ಬ್ರಹ್ಮಾವರ : ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಬ್ರಹ್ಮಾವರ ತಾಲೂಕಿನ ಗುಂಡ್ಮಿ ಗ್ರಾಮದ ಯಕ್ಷಿಮಠದ ನಿವಾಸಿ ಅಕ್ಷತಾ ಡಿ. ಪೂಜಾರಿ ವಿಶಿಷ್ಟ ಸಾಧನೆ ಮಾಡಿದ್ದಾರೆ.

ವಾಣಿಜ್ಯಶಾಸ್ತ್ರ ವಿಭಾಗದಲ್ಲಿ 600 ಅಂಕಗಳ ಪೈಕಿ 577 ಅಂಕಗಳನ್ನು ಪಡೆಯುವ ಮೂಲಕ ಶೇ.96.17 ಅಂಕಗಳೊಂದಿಗೆ ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಅದ್ರಲ್ಲೂ ಬ್ಯುಸಿನೆಸ್ ಸ್ಟಡೀಸ್, ಅಕೌಂಟೆನ್ಸಿ, ಸ್ಟ್ಯಾಟಿಸ್ಟಿಕ್ಸ್ ಹಾಗೂ ಗಣಿತ ಶಾಸ್ತ್ರದಲ್ಲಿ 100ಕ್ಕೆ 100 ಅಂಕ ಪಡೆದುಕೊಂಡು ವಿಶಿಷ್ಟ ದಾಖಲೆ ಮಾಡಿದ್ದಾರೆ. ಅಕ್ಷತಾ ಡಿ. ಪೂಜಾರಿ ಅವರು ಉಡುಪಿಯ ಪೂರ್ಣಪ್ರಜ್ಞಾ ಪದವಿ ಪೂರ್ವ ಕಾಲೇಜಿನಲ್ಲಿ ವಿದ್ಯಾಭ್ಯಾಸವನ್ನು ಮಾಡಿದ್ದು, ಗುಂಡ್ಮಿಯ ದಿನಕರ ಪೂಜಾರಿ ಹಾಗೂ ಗೀತಾ ಪೂಜಾರಿ ಅವರ ಪುತ್ರಿಯಾಗಿರುತ್ತಾರೆ.