ಪದವಿ ವಿದ್ಯಾರ್ಥಿಗಳಿಗೆ ಬಿಗ್ ಶಾಕ್ : ಹಾಜರಾತಿ ಕಡ್ಡಾಯ, ಶುಲ್ಕ ಕಡಿತವೂ ಇಲ್ಲ !

ಮೈಸೂರು : ಕೊರೊನಾ ವೈರಸ್ ಸೋಂಕಿನ ನಡುವಲ್ಲೇ ಕಾಲೇಜುಗಳು ಪುನರಾರಂಭಗೊಂಡಿವೆ. ಈ ಬಾರಿ ಶೈಕ್ಷಣಿಕ ವರ್ಷ ತಡವಾಗಿ ಆರಂಭವಾಗಿರೋದ್ರಿಂದಾಗಿ ಶುಲ್ಕ ಕಡಿತವಾಗುತ್ತೆ ಅನ್ನೋ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ರಾಜ್ಯ ಸರಕಾರ ಬಿಗ್ ಶಾಕ್ ಕೊಟ್ಟಿದೆ.

ಪ್ರಸಕ್ತ ಶೈಕ್ಷಣಿಕ ಸಾಲಿನಲ್ಲಿ ಪದವಿ ಕಾಲೇಜುಗಳ ಶುಲ್ಕದಲ್ಲಿ ಕಡಿತ ಇಲ್ಲ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ್ ಸ್ಪಷ್ಟಪಡಿಸಿದ್ದಾರೆ. ಕೋವಿಡ್ ಹಿನ್ನೆಲೆಯಲ್ಲಿ ಸ್ನಾತಕ, ಸ್ನಾತಕೋತ್ತರ ಕೋರ್ಸ್ ಗಳ ಶುಲ್ಕದಲ್ಲಿ ಕಡಿತ ಮಾಡುವುದು ಆಯಾ ಶಿಕ್ಷಣ ಸಂಸ್ಥೆಗಳಿಗೆ ಬಿಟ್ಟ ವಿಚಾರ. ಇದರಲ್ಲಿ ಸರ್ಕಾರ ಮಧ್ಯಪ್ರವೇಶಿಸುವುದಿಲ್ಲ. ಈ ಬಗ್ಗೆ ಆಯಾ ಕಾಲೇಜುಗಳೇ ನಿರ್ಧಾರ ಮಾಡಲಿ ಎಂದು ಹೇಳಿದ್ದಾರೆ.

ಅಷ್ಟೇ ಅಲ್ಲಾ ವಿದ್ಯಾರ್ಥಿಗಳಗೆ ರಾಜ್ಯ ಸರಕಾರ ಹಾಜರಾತಿಯನ್ನು ಕಡ್ಡಾಯಗೊಳಿಸಿದೆ. ಈ ಬಾರಿ ಕೋವಿಡ್ ವೈರಸ್ ಸೋಂಕಿನ ಹಿನ್ನೆಲೆಯಲ್ಲಿ ಆಪ್ ಲೈನ್ ಮತ್ತು ಆನ್ ಲೈನ್ ತರಗತಿಗಳು ನಡೆಯುತ್ತಿವೆ. ವಿದ್ಯಾರ್ಥಿಗಳು ಯಾವುದಾದರೊಂದು ತರಗತಿಗೆ ಕಡ್ಡಾಯವಾಗಿ ಹಾಜರಾಗಲೇ ಬೇಕಾಗಿದೆ. ಪರಿಸ್ಥಿತಿಯನ್ನು ನೋಡಿಕೊಂಡು ಪೂರ್ಣ ಪ್ರಮಾಣದಲ್ಲಿ ಶೈಕ್ಷಣಿಕ ಚಟುವಟಿಕೆಗಳನ್ನು ಆರಂಭಿಸಲಾಗುವುದು ಎಂದಿದ್ದಾರೆ.

Comments are closed.