ಬೆಂಗಳೂರಲ್ಲಿ ಮೌಲ್ಯಮಾಪನ ಮುಂದೂಡಿಕೆ : ಸ್ಪಷ್ಟನೆ ಕೊಟ್ಟ ಸಚಿವ ಸುರೇಶ್ ಕುಮಾರ್

0

ಬೆಂಗಳೂರು : ಲಾಕ್​ಡೌನ್​ ಘೋಷಿಸಿರುವ ಹಿನ್ನೆಲೆಯಲ್ಲಿ ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಎಸ್ಎಸ್ಎಲ್ ಸಿ ಪರೀಕ್ಷೆಯ ಮೌಲ್ಯ ಮಾಪನವನ್ನು ಮುಂದೂಡಲಾಗಿದೆ ಎಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ.

ನಾಳೆಯಿಂದ ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಎಸ್ಎಸ್ಎಲ್ ಸಿ ಪರೀಕ್ಷೆಯ ಮೌಲ್ಯ ಮಾಪನ ಆರಂಭವಾಗಲಿದ್ದು, ರಾಜ್ಯ ಸರ್ಕಾರವು ಜುಲೈ 14 ರಿಂದ 22ರವರೆಗೆ ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಗಳಲ್ಲಿ ಲಾಖ್​ಡೌನ್​ ವಿಧಿಸಿದೆ. ಈ ಕಾರಣಕ್ಕೆ ಮೌಲ್ಯಮಾಪನ ಕಾರ್ಯವನ್ನು ಮುಂದೂಡಲಾಗಿದೆ. ಉಳಿದಂತೆ ರಾಜ್ಯದ ಇತರ ಜಿಲ್ಲೆಗಳಲ್ಲಿ ಮೌಲ್ಯ ಮಾಪನ ಕಾರ್ಯ ಎಂದಿನಂತೆಯೇ ನಡೆಯಲಿದೆ. ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಗಳ ಮೌಲ್ಯಮಾಪನ ದಿನಾಂಕವನ್ನು ಮುಂದಿನ ದಿನಗಳಲ್ಲಿ ನಿರ್ಧರಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.

ಕೇವಲ ಒಂದು ವಾರದೊಳಗೆ ಮೌಲ್ಯ ಮಾಪನ ಪ್ರಕ್ರಿಯೆಯನ್ನು ಮುಗಿಸಲು ಸೂಚನೆಯನ್ನು ನೀಡಲಾಗಿದ್ದು, 55 ವರ್ಷಕ್ಕೆ ಮೇಲ್ಪಟ್ಟವರು ಹಾಗೂ ಅನಾರೋಗ್ಯಪೀಡಿತ ಮೌಲ್ಯಮಾಪಕರು ಪರೀಕ್ಷಾ ಕರ್ತವ್ಯದಿಂದ ಹೊರಗಿರಲು ಬಯಸಿದರೆ ಅವಕಾಶ ನೀಡಲಾಗುತ್ತದೆ. ಈ ಬಾರಿ ವಲಸೆ ವಿದ್ಯಾರ್ಥಿಗಳ ಉತ್ತರ ಪತ್ರಿಕೆಗಳನ್ನು ಮೌಲ್ಯಮಾಪನ ಮಾಡಿ ಅಂಕಗಳನ್ನು ಪರೀಕ್ಷೆ ಬರೆದ ಕೇಂದ್ರದ ವಿದ್ಯಾರ್ಥಿಗಳ ಉತ್ತರ ಪತ್ರಿಕೆಗಳನ್ನು ಎಲ್ಲಿ ಮೌಲ್ಯಮಾಪನ ಮಾಡಲಾಗುತ್ತದೋ ಅದೇ ಕೇಂದ್ರದಲ್ಲಿ ಎಂಟ್ರೀ ಮಾಡುವ ಸೌಲಭ್ಯ ಕಲ್ಪಿಸಲಾಗಿದೆ ಹಾಗೂ ಡೇಟಾ ಎಂಟ್ರೀ ಆಪರೇಟರ್ಸ್ ಗಳಿಗೆ ಸೂಕ್ತ ತರಬೇತಿ ನೀಡಲಾಗಿದೆ.

Leave A Reply

Your email address will not be published.