KEA Exams Hijab New Rules : ರಾಜ್ಯದಲ್ಲಿ ಸದ್ಯ ಸದ್ದು ಮಾಡ್ತಿರೋದು ಪರೀಕ್ಷಾ ಅಕ್ರಮ. ಹೀಗಾಗಿ ತಡವಾಗಿಯಾದರೂ ಎಚ್ಚೆತ್ತುಕೊಂಡಿರೋ ಕೆಇಎ ನಕಲು ತಡೆಯಲು ಕಠಿಣ ನಿಯಮಗಳ ಜೊತೆ ಸಿದ್ಧವಾಗಿದೆ. ವಿವಿಧ ನಿಗಮ ಮಂಡಳಿಗಳಿಗೆ ಇದೇ ತಿಂಗಳ 18 ಹಾಗೂ 19 ರಂದು ನಡೆಯಲಿದ್ದು, ಈ ಪರೀಕ್ಷೆಗಳಿಗೆ ಕಠಿಣ ನಿಯಮ ರೂಪಿಸಲಾಗಿದೆ.ಆದರೆ ಇದೇ ವೇಳೆ ಹಿಜಾಬ್ (Hijab) ಗೆ ಅವಕಾಶ ನೀಡಿರೋದು ಈಗ ವಿವಾದಕ್ಕೆ ಕಾರಣವಾಗಿದೆ.
ಪಿಎಸ್ ಐ ಸೇರಿದಂತೆ ಪರೀಕ್ಷಾ ಅಕ್ರಮಗಳಿಂದ ಎಚ್ಚೆತ್ತುಕೊಂಡ ಕೆಇಎ ನಕಲು ತಡೆಯಲು ನಿಗಮ ಮಂಡಳಿಗಳ ಪರೀಕ್ಷೆಗೆ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದೆ. ತಪಾಸಣೆಗೆ ಪೊಲೀಸ್ ನಿಯೋಜನೆ, ಮೆಟಲ್ ಡಿಟೆಕ್ಟರ್ ಬಳಕೆ ಮಾಡಲು ನಿರ್ಧರಿಸಲಾಗಿದ್ದು, ಈ ಬಾರಿ ಹಿಜಾಬ್ ಧರಿಸಲು ಅವಕಾಶ ನೀಡಲಾಗಿದೆ.
ಈ ಬಗ್ಗೆ ಕೆಇಎ ಕಾರ್ಯನಿರ್ವಾಹಕ ನಿರ್ದೇಶಕಿ ಎಸ್ ರಮ್ಯಾ ಮಾಹಿತಿ ನೀಡಿದ್ದಾರೆ.ಹಾಗಿದ್ದರೇ ಪರೀಕ್ಷೆಗೆ ಯಾವೆಲ್ಲ ನಿಯಮಗಳನ್ನು ರೂಪಿಸಲಾಗಿದೆ ಅನ್ನೋದನ್ನು ನೋಡೋದಾದರೇ,

ಇದನ್ನೂ ಓದಿ : ಟ್ಯೂಶನ್ ಮಾಫಿಯಾಗೆ ಬೀಳುತ್ತಾ ಕಡಿವಾಣ: ಸರ್ಕಾರದಿಂದ ಹೊರಬಿತ್ತು ಖಡಕ್ ಆದೇಶ
- ಪರೀಕ್ಷೆಯ ದಿನದಂದು ತುಂಬುತೋಳಿನ ಶರ್ಟ್ ಧರಿಸುವಂತಿಲ್ಲ.
- ಅಭ್ಯರ್ಥಿಗಳಿಗೆ ಜೇಬು ಇಲ್ಲದ ಅಥವಾ ಕಡಿಮೆ ಜೇಬಿರುವ ಪ್ಯಾಂಟ್ ಧರಿಸಿ ಪರೀಕ್ಷೆಗೆ ಹಾಜರಾಗಲು ಸೂಚಿಸಲಾಗಿದೆ.
- ಕುರ್ತಾ ಪೈಜಾಮ, ಜೀನ್ಸ್ ಪ್ಯಾಂಟ್ ಧರಿಸಿ ಪರೀಕ್ಷೆಗೆ ಹಾಜರಾಗಲು ಅವಕಾಶ ಇರುವುದಿಲ್ಲ
- ಧರಿಸುವ ಬಟ್ಟೆಗಳು ಹಗುರವಾಗಿದ್ದು ದೊಡ್ಡ ಎಂಬ್ರಾಯಿಡರಿ, ಜಿಪ್ ಪಾಕೆಟ್‌ಗಳು, ದೊಡ್ಡ ಬಟನ್‌ಗಳು ಇರಬಾರದು
- ಅಭ್ಯರ್ಥಿಗಳು ಶೂ ಹಾಕಿಕೊಂಡು ಪರೀಕ್ಷೆಗೆ ಹಾಜರಾಗುವುದನ್ನು ಕಟ್ಟುನಿಟ್ಟಾಗಿ ನಿಷೇಧ
- ತೆಳುವಾದ ಅಡಿಭಾಗ ಇರುವ ಚಪ್ಪಲಿಗಳನ್ನು ಧರಿಸುವುದು ಸೂಕ್ತ
- ಮಹಿಳಾ ಅಭ್ಯರ್ಥಿಗಳಿಗೆ ಮಂಗಳಸೂತ್ರ ಮತ್ತು ಕಾಲುಂಗುರ ಮಾತ್ರ ಅವಕಾಶ
- ಉಳಿದಂತೆ ಯಾವುದೇ ಅಭ್ಯರ್ಥಿಯು ಕುತ್ತಿಗೆಯ ಸುತ್ತ ಲೋಹದ ಆಭರಣ ಧರಿಸುವುದು, ಅಥವಾ ಕಿವಿಯೋಲೆ, ಉಂಗುರ, ಕಡಗ ಧರಿಸುವುದ ನಿರ್ಬಂಧ
- ಬ್ಲೂಟೂತ್ ಸಾಧನ ಬಳಕೆಗೆ ಆಸ್ಪದವಾಗಬಾರದೆಂದು ತಲೆಯ ಮೇಲೆ ಟೋಪಿ ಅಥವಾ ಯಾವುದೇ ವಸ್ತ್ರ ಧರಿಸುವುದಕ್ಕೆ ನಿರ್ಬಂಧ
- ಅಂತಯೇ, ಬಾಯಿ, ಕಿವಿ ಹಾಗೂ ತಲೆ ಮುಚ್ಚುವ ರೀತಿಯಲ್ಲಿ ಯಾವುದೇ ವಸ್ತ್ರ ಧರಿಸುವುದನ್ನು ನಿಷೇಧ
- ಯಾವುದೇ ರೀತಿಯ ಮಾಸ್ಕ್ ಸಹ ಧರಿಸುವಂತಿಲ್ಲ
- ಎಲೆಕ್ಟ್ರಾನಿಕ್ ವಸ್ತುಗಳು, ಮೊಬೈಲ್ ಫೋನ್, ಪೆನ್ ಡ್ರೈವ್, ಇಯರ್ ಫೋನ್,
- ಮೈಕ್ರೋಫೋನ್, ಮತ್ತು ಕೈಗಡಿಯಾರಗಳನ್ನು ಪರೀಕ್ಷಾ ಕೊಠಡಿಯೊಳಗೆ ಅನುಮತಿಯಿಲ್ಲ
- ಪರೀಕ್ಷಾ ಕೊಠಡಿ ಒಳಕ್ಕೆ ತಿನ್ನುವ ಪದಾರ್ಥ ತೆಗೆದುಕೊಂಡು ಹೋಗುವಂತಿಲ್ಲ.
- ಪೆನ್ಸಿಲ್, ಪೇಪರ್, ಎರೇಸರ್, ಜಾಮಿಟ್ರಿ ಬಾಕ್ಸ್ ಮತ್ತು ಲಾಗ್ ಟೇಬಲ್ ಗಳನ್ನು ಪರೀಕ್ಷಾ ಕೇಂದ್ರದೊಳಕ್ಕೆ ತೆಗೆದುಕೊಂಡು ಹೋಗುವಂತಿಲ್ಲ
- ಪ್ರವೇಶಪತ್ರ ತರುವುದು ಕಡ್ಡಾಯ. ಇತ್ತೀಚಿನ ಎರಡು ಪಾಸ್ ಪೋರ್ಟ್ ಅಳತೆಯ ಫೋಟೋ ಕೊಂಡೊಯ್ಯಬೇಕು
- ಸರ್ಕಾರದಿಂದ ಮಾನ್ಯವಾದ ಫೋಟೋ ಗುರುತಿನ ಚೀಟಿ ಹೊಂದಿರುವುದು ಕೂಡ ಕಡ್ಡಾಯ
ಪರೀಕ್ಷೆಯ ಕೊನೆಯ ಬೆಲ್ ಆಗುವವರೆಗೂ ಅಭ್ಯರ್ಥಿಗಳು ಪರೀಕ್ಷಾ ಕೊಠಡಿಯಿಂದ ಹೊರಗೆ ಹೋಗಲು ಅನುಮತಿ ಇಲ್ಲ ಎಂಬುದನ್ನು ಸೇರಿದಂತೆ ಹಲವು ನಿಯಮ ರೂಪಿಸಲಾಗಿದೆ.

ಇದನ್ನೂ ಓದಿ : ಶಾಲೆಗಳಿಗೆ ಸರಕಾರದ ಹೊಸ ರೂಲ್ಸ್ : ವಿದ್ಯಾಂಜಲಿ 2.0 ಪೋರ್ಟಲ್‌ನಲ್ಲಿ ನೋಂದಣಿ ಕಡ್ಡಾಯ
ಆದರೆ ಈ ಎಲ್ಲ ಕಠಿಣ ನಿಯಮಗಳ ಮಧ್ಯೆಯೂ ಕೆಇಎ ಮುಸ್ಲಿಂ ವಿದ್ಯಾರ್ಥಿನಿಯರಿಗೆ ಹಿಜಾಬ್ ಧರಿಸಿ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿದೆ. ಈ ವಿಚಾರ ಈಗ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಹಿಂದೂ ಯುವತಿಯರಿಗೆ ಕಿವಿಯೊಲೆ,ಬಳೆಧರಿಸಲು ನಿರ್ಬಂಧವಿದೆ. ಆದರೆ ಮುಸ್ಲಿಂ ಮಹಿಳೆಯರು ಹಿಜಾಬ್ ಧರಿಸಲು ಅವಕಾಶ ನೀಡಿರೋದು ಎಷ್ಟು ಸರಿ ಎಂದು ಹಿಂದೂ ಪರ ಸಂಘಟನೆ ಕಾರ್ಯಕರ್ತರು ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಇನ್ನೊಂದೆಡೆ ಮುಸ್ಲಿಂ ಯುವತಿಯರಿಗೆ ಹಿಜಾಬ್ ಧರಿಸಿ ಪರೀಕ್ಷೆ ಬರೆಯಲು ಅವಕಾಶ ನೀಡಿರೋದನ್ನು ಕೆಇಎ ನಿರ್ದೇಶಕಿ ರಮ್ಯ ಖಚಿತಪಡಿಸಿದ್ದು, ಕೇವಲ ಬೆರಳೆಣಿಕೆ ಸಂಖ್ಯೆಯ ವಿದ್ಯಾರ್ಥಿನಿಯರಿದ್ದಾರೆ. ಹೀಗಾಗಿ ಅವಕಾಶ ನೀಡಲಾಗಿದೆ. ಆದರೆ ಪರೀಕ್ಷಾ ಕೇಂದ್ರಕ್ಕೆ ಎರಡು ಗಂಟೆ ಮೊದಲೆ ಬರಲು ಸೂಚಿಸಲಾಗಿದೆ ಎಂದಿದ್ದಾರೆ.
ಇದನ್ನೂ ಓದಿ : 5,8,9ನೇ ತರಗತಿಗೆ ಪಬ್ಲಿಕ್ ಪರೀಕ್ಷೆ : ರಾಜ್ಯ ಸರಕಾರದಿಂದ ಅಧಿಸೂಚನೆ ಪ್ರಕಟ
Cant wear full sleeve shirt, can wear hijab Outrage over Karnataka government new rules in KEA Exams