5th and 8th Class Public Examination: ‘ಸಾರ್ವಜನಿಕ ಪರೀಕ್ಷೆ’ ನಡೆಸಲು ಸುಪ್ರೀಂ ಕೋರ್ಟ್ ಹಸಿರು ನಿಶಾನೆ

ಬೆಂಗಳೂರು: (5th and 8th Class Public Examination) ರಾಜ್ಯದ 5 ಮತ್ತು 8ನೇ ತರಗತಿ ವಿದ್ಯಾರ್ಥಿಗಳಿಗೆ ಪಬ್ಲಿಕ್ ಪರೀಕ್ಷೆ ನಡೆಸಲು ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್ ನೀಡಿದೆ. 5 ಮತ್ತು 8ನೇ ತರಗತಿ ವಿದ್ಯಾರ್ಥಿಗಳಿಗೆ ಪಬ್ಲಿಕ್ ಪರೀಕ್ಷೆ ನಡೆಸುವ ಕುರಿತು ಕರ್ನಾಟಕ ಹೈಕೋರ್ಟ್ ನೀಡಿದ್ದ ತೀರ್ಪನ್ನು ಸುಪ್ರೀಂ ಕೋರ್ಟ್ ಎತ್ತಿ ಹಿಡಿದಿದ್ದು, ಪರೀಕ್ಷೆ ನಡೆಸಲು ಅನುಮತಿ ನೀಡಿ ಆದೇಶ ಹೊರಡಿಸಿದೆ.

ಅನುದಾನ ರಹಿತ ಖಾಸಗಿ ಶಾಲೆಗಳ ಸಂಘಗಳಿಂದ ಬೋರ್ಡ್ ಪರೀಕ್ಷೆಗೆ ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಲಾಗಿದ್ದು, ಇಂದು ಸುಪ್ರೀಂ ಕೋರ್ಟ್‌ನಲ್ಲಿ ಮೇಲ್ಮನವಿ ಅರ್ಜಿಯ ವಿಚಾರಣೆ ನಡೆಯಿತು.5 ಮತ್ತು 8ನೇ ತರಗತಿಗಳಿಗೆ ಮೌಲ್ಯಮಾಪನ ಪರೀಕ್ಷೆ ನಡೆಸಲು ಆದೇಶ ನೀಡಿದ್ದು, ಈ ಆದೇಶವನ್ನು ಪ್ರಶ್ನಿಸಿ ಅನುದಾನರಹಿತ ಖಾಸಗಿ ಶಾಲೆಗಳ ಸಂಘಗಳು ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದವು.

5 ಮತ್ತು 8ನೇ ತರಗತಿಯ ಬೋರ್ಡ್ ಪರೀಕ್ಷೆಗೆ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಅರ್ಜಿ ಸಲ್ಲಿಸಲಾಗಿದ್ದು, ತುರ್ತು ವಿಚಾರಣೆ ನಡೆಸುವಂತೆ ವಕೀಲರು ಸುಪ್ರೀಂ ಕೋರ್ಟ್‌ಗೆ ಮನವಿ ಮಾಡಿದರು. ಮಾ.27ರಂದು ವಿಚಾರಣೆ ನಡೆಸುವುದಾಗಿ ಸಿಜೆಐ ಹೇಳಿದ್ದರು. ಹೀಗಾಗಿ ಇಂದು ಸುಪ್ರೀಂ ಕೋರ್ಟ್ ನಲ್ಲಿ ಅರ್ಜಿ ವಿಚಾರಣೆ ನಡೆದಿದ್ದು, 5 ಮತ್ತು 8ನೇ ತರಗತಿ ವಿದ್ಯಾರ್ಥಿಗಳಿಗೆ ಪಬ್ಲಿಕ್ ಪರೀಕ್ಷೆ ನಡೆಸಲು ಸುಪ್ರೀಂಕೋರ್ಟ್ ಗ್ರೀನ್ ಸಿಗ್ನಲ್ ನೀಡಿದೆ.

ಸಾಕಷ್ಟು ಗೊಂದಲ, ಸುಪ್ರೀಂ ಕೋರ್ಟ್‌ ವಿಚಾರಣೆಯ ನಡುವಲ್ಲೇ ಇಂದಿನಿಂದ 5 ಮತ್ತು 8ನೇ ತರಗತಿ ವಿದ್ಯಾರ್ಥಿಗಳಿಗೆ ಬೋರ್ಡ್‌ ಪರೀಕ್ಷೆಗಳು (Public Exam 2023) ಆರಂಭವಾಗಿದೆ. ರಾಜ್ಯದಲ್ಲಿ ಇದೇ ಮೊದಲ ಬಾರಿಗೆ ಬೋರ್ಡ್‌ ಪರೀಕ್ಷೆ ನಡೆಯುತ್ತಿದ್ದು, ರಾಜ್ಯದ ಸರಕಾರಿ, ಅನುದಾನಿತ ಹಾಗೂ ಅನುದಾನ ರಹಿತ ಖಾಸಗಿ ಶಾಲೆಗಳಲ್ಲಿ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದಾರೆ. ಇಂದಿನಿಂದ ಪರೀಕ್ಷೆ ಆರಂಭಗೊಂಡಿದ್ದು, 5ನೇ ತರಗತಿ ವಿದ್ಯಾರ್ಥಿಗಳಿಗೆ ಮಾ.30ರ ವರೆಗೆ ಹಾಗೂ 8ನೇ ತರಗತಿ ವಿದ್ಯಾರ್ಥಿಗಳಿಗೆ ಏಪ್ರಿಲ್ 1ರವರೆಗೆ ಪರೀಕ್ಷೆ ನಡೆಯಲಿದೆ.

ಇದನ್ನೂ ಓದಿ : Public Exam 2023: 5 ಮತ್ತು 8ನೇ ತರಗತಿ ವಿದ್ಯಾರ್ಥಿಗಳಿಗೆ ಇಂದಿನಿಂದ ಬೋರ್ಡ್‌ ಪರೀಕ್ಷೆ, ಸುಪ್ರೀಂ ಕೋರ್ಟ್‌ನಲ್ಲಿ ವಿಚಾರಣೆ

ಕರ್ನಾಟಕ ರಾಜ್ಯ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಇದೇ ಮೊದಲ ಬಾರಿಗೆ 5 ಮತ್ತು 8 ನೇ ತರಗತಿ ವಿದ್ಯಾರ್ಥಿಗಳಿಗೆ ಬೋರ್ಡ್‌ ಪರೀಕ್ಷೆಯನ್ನು ಆಯೋಜಿಸಿದ್ದು, ರಾಜ್ಯದಲ್ಲಿ 20 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಎದುರಿಸುತ್ತಿದ್ದಾರೆ. ಪರೀಕ್ಷೆಗಳು ಮಧ್ಯಾಹ್ನದ ಅವಧಿಯಲ್ಲಿ ನಡೆಯಲಿವೆ. ಖಾಸಗಿ ಶಾಲೆಗಳ ಒಕ್ಕೂಟ ಹೈಕೋರ್ಟ್‌ ಮೆಟ್ಟಿಲೇರಿದ ಬೆನ್ನಲ್ಲೇ ಶಿಕ್ಷಣ ಇಲಾಖೆ ಆಯಾಯ ಶಾಲೆಗಳಲ್ಲಿಯೇ ಪರೀಕ್ಷೆ ನಡೆಯಲಿದೆ.

5th and 8th Class Public Examination: Supreme Court gives green light to conduct ‘Public Examination’

Comments are closed.