CBSE 10 ಮತ್ತು 12ನೇ ತರಗತಿಯ ಪರೀಕ್ಷೆಗಳು ರದ್ದು

0

ವದೆಹಲಿ : ದೇಶದಲ್ಲಿ ಕೊರೊನಾ ವೈರಸ್ ಸೋಂಕು ಹರಡುತ್ತಿರುವ ನಡುವಲ್ಲೇ ಜುಲೈ 1 ರಿಂದ 15ರ ವರೆಗೆ ಸಿಬಿಎಸ್ಇ ಯ 10 ಮತ್ತು 12ನೇ ತರಗತಿಯ ಪರೀಕ್ಷೆಗಳು ನಿಗದಿಯಾಗಿತ್ತು. ಆದರೆ ಸಿಬಿಎಸ್ಇ ಬೋರ್ಡ್ ಇದೀಗ ಸಿಬಿಎಸ್ಇಯ 10 ಮತ್ತು 12ನೇ ತರಗತಿಯ ಪರೀಕ್ಷೆಗಳನ್ನೇ ರದ್ದು ಮಾಡಿ ಆದೇಶ ಹೊರಡಿಸಿದೆ.

ಮಹಾರಾಷ್ಟ್ರ, ತಮಿಳುನಾಡು ಮತ್ತು ದೆಹಲಿಯಲ್ಲಿ ಪರೀಕ್ಷೆ ನಡೆಸಲು ಅಸಾಧ್ಯವಾದ ಪರಿಸ್ಥಿತಿ ನಿರ್ಮಾಣವಾಗಿದೆ. ಹೀಗಾಗಿ ದೇಶದಾದ್ಯಂತ ಪರೀಕ್ಷೆಗಳನ್ನು ರದ್ದು ಮಾಡಲಾಗಿದೆ ಎಂದು ಸಿಬಿಎಸ್ಇ ಬೋರ್ಡ್ ಪರವಾಗಿ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಸುಪ್ರೀಂ ಕೋರ್ಟ್ ಗೆ ಸುಪ್ರೀಂ ಕೋರ್ಟ್ ಮಾಹಿತಿ ನೀಡಿದೆ.

ದೇಶದಾದ್ಯಂತ ಕೊರೊನಾ ಲಾಕ್ ಡೌನ್ ಹೇರಿಕೆಯಾಗಿರುವ ಹಿನ್ನೆಲೆಯಲ್ಲಿ ಸಿಬಿಎಸ್ಇ ಪರೀಕ್ಷೆಗಳು ಹಲವು ಬಾರಿ ಮಂದೂಡಿಕೆಯಾಗಿತ್ತು. 36 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಗಾಗಿ ತಯಾರಿ ನಡೆಸಿದ್ದರು. ಇದೀಗ ಸಿಬಿಎಸ್ಇ ಬೋರ್ಡ್ ದಿಢೀರನೇ ಪರೀಕ್ಷೆಗಳನ್ನು ರದ್ದು ಮಾಡಿದೆ. ಕೊರನೆಯ ಮೂರು ಆಂತರಿಕ ಪರೀಕ್ಷೆಗಳ ಅಂಕಗಳ ಆಧಾರದ ಮೇಲೆ ಫಲಿತಾಂಶ ನೀಡಲು ಬೋರ್ಡ್ ನಿರ್ಧರಿಸಿದೆ.

Leave A Reply

Your email address will not be published.