5, 8 ನೇ ತರಗತಿ ವಿದ್ಯಾರ್ಥಿಯನ್ನು ಫೇಲ್ ಮಾಡುವಂತಿಲ್ಲ : ಶಾಲಾ ಶಿಕ್ಷಣ ಇಲಾಖೆ ಆದೇಶ

ಬೆಂಗಳೂರು : (5th 8th Public Exam) ರಾಜ್ಯ ಪಠ್ಯಕ್ರಮದ 5 ಮತ್ತು 8 ನೇ ತರಗತಿ ವಿದ್ಯಾರ್ಥಿಗಳಿಗೆ ಶಾಲಾ ಶಿಕ್ಷಣ ಇಲಾಖೆ ಮೌಲ್ಯಾಂಕನ ನಡೆಸಿದ್ದು, ಇದೀಗ ಮೌಲ್ಯಾಂಕನ ಪರೀಕ್ಷೆಗೆ ಗ್ರೇಡ್‌ ನಿಗದಿ ಮಾಡಿದೆ. ಶಾಲಾ ಹಂತದಲ್ಲಿಯೇ ಮೌಲ್ಯಾಂಕನ ನಡೆಸಲಾಗಿದ್ದು, ಯಾವುದೇ ವಿದ್ಯಾರ್ಥಿಗಳನ್ನು ಅನುತ್ತೀರ್ಣಗೊಳಿಸುವಂತಿಲ್ಲ ಎಂಬುದಾಗಿ ಶಾಲಾ ಶಿಕ್ಷಣ ಇಲಾಖೆ ಸೂಚನೆ ನೀಡಿದೆ.

5, 8 ನೇ ತರಗತಿ ವಿದ್ಯಾರ್ಥಿಗಳು ಈಗಾಗಲೇ ಮೌಲ್ಯಾಂಕನ ಪರೀಕ್ಷೆಗಳನ್ನು ಮುಗಿಸಿದ್ದು, ಸದ್ಯ ಮಕ್ಕಳು ಬೇಸಿಗೆ ರಜೆಯ ಅವಧಿಯಲ್ಲಿದ್ದಾರೆ. ಮಾರ್ಚ್‌ 27 ರಿಂದ ಏಪ್ರಿಲ್‌ 1 ರ ತನಕ ಶಾಲಾ ಹಂತದಲ್ಲಿ ಮೌಲ್ಯಾಂಕನ ಪರೀಕ್ಷೆ ನಡೆಸಲಾಗಿದ್ದು, ಮೌಲ್ಯಂಕನ ಪರೀಕ್ಷೆಗಳನ್ನು 40 ಅಂಕಗಳ ಲಿಖಿತ ಮತ್ತು 10 ಅಂಕಿಯ ಮೌಖಿಕ ಪರೀಕ್ಷೆ ಎಂಬುದಾಗಿ ಎರಡು ಹಂತದಲ್ಲಿ ನಡೆಸಲಾಗಿತ್ತು. ಒಟ್ಟಾರೆಯಾಗಿ 50 ಅಂಕಗಳಲ್ಲಿ ವಿದ್ಯಾರ್ಥಿಯ ಅಂಕಗಳನ್ನು 20 ಅಂಕಗಳಿಗೆ ಪರಿವರ್ತಿಸಿ ಗ್ರೇಡ್‌ ನೀಡಲಾಗುತ್ತದೆ.

ಏಪ್ರಿಲ್ 10 ರಂದು ಶಾಲಾ ವಿದ್ಯಾರ್ಥಿಗಳಿಗೆ ತಮ್ಮ ಅಂಕಗಳನ್ನು ನಿಗದಿ ಮಾಡುವ ದಿನವಾದ್ದರಿಂದ ಶಿಕ್ಷಣ ಇಲಾಖೆ ಈಗಾಗಲೇ ಯಾವುದೇ ವಿದ್ಯಾರ್ಥಿಯನ್ನು ಅನುತ್ತೀರ್ಣ ಮಾಡುವಂತಿಲ್ಲ ಎಂದು ಸೂಚಿಸಿದೆ. ಇದು ಬರೀ 5 ಮತ್ತು 8 ನೇ ತರಗತಿ ವಿದ್ಯಾರ್ಥಿಳಿಗೆ ಮಾತ್ರ ಅನ್ವಯಿಸಲಿದ್ದು, 9 ಮತ್ತು 10 ನೇ ತರಗತಿ ವಿದ್ಯಾರ್ಥಿಗಳಿಗೆ ಅನ್ವಯಿಸುವುದಿಲ್ಲ.

ವಿದ್ಯಾರ್ಥಿಗಳ ಕಲಿಕಾ ಮಟ್ಟ, ಕಲಿಕಾ ನ್ಯೂನ್ಯತೆ ಮತ್ತು ವಿಷಯ ಕಲಿಕೆಯಲ್ಲಿ ಎಷ್ಟು ಪ್ರಮಾಣದಲ್ಲಿ ಹಿನ್ನಡೆಯಾಗಿದೆ ಎಂಬುದನ್ನು ತಿಳಿಯುವುದಕ್ಕಾಗಿ ಮೌಲ್ಯಾಂಕನವನ್ನು ನಡೆಸಲಾಗಿತ್ತು. ಈ ಹಿನ್ನೆಲೆಯಲ್ಲಿ ಯಾವುದೇ ವಿದ್ಯಾರ್ಥಿಯನ್ನು ಅನುತ್ತೀರ್ಣ ಮಾಡುವಂತಿಲ್ಲ ಎಂಬ ಸೂಚನೆ ನೀಡಿದ್ದು, ಫಲಿತಾಂಶವನ್ನು ಸಂಬಂಧಿಸಿದ ವಿದ್ಯಾರ್ಥಿ ಹಾಗೂ ಪಾಲಕರಿಗೆ ಮಾತ್ರ ತಿಳಿಸಲಾಗುತ್ತಿದೆ ಎಂಬ ಮಾಹಿತಿ ತಿಳಿಸಲಾಗಿದೆ.

ಇದನ್ನೂ ಓದಿ : NMMS Scholarship 2023 : ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್, ಪಡೆಯಿರಿ 1ಲಕ್ಷ ರೂ ವರೆಗೆ ಉಚಿತ ವಿದ್ಯಾರ್ಥಿ ವೇತನ

ಇದನ್ನೂ ಓದಿ : UPMSP Result 2023 : ಯುಪಿ ಬೋರ್ಡ್ 10ನೇ ತರಗತಿ, ದ್ವಿತೀಯ ಪಿಯುಸಿ ಫಲಿತಾಂಶಕ್ಕಾಗಿ ಇಲ್ಲಿ ಕ್ಲಿಕ್‌ ಮಾಡಿ

5th 8th Public Exam: 5th, 8th Class Students Can’t Fail: School Education Department Order

Comments are closed.