ಸರಕಾರಿ ಶಾಲೆಗಳನ್ನು ಆಂಗ್ಲ ಮಾಧ್ಯಮವಾಗಿ ಪರಿವರ್ತನೆ : ಅರ್ಜಿದಾರನಿಗೆ ಸುಪ್ರೀಂ ನೋಟಿಸ್

0

ನವದೆಹಲಿ : ಸರಕಾರಿ ಶಾಲೆಗಳನ್ನು ಆಂಗ್ಲ ಮಾಧ್ಯಮ ಶಾಲೆಗಳನ್ನಾಗಿ ಪರಿವರ್ತಿಸುವ ನಿಟ್ಟಿನಲ್ಲಿ ಆಂಧ್ರ ಪ್ರದೇಶ ಸರಕಾರ ಮುಂದಾಗಿದೆ. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ಸರ್ಕಾರ ಸಲ್ಲಿಸಿದ್ದ ಅರ್ಜಿಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಗುರುವಾರ ನೋಟಿಸ್ ಜಾರಿ ಮಾಡಿದೆ.

1ರಿಂದ 6ನೇ ತರಗತಿವರೆಗಿನ ಎಲ್ಲ ತೆಲುಗು ಮಾಧ್ಯಮದ ಶಾಲೆಗಳನ್ನೂ ಆಂಗ್ಲ ಮಾಧ್ಯಮದ ಶಾಲೆಗಳಾಗಿ ರೂಪಿಸಲು ಮುಂದಾಗಿತ್ತು. ಆದದೆ ಸರಕಾರದ ಕ್ರಮವನ್ನು ಪ್ರಶ್ನಿಸಿ ಎಲೂರು ಮೂಲದ ಡಾ. ಶ್ರೀನಿವಾಸ ಗುಂಟಪಲ್ಲಿ ಎಂಬವರು ಹೈಕೋರ್ಟ್ ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು.

ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್, ಆಂಧ್ರ ಸರ್ಕಾರ ಆದೇಶವನ್ನು ವಜಾಗೊಳಿಸಿತ್ತು. ಈ ಹಿನ್ನೆಲೆಯಲ್ಲಿ ಆಂಧ್ರ ಪ್ರದೇಶ ಸರಕಾರ ಸುಪ್ರೀಂ ಕೋರ್ಟ್ ಮೆಟ್ಟಿಲೇರಿತ್ತು.

ಆಂಧ್ರ ಸರ್ಕಾರ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳಾದ ಡಿ.ವೈ ಚಂದ್ರಚೂಡ್, ಇಂದೂ ಮಲ್ಹೋತ್ರಾ ಮತ್ತು ಕೆ.ಎಂ. ಜೋಸೆಫ್ ಅವರನ್ನೊಳಗೊಂಡ ಸುಪ್ರೀಂ ಪೀಠ, ಶ್ರೀನಿವಾಸ್ ಗುಂಟಿಪಲ್ಲಿ ಅವರಿಗೆ ಪ್ರತಿಕ್ರಿಯೆ ನೀಡುವಂತೆ ನೋಟಿಸ್ ಜಾರಿ ಮಾಡಿದೆ.

ಈಗಾಗಲೇ ವಿಡಿಯೋ ಕಾನ್ಫರೆನ್ಸ್ ಮೂಲಕ ಜಗನ್ ಸರ್ಕಾರದ ಪರ ವಾದ ಮಂಡಿಸಿದ ಹಿರಿಯ ವಕೀಲ ಕೆ ವಿ ವಿಶ್ವನಾಥನ್ ಅವರು, ಬಹುಪಾಲು ಪೋಷಕರು ಇಂಗ್ಲಿಷ್ ಶಿಕ್ಷಣ ಮಾಧ್ಯಮವಾಗಬೇಕೆಂದು ಬಯಸಿದ್ದರು ಮತ್ತು ಇದು ಸಂವಿಧಾನದ ಪ್ರಕಾರ ಪ್ರಗತಿಪರ ವಿಚಾರವಾಗಿದೆ ಎನ್ನುವ ಮೂಲಕ ಆಂಧ್ರ ಪ್ರದೇಶ ಸರ್ಕಾರದ ಆದೇಶವನ್ನು ಸಮರ್ಥಿಸಿಕೊಂಡಿದ್ದಾರೆ. ಇದೀಗ ಸುಪ್ರೀಂ ಕೋರ್ಟ್ ಆದೇಶ ಹೆಚ್ಚು ಮಹತ್ಚವವನ್ನು ಪಡೆದುಕೊಂಡಿದೆ.

Leave A Reply

Your email address will not be published.