12ನೇ ತರಗತಿ ಪರೀಕ್ಷೆ ರದ್ದು : ಪ್ರಧಾನಿ ಮೋದಿ ಮಹತ್ವದ ಆದೇಶ

ನವದೆಹಲಿ : ಕೋವಿಡ್ ವೈರಸ್ ಸೊಕಂಕಿನ ಹಿನ್ನೆಲೆಯಲ್ಲಿ ದೇಶದಾದ್ಯಂತ ಸಿಬಿಎಸ್ಇ 12ನೇ ಪರೀಕ್ಷೆಯನ್ನು ರದ್ದುಗೊಳಿಸಿ ಕೇಂದ್ರ ಸರಕಾರ ಮಹತ್ವದ ಆದೇಶ ಹೊರಡಿಸಿದೆ.

ಕೊರೊನಾ ಸೋಂಕಿನ ನಡುವಲ್ಲೇ ಸಿಬಿಎಸ್‌ಇ 12ನೇ ತರಗತಿ ಪರೀಕ್ಷೆಯನ್ನು ನಡೆಸಬೇಕೇ, ಬೇಡವೇ ಎನ್ನುವ ಕುರಿತಂತೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಇಂದು ಉನ್ನತ ಮಟ್ಟದ ಅಧಿಕಾರಿಗಳ ಸಭೆ ನಡೆಯಿತು. ಈ ಸಭೆಯಲ್ಲಿ 12ನೇ ತರಗತಿ ಪರೀಕ್ಷೆಯನ್ನು ರದ್ದು ಪಡಿಸುವ ನಿರ್ಧಾರವನ್ನು ಕೈಗೊಳ್ಳಲಾಗಿದೆ.

ಸಿಬಿಎಸ್ಇ 12ನೇ ತರಗತಿ ಪರೀಕ್ಷೆಯನ್ನು ರದ್ದುಗೊಳಿಸು ವಂತೆ ಕೋರಿ ವಕೀಲರೊಬ್ಬರು ಸುಪ್ರೀಂ ಕೋರ್ಟ್ ಗೆ ಮನವಿ‌ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಕೇಂದ್ರ ಸರಕಾರ ಎರಡು ದಿನಗಳ ಕಾಲಾವಕಾಶ ವನ್ನು ಕೇಳಿತ್ತು. ಕೋವಿಡ್ ಪರಿಸ್ಥಿತಿ ಯನ್ನು ಗಮನದಲ್ಲಿಟ್ಟುಕೊಂಡು ಈ ಕುರಿತು ಕೇಂದ್ರ ಸರ್ಕಾರ ತೀರ್ಮಾನವನ್ನು ಕೈಗೊಂಡಿದೆ.

Comments are closed.