5,8,9ನೇ ತರಗತಿಗೆ ಪಬ್ಲಿಕ್‌ ಪರೀಕ್ಷೆ : ರಾಜ್ಯ ಸರಕಾರದಿಂದ ಅಧಿಸೂಚನೆ ಪ್ರಕಟ

ಕರ್ನಾಟಕ ರಾಜ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ 5,8,9ನೇ ತರಗತಿಯ ವಿದ್ಯಾರ್ಥಿಗಳಿಗೆ ಪಬ್ಲಿಕ್‌ ಪರೀಕ್ಷೆಯನ್ನು (Public Exams) ನಡೆಸಲು ಹಾಗೂ 11 ನೇ ತರಗತಿ ವಿದ್ಯಾರ್ಥಿಗಳಿಗೆ ವಾರ್ಷಿಕ ಪರೀಕ್ಷೆಯನ್ನು (Yearly Exams )ನಡೆಸಲು ಅನುಮತಿಯನ್ನು ನೀಡಿದೆ.

ಬೆಂಗಳೂರು : ರಾಜ್ಯದ ಶಿಕ್ಷಣ ಪದ್ದತಿಯಲ್ಲಿ ಹಲವು ಬದಲಾವಣೆಗಳನ್ನು ಮಾಡಲಾಗಿತ್ತಿದೆ. ಇದೀಗ ಕರ್ನಾಟಕ ರಾಜ್ಯ ಶಾಲಾ ಶಿಕ್ಷಣ ಇಲಾಖೆ 5, 8, 9ನೇ ತರಗತಿಗಳಿಗೆ ಪಬ್ಲಿಕ್‌ ಪರೀಕ್ಷೆ (Public Exams) ಜಾರಿಗೊಳಿಸಿದೆ. ಈ ಕುರಿತು ರಾಜ್ಯ ಸರಕಾರ ಅಧಿಕೃತ (Karnataka Government New Order( ಆದೇಶವನ್ನು ಹೊರಡಿಸಿದೆ.

ಕರ್ನಾಟಕ ಶಿಕ್ಷಣ ಕಾಯ್ದೆ 1983 ರ ಕಲಂ 2 ರ ಅಡಿಯಲ್ಲಿ ಕರ್ನಾಟಕ ರಾಜ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ 5,8,9ನೇ ತರಗತಿಯ ವಿದ್ಯಾರ್ಥಿಗಳಿಗೆ ಪಬ್ಲಿಕ್‌ ಪರೀಕ್ಷೆಯನ್ನು (Public Exams) ನಡೆಸಲು ಹಾಗೂ 11 ನೇ ತರಗತಿ ವಿದ್ಯಾರ್ಥಿಗಳಿಗೆ ವಾರ್ಷಿಕ ಪರೀಕ್ಷೆಯನ್ನು (Yearly Exams )ನಡೆಸಲು ಅನುಮತಿಯನ್ನು ನೀಡಿದೆ.

ಸದರಿ ಸಂಕಲನಾತ್ಮಕ ಮೌಲ್ಯಮಾಪನ-2 ಹಾಗೂ ವಾರ್ಷಿಕ ಪರೀಕ್ಷೆಯನ್ನು ನಡೆಸುವ ಸಂಬಂಧ ಪ್ರತೀ ವರ್ಷ ಸರಕಾರಿ ಆದೇಶವನ್ನು ಪಡೆಯುವುದು ಕಡ್ಡಾಯ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಸರಕಾರದ ಅಧೀನ ಕಾರ್ಯದರ್ಶಿ (ಪ್ರೌಢ) ಎಸ್.ಪ್ರಕಾಶ್‌ ಅವರ ಆದೇಶದಲ್ಲಿ ತಿಳಿಸಿದ್ದಾರೆ.

5th 8th 9th Class Public Examination Notification published by the Karnataka state government
Image Credit to Original Source

ಇದನ್ನೂ ಓದಿ : CBSE 10 12 ನೇ ತರಗತಿ ಪರೀಕ್ಷೆ 2024: ನವೀಕರಿಸಿದ ವೇಳಾಪಟ್ಟಿ

ಕಳೆದ ವರ್ಷವೇ ರಾಜ್ಯದಲ್ಲಿ 5 ಮತ್ತು 8ನೇ ತರಗತಿ ವಿದ್ಯಾರ್ಥಿಗಳಿಗೆ ಪಬ್ಲಿಕ್‌ ಪರೀಕ್ಷೆ ನಡೆಸುವ ಕುರಿತು ಸರಕಾರ ಆದೇಶ ಹೊರಡಿಸಿತ್ತು. ಆದರೆ ಪೋಷಕರ ವಿರೋಧದ ನಂತರದಲ್ಲಿ ಪಬ್ಲಿಕ್‌ ಪರೀಕ್ಷೆಯನ್ನು ಹಲವು ಮಾರ್ಪಾಡುಗಳನ್ನು ಮಾಡಿತ್ತು. ಆದ್ರೀಗ 5,8,9ನೇ ತರಗತಿಗಳಿಗೆ ಪಬ್ಲಿಕ್‌ ಪರೀಕ್ಷೆ ಜಾರಿ ಮಾಡಿದೆ.

ಸರಕಾರ ಸದ್ಯಕ್ಕೆ ಗಜೆಟ್‌ ಅಧಿಸೂಚನೆಯನ್ನು ಹೊರಡಿಸಿದೆ. ಆದರೆ ಪರೀಕ್ಷೆಯ ಸ್ವರೂಪ, ದಿನಾಂಕದ ಬಗ್ಗೆ ಯಾವುದೇ ಮಾಹಿತಿಯನ್ನು ನೀಡಿಲ್ಲ. ಮುಂದಿನ ದಿನಗಳಲ್ಲಿ ಈ ಕುರಿತು ಪ್ರತ್ಯೇಕವಾದ ಆದೇಶವನ್ನು ಶಿಕ್ಷಣ ಇಲಾಖೆಯಿಂದ ಹೊರಡಿಸುವ ಸಾಧ್ಯತೆಯಿದೆ.

ಕರ್ನಾಟಕ ರಾಜ್ಯದಲ್ಲಿ ಸದ್ಯ ಎಸ್‌ಎಸ್‌ಎಲ್‌ಸಿ ಹಾಗೂ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಪಬ್ಲಿಕ್‌ ಪರೀಕ್ಷೆಯನ್ನು ನಡೆಸಲಾಗುತ್ತಿದೆ. ರಾಜ್ಯದಾದ್ಯಂತ ಏಕಕಾಲದಲ್ಲಿ ಪರೀಕ್ಷೆಗಳು ನಡೆಯುತ್ತಿದ್ದು, ಅಂತರ್‌ ಜಿಲ್ಲಾ ಮಟ್ಟದಲ್ಲಿ ಮೌಲ್ಯಾಂಕನ ಪ್ರಕ್ರಿಯೆ ನಡೆಯುತ್ತಿದೆ. ಆದರೆ ಇದೀಗ ಪ್ರಾಥಮಿಕ ಶಾಲೆಗಳಿಗೂ ಪಬ್ಲಿಕ್‌ ಪರೀಕ್ಷೆ ಆರಂಭಗೊಂಡಿದೆ.

ಇದನ್ನೂ ಓದಿ : ಟ್ಯೂಶನ್ ಮಾಫಿಯಾಗೆ ಬೀಳುತ್ತಾ ಕಡಿವಾಣ: ಸರ್ಕಾರದಿಂದ ಹೊರಬಿತ್ತು ಖಡಕ್ ಆದೇಶ

ಈ ಹಿಂದೆ ಏಳನೇ ತರಗತಿ ವಿದ್ಯಾರ್ಥಿಗಳಿಗೆ ಪಬ್ಲಿಕ್‌ ಪರೀಕ್ಷೆಯನ್ನು ನಡೆಸಲಾಗುತ್ತಿತ್ತು. ಆದರೆ ಕೆಲವೇ ವರ್ಷಗಳ ಬಳಿಕ ಪಬ್ಲಿಕ್‌ ಪರೀಕ್ಷೆಯನ್ನು ರದ್ದುಗೊಳಿಸಲಾಗಿದೆ. ಇದೀಗ ೫ನೇ ತರಗತಿ ವಿದ್ಯಾರ್ಥಿಗಳು ಪಬ್ಲಿಕ್‌ ಪರೀಕ್ಷೆಗೆ ಹಾಜರಾಗ ಬೇಕಾಗಿದೆ.

5th 8th 9th Class Public Examination Notification published by the Karnataka state government
Image Credit to Original Source

ಈಗಾಗಲೇ ಪ್ರೌಢಶಾಲಾ ವಿಭಾಗದಲ್ಲಿ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳು ಪಬ್ಲಿಕ್‌ ಪರೀಕ್ಷೆಯನ್ನು ಎದುರಿಸುತ್ತಿದ್ದಾರೆ. ಆದ್ರೆ ಈ ವರ್ಷದಿಂದ ೮ ಮತ್ತು ೯ನೇ ತರಗತಿ ವಿದ್ಯಾರ್ಥಿಗಳು ಕೂಡ ಪಬ್ಲಿಕ್‌ ಪರೀಕ್ಷೆಗೆ ಹಾಜರಾಗಬೇಕಾಗಿದೆ. ಇದರಿಂದಾಗಿ ಶಿಕ್ಷಕರಿಗೆ ಹೆಚ್ಚಿನ ಹೊರೆ ಬೀಳುವುದಂತೂ ಖಚಿತ.

13,352 ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ

ಕರ್ನಾಟಕ ರಾಜ್ಯದಲ್ಲಿ 13,352 ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿಗೆ ಸಂಬಂಧಿಸಿದಂತೆ ಎದುರಾಗಿದ್ದ ಸಮಸ್ಯೆಯನ್ನು ಹೈಕೋರ್ಟ್‌ ಇತ್ಯರ್ಥಗೊಳಿಸಿದೆ. ಹೈಕೋರ್ಟ್‌ ಏಕಸದಸ್ಯ ಪೀಠ ಶಿಕ್ಷಕರ ನೇಮಕಾತಿಗೆ ಗ್ರೀನ್‌ ಸಿಗ್ನಲ್‌ ಕೊಟ್ಟಿದೆ. ಮುಖ್ಯ ನ್ಯಾಯಮೂರ್ತಿ ಪಿ.ಬಿ. ವರಾಳೆ, ನ್ಯಾಯಮೂರ್ತಿ ಎಜಿಎಸ್ ಕಮಲ್ ಅವರಿದ್ದ ವಿಭಾಗಿಯ ಪೀಠ ಶಿಕ್ಷಕರಿಗೆ ಗುಡ್‌ನ್ಯೂಸ್‌ ನೀಡಿದೆ.

ಇದನ್ನೂ ಓದಿ : ಅಂಗನವಾಡಿ ಕೇಂದ್ರಕ್ಕೆ ದಿಢೀರ್‌ ಭೇಟಿ : ಮಕ್ಕಳ ದುಸ್ಥಿತಿ ಕಂಡು ಮರುಗಿದ ನ್ಯಾಯಾಧೀಶೆ ಅರುಣಾ ಕುಮಾರಿ

ಹೈಕೋರ್ಟ್‌ ಮಾರ್ಚ್ 8, 2023 ಆಯ್ಕೆ ಪಟ್ಟಿಯಂತೆ ನೇಮಕಾತಿಯನ್ನು ಅಂತಿಮಗೊಳಿಸಬೇಕು ಎಂದು ಸೂಚನೆಯನ್ನು ನೀಡಿದೆ. ಅಲ್ಲದೇ ಸರ್ಕಾರದ ಅಧಿಸೂಚನೆಯಂತೆ ಆದಾಯ ಪ್ರಮಾಣ ಪತ್ರ ಸಲ್ಲಿಸಿದವರ ಆಯ್ಕೆ ಅಂತಿಮವಾಗಿದೆ. ಜೂನ್ 8, 2023 ಆಯ್ಕೆ ಪಟ್ಟಿಯಲ್ಲಿ 450 ಅಭ್ಯರ್ಥಿಗಳ ಬದಲಾವಣೆ ಆಗಿದೆ.

ಹೊಸ ನೀತಿಯಲ್ಲಿ 450 ಅಭ್ಯರ್ಥಿಗಳಿಗೆ ಬದಲಿ ಅಭ್ಯರ್ಥಿಗಳು ಆಯ್ಕೆಯಾಗಿದ್ದರು. ಆದರೆ ಕೆಎಟಿ ಆದೇಶದ ಬಳಿಕ ಅಭ್ಯರ್ಥಿಗಳ ಭವಿಷ್ಯ ನಿರ್ಧಾರ ವಾಗಲಿದೆ. ಪ್ರಮುಖವಾಗಿ ಹಿಂದುಳಿದ ವರ್ಗಗಳ ವಿವಾಹಿತ ಮಹಿಳೆಯ ಆದೇಶ ಪರಿಗಣಿಸುವ ವೇಳೆ ಪತಿಯ ಆದಾಯವನ್ನೂ ಪರಿಗಣಿಸಬೇಕು ಎಂದು ರಾಜ್ಯ ಸರಕಾರ ನಿಯಮ ಜಾರಿಗೆ ತಂದಿತ್ತು.

5th 8th 9th Class Public Examination Notification published by the Karnataka state government

Comments are closed.