Azim Premji Foundation Scholarship 2025: ಅಜೀಂ ಪ್ರೇಮ್‌ಜಿ ಫೌಂಡೇಶನ್ 2025–26ನೇ ಸಾಲಿನ ಅಜೀಂ ಪ್ರೇಮ್‌ಜಿ ವಿದ್ಯಾರ್ಥಿವೇತನಕ್ಕಾಗಿ ಅರ್ಜಿ ಆಹ್ವಾನಿಸಿದೆ.
ಅಧಿಕೃತ ಅಧಿಸೂಚನೆಯ ಪ್ರಕಾರ ಇದು 18 ರಾಜ್ಯಗಳಲ್ಲಿ ಸರ್ಕಾರಿ ಶಾಲೆಗಳಲ್ಲಿ ಓದುತ್ತಿರುವ ಬಾಲಕಿಯರಿಗೆ ಉನ್ನತ ಶಿಕ್ಷಣವನ್ನು ಪಡೆಯಲು ನೆರವು ನೀಡುತ್ತದೆ.
ಆಯ್ಕೆಯಾದ ವಿದ್ಯಾರ್ಥಿನಿಯರು ವರ್ಷಕ್ಕೆ 30,000 ರೂ. ವಿದ್ಯಾರ್ಥಿವೇತನವನ್ನು ಪಡೆಯುತ್ತಾರೆ. ಸರ್ಕಾರಿ ಶಾಲೆಗಳಲ್ಲಿ ಕಲಿತು 10 ಮತ್ತು 12 ನೇ ತರಗತಿಯಲ್ಲಿ ಉತ್ತೀರ್ಣರಾದ ಮತ್ತು ಮಾನ್ಯತೆ ಪಡೆದ ಉನ್ನತ ಶಿಕ್ಷಣ ಸಂಸ್ಥೆಯಲ್ಲಿ ಪ್ರವೇಶ ಪಡೆದ ಬಾಲಕಿಯರಿಗೆ ಈ ವಿದ್ಯಾರ್ಥಿವೇತನವನ್ನು ನೀಡಲಾಗುತ್ತದೆ.
ವಿದ್ಯಾರ್ಥಿನಿಯರು ತಮ್ಮ ಅಧ್ಯಯನವನ್ನು ಯಾವುದೇ ಅಡೆತಡೆಗಳಿಲ್ಲದೇ (ಶೈಕ್ಷಣಿಕ ವರ್ಷದಲ್ಲಿ ಯಾವುದೇ ವಿಷಯದಲ್ಲಿ ಅನುತ್ತೀರ್ಣಗೊಳ್ಳದೇ) ಮುಂದುವರಿಸಿದರೆ ಅಂತಹ ವಿದ್ಯಾರ್ಥಿಗೆ ಪೂರ್ಣ ಅವಧಿಗೆ ವಿದ್ಯಾರ್ಥಿವೇತನವು ಮುಂದುವರಿಯುತ್ತದೆ.
ಈ ವರ್ಷದ ಅರ್ಜಿ ಸಲ್ಲಿಕೆಯ ಕೊನೆಯ ದಿನಾಂಕ ಸೆಪ್ಟೆಂಬರ್ 30, 2025 ಆಗಿದೆ. ಈ ವಿದ್ಯಾರ್ಥಿವೇತನ ಪಡೆದುಕೊಳ್ಳಲು ಅವಶ್ಯಕವಾಗಿರುವ ಅರ್ಹತಾ ಮಾನದಂಡಗಳೇನು ಇಲ್ಲಿದೆ ಓದಿ.
ಅಜೀಂ ಪ್ರೇಮ್‌ಜಿ ವಿದ್ಯಾರ್ಥಿವೇತನ ಅರ್ಹತಾ ಮಾನದಂಡಗಳು
ಅಜೀಂ ಪ್ರೇಮ್‌ಜಿ ವಿದ್ಯಾರ್ಥಿವೇತನ 2025, ಪಡೆದುಕೊಳ್ಳಲು ವಿದ್ಯಾರ್ಥಿನಿಯರು ಈ ಕೆಳಗಿನ ಎಲ್ಲಾ ಷರತ್ತುಗಳನ್ನು ಪೂರೈಸಬೇಕು. ಅದೇನೆಂದರೆ….
- ವಿದ್ಯಾರ್ಥಿನಿಯರು ಕಡ್ಡಾಯವಾಗಿ ಸರ್ಕಾರಿ ಶಾಲೆಯಲ್ಲಿಯೇ 10 ಮತ್ತು 12ನೇ ತರಗತಿ ಪೂರ್ಣಗೊಳಿಸಿರಬೇಕು.
- ವಿದ್ಯಾರ್ಥಿನಿಯರು ಸರ್ಕಾರಿ, ವಿಶ್ವವಿದ್ಯಾಲಯದಿಂದ ಮಾನ್ಯತೆ ಪಡೆದ ಪದವಿಪೂರ್ವ ಕಾಲೇಜು ಅಥವಾ ಡಿಪ್ಲೊಮಾ ಕಾಲೇಜಿನಲ್ಲಿ ರೆಗ್ಯೂಲರ್ ವಿದ್ಯಾರ್ಥಿಯಾಗಿ ಪ್ರವೇಶ ಪಡೆದಿರಬೇಕು.
- 10 ಮತ್ತು 12 ನೇ ತರಗತಿ ಎರಡನ್ನೂ ಅರುಣಾಚಲ ಪ್ರದೇಶ, ಅಸ್ಸಾಂ, ಬಿಹಾರ, ಛತ್ತೀಸ್‌ಗಢ, ಜಾರ್ಖಂಡ್, ಕರ್ನಾಟಕ, ಮಧ್ಯಪ್ರದೇಶ, ಮಣಿಪುರ, ಮೇಘಾಲಯ, ಮಿಜೋರಾಂ, ನಾಗಾಲ್ಯಾಂಡ್, ಒಡಿಶಾ, ಪುದುಚೇರಿ, ರಾಜಸ್ಥಾನ, ಸಿಕ್ಕಿಂ, ತೆಲಂಗಾಣ, ತ್ರಿಪುರ, ಉತ್ತರ ಪ್ರದೇಶ, ಅಥವಾ ಉತ್ತರಾಖಂಡ ರಾಜ್ಯಗಳಲ್ಲಿ ಪೂರ್ಣಗೊಳಿಸಿರಬೇಕು.
ಇದನ್ನೂ ಓದಿ: ಸಿಬಿಎಸ್‌ಇ 2026 ಪರೀಕ್ಷೆ ನಿಯಮದಲ್ಲಿ ಮಹತ್ವದ ಬದಲಾವಣೆ: ಯಾರಿಗೆ ಅನುಕೂಲ?
ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳು
- 2×2 ಇಂಚು ಗಾತ್ರದ ಪಾಸ್‌ಪೋರ್ಟ್ ಸೈಜ್‌ನ ಭಾವಚಿತ್ರ.
- ಸ್ಕ್ಯಾನ್ ಮಾಡಿದ ಸಹಿ
*ನಿಮ್ಮ ಹೆಸರು, ಭಾವಚಿತ್ರ, ಜನ್ಮ ದಿನಾಂಕ ಮತ್ತು ಲಿಂಗವನ್ನು ಸ್ಪಷ್ಟವಾಗಿ ಉಲ್ಲೇಖಿಸಿರುವ ಆಧಾರ್ ಕಾರ್ಡ್‌ನ ಸ್ಕ್ಯಾನ್ ಮಾಡಿದ ಚಿತ್ರ. - ಬ್ಯಾಂಕ್ ಪಾಸ್‌ಬುಕ್‌ನ ಮುಖಪುಟದ ಸ್ಕ್ಯಾನ್ ಮಾಡಿದ ಚಿತ್ರ.
- 10 ನೇ ತರಗತಿಯ ಅಂಕಪಟ್ಟಿ
- 12ನೇ ತರಗತಿಯ ಅಂಕಪಟ್ಟಿ
ಅಜೀಂ ಪ್ರೇಮ್‌ಜಿ ವಿದ್ಯಾರ್ಥಿವೇತನ 2025 ಕ್ಕೆ ಅರ್ಜಿ ಸಲ್ಲಿಸಲಿರುವ ಅಭ್ಯರ್ಥಿಗಳು ಈ ಮೇಲಿನ ದಾಖಲೆಗಳನ್ನು ಕಡ್ಡಾಯವಾಗಿ ಅಪ್‌ಲೋಡ್ ಮಾಡಬೇಕಾಗುತ್ತದೆ.
ಅಜೀಂ ಪ್ರೇಮ್‌ಜಿ ವಿದ್ಯಾರ್ಥಿವೇತನ 2025 ಅರ್ಜಿ ಸಲ್ಲಿಕೆ ಹೇಗೆ?
- ಅಜೀಂ ಪ್ರೇಮ್‌ಜಿ ವಿದ್ಯಾರ್ಥಿವೇತನ 2025 ಅರ್ಜಿ ಸಲ್ಲಿಸಲು ಮೊದಲು ಫೌಂಡೇಶನ್‌ನ ಅಧಿಕೃತ ವೆಬ್‌ಸೈಟ್ azimpremjifoundation.org ಗೆ ಭೇಟಿ ಕೊಡಿ.
- ಹೋಮ್ ಪೇಜ್‌ನಲ್ಲಿರುವ ‘ವಾಟ್ ವಿ ಡೂ’ ವಿಭಾಗಕ್ಕೆ ಹೋಗಿ ಅಲ್ಲಿ ಎಡ್ಯುಕೇಷನ್ ಮೇಲೆ ಕ್ಲಿಕ್ಕಿಸಿ.
- ಅಲ್ಲಿ ನೀವು ಹೊಸದಾಗಿ ಅರ್ಜಿ ಸಲ್ಲಿಸುತ್ತಿದ್ದರೆ ರಜಿಸ್ಟರ್ ಮೇಲೆ ಕ್ಲಿಕ್ಕಿಸಿ. ಈಗಾಗಲೇ ರಜಿಸ್ಟರ್ ಮಾಡಿಕೊಂಡಿದ್ದರೆ ಲಾಗಿನ್ ಆಗಿ.
- ನಿಮ್ಮ ಯೂಸರ್ ನೇಮ್ ಮತ್ತು ಪಾಸ್‌ವರ್ಡ್ ನೀಡಿ ಲಾಗ್‌ಇನ್ ಆಗಿ.
- ಅರ್ಜಿ ನಮೂನೆಯಲ್ಲಿ ಕೇಳಿರುವ ಮಾಹಿತಿಯನ್ನು ಸರಿಯಾಗಿ ತುಂಬಿ.
- ಅಪ್‌ಲೋಡ್ ಮಾಡಬೇಕಾದ ದಾಖಲೆಗಳನ್ನು ಅಪ್‌ಲೋಡ್ ಮಾಡಿ.
- ಬಳಿಕ ನೀವು ನೀಡಿದ ಎಲ್ಲ ಮಾಹಿತಿಗಳು ಸರಿಯಾಗಿವೆಯೇ ಎಂದು ಇನ್ನೊಮ್ಮೆ ಪರಿಶೀಲಿಸಿ ಅರ್ಜಿ ಸಲ್ಲಿಸಿ.
- ಭವಿಷ್ಯದ ಉಲ್ಲೇಖಕ್ಕಾಗಿ ಅರ್ಜಿ ಸಲ್ಲಿಸಿದ ಪ್ರತಿಯ ಪ್ರಿಂಟ್‌ಔಟ್ ತೆಗೆದುಕೊಳ್ಳಿ.
ಇದನ್ನೂ ಓದಿ: ದಸರಾ ರಜೆ : ಶಾಲೆಗೆ 13 ದಿನ, ಕಾಲೇಜಿಗೆ 8 ದಿನ ರಜೆ ಘೋಷಣೆ
(Azim Premji Foundation Scholarship 2025 eligible girl student apply for higher education)



