ಬೆಂಗಳೂರು : ಗುಣಮಟ್ಟದ ಶಿಕ್ಷಣ ನೀಡುವಲ್ಲಿ ವಿಫಲವಾಗಿರುವ ಹಿನ್ನೆಲೆಯಲ್ಲಿ ಕರ್ನಾಟಕದ ಆರು ಇಂಜಿನಿಯರ್ ಕಾಲೇಜುಗಳು ಬಂದ್ ಆಗಲಿದೆ. ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ (ವಿಟಿಯು) ಕಾಲೇಜುಗಳನ್ನು ಮುಚ್ಚುವಂರತೆ ಆದೇಶ ಹೊರಡಿಸಿದೆ. ಇತ್ತೀಚೆಗೆ ನಡೆದ ಕಾರ್ಯಕಾರಿ ಮಂಡಳಿ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.
ಬೆಂಗಳೂರಿನ ಆಲ್ಫಾ ಕಾಲೇಜ್ ಆಫ್ ಇಂಜಿನಿಯರಿಂಗ್, ಬೆಳಗಾವಿಯ ಶೇಖ್ ಇಂಜಿನಿಯರಿಂಗ್ ಕಾಲೇಜು, ಬೆಂಗಳೂರಿನ ಇಸ್ಲಾಮಿಯಾ ತಂತ್ರಜ್ಞಾನ ಸಂಸ್ಥೆ, ಚಾಮರಾಜನಗರದ ಏಕಲವ್ಯ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ಬೆಂಗಳೂರಿನಲ್ಲಿ ಶ್ರೀ ವಿನಾಯಕ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ಕೆಜಿಎಫ್ ಮತ್ತು ಬಿಟಿಎಲ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಮತ್ತು ಮ್ಯಾನೇಜ್‌ಮೆಂಟ್ ಕಾಲೇಜುಗಳು 2021-22ರ ಶೈಕ್ಷಣಿಕ ವರ್ಷದಿಂದ ಪ್ರವೇಶ ಪ್ರಕ್ರಿಯೆ ನಡೆಸದಂತೆ ಆದೇಶಿಸಿದೆ. ಅಲ್ಲದೇ ವಿದ್ಯಾರ್ಥಿಗಳು ಯಾವುದೇ ಕಾರಣಕ್ಕೆ ಈ ಕಾಲೇಜುಗಳಿಗೆ ದಾಖಲಾತಿಯಾಗದಂತೆ ಸೂಚನೆಯನ್ನು ನೀಡಿದೆ.
ಕಾಲೇಜು ವಿದ್ಯಾರ್ಥಿಗಳಿಗೆ ಗುಣಮಟ್ಟದ ಬೋಧನೆಯ ಜೊತೆಗೆ ಮೂಲಸೌಕರ್ಯಗಳನ್ನು ಒದಗಿಸಿಲ್ಲ. ಅಲ್ಲದೇ ವಾರ್ಷಿಕ ಸೀಟುಗಳನ್ನು ಭರ್ತಿ ಮಾಡುವಲ್ಲಿಯೂ ಕಾಲೇಜುಗಳು ವಿಫಲವಾಗಿವೆ. ಈಗಾಗಲೇ ಪ್ರವೇಶ ಪಡೆದಿರುವ ವಿದ್ಯಾರ್ಥಿಗಳನ್ನು ಬೇರೆ ಕಾಲೇಜುಗಳಿಗೆ ವರ್ಗಾವಣೆ ಮಾಡುವಂತೆ ಸೂಚಿಸಿದೆ.
2009 ರಿಂದಲೂ ವಿಟಿಯು ಜೊತೆ ಸಂಯೋಜಿತವಾಗಿರುವ 12 ಕಾಲೇಜುಗಳನ್ನು ವಿವಿಧ ಕಾರಣಗಳಿಗಾಗಿ ಮುಚ್ಚಲಾಗಿದೆ. ಅದರಲ್ಲಿ 6 ಕಾಲೇಜುಗಳನ್ನು 2018-19 ಮತ್ತು 2019-20ರ ಶೈಕ್ಷಣಿಕ ವರ್ಷಗಳಲ್ಲಿ ಮುಚ್ಚಲಾಗಿದೆ.
ಇದನ್ನೂ ಓದಿ : 1 ರಿಂದ 8 ತರಗತಿ ಆರಂಭ : ಪೋಷಕರ ಅಭಿಪ್ರಾಯ ಸಂಗ್ರಹಕ್ಕೆ ಸೂಚನೆ : ಸಚಿವ ನಾಗೇಶ್
ಇದನ್ನೂ ಓದಿ : ಕರಾವಳಿಯಲ್ಲಿ ತಗ್ಗದ ಕೊರೊನಾ ಅಬ್ಬರ : ಸದ್ಯಕ್ಕಿಲ್ಲ ಶಾಲಾರಂಭ