ನವದೆಹಲಿ : ಸಿಬಿಎಸ್ಇ ( ಕೇಂದ್ರ ಪ್ರೌಢಶಾಲಾ ಶಿಕ್ಷಣ ಮಂಡಳಿ) 10 ಮತ್ತು 12ನೇ ತರಗತಿಯ ಬಾಕಿ ಉಳಿದಿರುವ ಪರೀಕ್ಷೆಗಳನ್ನು ನಡೆಸಲು ಮುಂದಾಗಿದೆ. ಈ ಹಿನ್ನೆಲೆಯಲ್ಲಿ ಇಂದು ಸಂಜೆ 5 ಗಂಟೆಗೆ ಪರೀಕ್ಷಾ ವೇಳಾಪಟ್ಟಿ ಪ್ರಕಟಿಸುವುದಾಗಿ ಕೇಂದ್ರ ಶಿಕ್ಷಣ ಸಚಿವ ರಮೇಶ್ ಪೊಖ್ರಿಯಾಲ್ ತಿಳಿಸಿದ್ದಾರೆ.

ಕೊರೊನಾ ಲಾಕ್ ಡೌನ್ ಹಿನ್ನೆಲೆಯಲ್ಲಿ ಸಿಬಿಎಸ್ಇ ತರಗತಿಗಳ ಪರೀಕ್ಷೆಯನ್ನು ಮುಂದೂಡಲಾಗಿತ್ತು. ಇದೀಗ ದೇಶದಾದ್ಯಂತ ಲಾಕ್ ಡೌನ್ ಆದೇಶ ಜಾರಿಯಲ್ಲಿರುವಂತೆಯೇ ಕೇಂದ್ರ ಶಿಕ್ಷಣ ಇಲಾಖೆ ಪರೀಕ್ಷೆ ಮುಂದಾಗಿದೆ. 10ನೇ ತರಗತಿಯ ವಿದ್ಯಾರ್ಥಿಗಳಿಗೆ ಜುಲೈ 1 ರಿಂದ 15ರೊಳಗೆ 10ನೇ ಮತ್ತು 12ನೇ ತರಗತಿಯ ಪರೀಕ್ಷೆಗಳನ್ನು ನಡೆಸುವುದಾಗಿ ಶಿಕ್ಷಣ ಮಂಡಳಿ ಹೇಳಿತ್ತು, ಅಲ್ಲದೇ ಅಗಸ್ಟ್ ತಿಂಗಳಿನಲ್ಲಿ ಫಲಿತಾಂಶ ಪ್ರಕಟವಾಗುವ ಸಾಧ್ಯತೆಯಿದೆ.
