೀಕ್ಷಿಸಲು ಈ ಮಾರ್ಗವನ್ನು ಅನುರಿಸಿ :
  • ಮೊದಲನೆಯದಾಗಿ, ಕರ್ನಾಟಕ ಪೂರ್ವ ವಿಶ್ವವಿದ್ಯಾಲಯದ ಇಲಾಖೆಯ ಅಧಿಕೃತ ವೆಬ್‌ಸೈಟ್ karresults.nic.in ಗೆ ಭೇಟಿ ನೀಡಿ.
  • ವೆಬ್‌ಸೈಟ್‌ಗೆ ಭೇಟಿ ನೀಡಿದ ನಂತರ, ಪುಟದಲ್ಲಿ ಕೆಳಗೆ ಸ್ಕ್ರಾಲ್ ಮಾಡಿ ಮತ್ತು 2 ನೇ ಪಿಯುಸಿ ಫಲಿತಾಂಶ ಲಿಂಕ್ ಅನ್ನು ಕ್ಲಿಕ್ ಮಾಡಿ.
  • ಮುಂದೆ, ನಿಮ್ಮನ್ನು ಇನ್ನೊಂದು ಪುಟಕ್ಕೆ ಮರುನಿರ್ದೇಶಿಸಲಾಗುತ್ತದೆ.
  • ಈ ಪುಟದಲ್ಲಿ, ನಿಮ್ಮ ರೋಲ್ ಸಂಖ್ಯೆ ಮತ್ತು ಜನ್ಮ ದಿನಾಂಕದಂತಹ ನಿಮ್ಮ ಮಾಹಿತಿಯನ್ನು ನೀವು ನಮೂದಿಸಬೇಕು.
  • ಅದರ ನಂತರ, ಸಲ್ಲಿಸು ಬಟನ್ ಮೇಲೆ ಕ್ಲಿಕ್ ಮಾಡಿ.
  • ನೀವು ಸಲ್ಲಿಸು ಬಟನ್ ಅನ್ನು ಕ್ಲಿಕ್ ಮಾಡಿದ ತಕ್ಷಣ, ಫಲಿತಾಂಶವು ನಿಮ್ಮ ಪರದೆಯ ಮೇಲೆ ಗೋಚರಿಸುತ್ತದೆ.
  • ಭವಿಷ್ಯದ ಉಲ್ಲೇಖಕ್ಕಾಗಿ ನೀವು ಫಲಿತಾಂಶವನ್ನು ನಿಮ್ಮ ಕಂಪ್ಯೂಟರ್‌ನಲ್ಲಿ ಉಳಿಸಬಹುದು ಮತ್ತು ಮುದ್ರಣವನ್ನು ಸಹ ತೆಗೆದುಕೊಳ್ಳಬಹುದು.

ಇದನ್ನು ಓದಿ : ಮುಂದಿನ ವರ್ಷದಿಂದ ಆರ್‌ಸಿಬಿ, ಸಿಎಸ್‌ಕೆ, ಮುಂಬೈ, ಕೆಕೆಆರ್ ಆದಾಯ ಡಬಲ್

ಇದನ್ನೂ ಓದಿ : IPL vs PSL : ಐಪಿಎಲ್ 115.5 ಕೋಟಿ, ಪಿಎಸ್ಎಲ್ ಜಸ್ಟ್ 2.76 ಕೋಟಿ : ಐಪಿಎಲ್ ಮುಂದೆ ಲೆಕ್ಕಕ್ಕೇ ಇಲ್ಲ ಪಾಕಿಸ್ತಾನ್ ಸೂಪರ್ ಲೀಗ್

2nd puc exam results will announced on Saturday

Comments are closed.