ಬೆಂಗಳೂರು: (5th 8th Board Exam) ಮಕ್ಕಳ ಕಲಿಕೆ ಉತ್ತಮಗೊಳಿಸಲು 2022 -23 ನೇ ಸಾಲಿನಲ್ಲಿ ರಾಜ್ಯ ಪಠ್ಯಕ್ರಮದ ಎಲ್ಲಾ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಶಾಲೆಗಳ 5 ಮತ್ತು 8ನೇ ತರಗತಿ ವಿದ್ಯಾರ್ಥಿಗಳಿಗೆ ಶಿಕ್ಷಣ ಇಲಾಖೆ ಬೋರ್ಡ್ ಪರೀಕ್ಷೆ ನಡೆಸಲು ವೇಳಾಪಟ್ಟಿ ಪ್ರಕಟಿಸಿದ್ದು, ಆಯಾ ಶಾಲೆಗಳಲ್ಲಿಯೇ 5 ಮತ್ತು 8ನೇ ತರಗತಿ ವಿದ್ಯಾರ್ಥಿಗಳಿಗೆ ಬೋರ್ಡ್ ಪರೀಕ್ಷೆ ನಡೆಸಲು ಶಿಕ್ಷಣ ಇಲಾಖೆ ಪರಿಷ್ಕೃತ ಸುತ್ತೋಲೆ ಹೊರಡಿಸಿದೆ.
ಮಾರ್ಚ್ 13 ರಿಂದ 18 ರವರೆಗೆ ಮೌಲ್ಯಾಂಕನ ಪರೀಕ್ಷೆ ನಡೆಸಲಾಗುವುದು. ವಿದ್ಯಾರ್ಥಿಗಳ ಸಂಖ್ಯೆ ಆಧರಿಸಿ ಪರೀಕ್ಷಾ ಕೇಂದ್ರ ರಚಿಸಲು ಸೂಚಿಸಲಾಗಿದ್ದು, ಇದಕ್ಕೆ ಪೋಷಕರಿಂದ ಆಕ್ಷೇಪ ವ್ಯಕ್ತವಾದ ಹಿನ್ನೆಲೆಯಲ್ಲಿ ಆಯಾ ಶಾಲೆಗಳನ್ನೇ ಪರೀಕ್ಷಾ ಕೇಂದ್ರವಾಗಿಸಲು ಸೂಚನೆ ನೀಡಲಾಗಿದೆ. ರಾಜ್ಯ ಪಠ್ಯಕ್ರಮದ 5 ಮತ್ತು 8ನೇ ತರಗತಿ ವಿದ್ಯಾರ್ಥಿಗಳಿಗೆ ಬೋರ್ಡ್ ಪರೀಕ್ಷೆ ನಡೆಸುವ ನಿರ್ಧಾರ ಪ್ರಶ್ನಿಸಿದ ಪ್ರಕರಣದ ತೀರ್ಪನ್ನು ಹೈಕೋರ್ಟ್ ಕಾಯ್ದಿರಿಸಿದ್ದು, ಇದರ ಬೆನ್ನಲ್ಲೇ ಶಿಕ್ಷಣ ಇಲಾಖೆ ಪರಿಷ್ಕೃತ ಸುತ್ತೋಲೆ ಹೊರಡಿಸಿ ಆಯಾ ಶಾಲೆಗಳನ್ನೇ ಪರೀಕ್ಷಾ ಕೇಂದ್ರಗಳಾಗಿ ಮಾರ್ಪಡಿಸಿದೆ.
ಮಾ.3ರಿಂದಲೇ ಆರಂಭಿಸಿರುವ ಇಲಾಖೆಯ ಸಹಾಯವಾಣಿಗೆ ಕರೆ ಮಾಡುತ್ತಿರುವ ಪೋಷಕರು, ವಿದ್ಯಾರ್ಥಿಗಳು ಪ್ರಸ್ತುತ ಶಾಲೆಯಿಂದ ಪರೀಕ್ಷೆ ಕೇಂದ್ರಗಳಿಗೆ ತೆರಳಲು ಅನಾನುಕೂಲವಾಗುತ್ತಿರುವ ಬಗ್ಗೆ ಆಕ್ಷೇಪಣೆಗಳನ್ನು ತಿಳಿಸಿದ್ದಾರೆ. ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಆಯಾ ಶಾಲೆಗಳನ್ನೇ ಪರೀಕ್ಷಾ ಕೇಂದ್ರಗಳನ್ನಾಗಿ ಪರಿಗಣಿಸಿ ಈಗಾಗಲೇ ನಿಗದಿ ಮಾಡಿರುವ ದಿನಾಂಕಗಳಂದೇ ಮೌಲ್ಯಾಂಕನವನ್ನು ನಡೆಸಬೇಕು. ಉಳಿದಂತೆ ಮಾರ್ಗಸೂಚಿ ಅನ್ವಯ ಗೌಪ್ಯತೆ ಮತ್ತು ಪಾವಿತ್ರ್ಯತೆ ಕಾಪಾಡುವಂತೆ ಕರ್ನಾಟಕ ಶಾಲಾ ಗುಣಮಟ್ಟಮತ್ತು ಅಂಗೀಕರಣ ಪರಿಷತ್ತು ತಿಳಿಸಿದೆ.
ಮೌಲ್ಯಾಂಕನ ಪರೀಕ್ಷೆಯ ಸಂದರ್ಭ ವಿದ್ಯಾರ್ಥಿಗಳ ಸಂಖ್ಯೆಯನ್ನು ಆಧರಿಸಿ ಪರೀಕ್ಷಾ ಕೇಂದ್ರಗಳನ್ನು ರಚಿಸುವಂತೆ ಸೂಚನೆ ನೀಡಲಾಗಿದ್ದು, ಯಾವುದೇ ಶಾಲೆಗಳಲ್ಲಿ ಕಡಿಮೆ ಮಕ್ಕಳಿದ್ದರೆ ಅವರಿಗೆ ಸಮೀಪದ ಮತ್ತೊಂದು ಶಾಲೆಯನ್ನು ಪರೀಕ್ಷಾ ಕೇಂದ್ರವನ್ನಾಗಿ ಮಾಡಲು ಸೂಚನೆ ನೀಡಲಾಗಿತ್ತು. ಆದರೆ ಇದಕ್ಕೆ ಪೋಷಕರಿಂದ ಆಕ್ಷೇಪಗಳು ವ್ಯಕ್ತವಾದ ಹಿನ್ನಲೆಯಲ್ಲಿ ಆಯಾ ಶಾಲೆಗಳನ್ನೇ ಕೇಂದ್ರವಾಗಿಸಲು ಇಲಾಖೆ ಸೂಚಿಸಿದೆ.
ಇದನ್ನೂ ಓದಿ : NEET UG 2023 Registration : ನೀಟ್ ಪ್ರವೇಶ ಪರೀಕ್ಷೆಗೆ ಎಲ್ಲಾ ವರ್ಗಗಳಿಗೂ ಅರ್ಜಿ ಶುಲ್ಕ ಹೆಚ್ಚಳ
ಇದನ್ನೂ ಓದಿ : NEET PG 2023 : ಮಾರ್ಚ್ 31ರಂದು ನೀಟ್ ಪರೀಕ್ಷೆ ಫಲಿತಾಂಶ !
ಇದನ್ನೂ ಓದಿ : NEET UG 2023 ನೋಂದಾವಣೆಯಲ್ಲಿ ಪ್ರಮುಖ ಬದಲಾವಣೆ: ವಿವರಗಳಿಗಾಗಿ ಇಲ್ಲಿ ಪರಿಶೀಲಿಸಿ
5th, 8th Board Exam in respective schools: Education Department Notice