CBSE ಬೋರ್ಡ್ ಪರೀಕ್ಷೆ 2023 : 10 ನೇ ತರಗತಿ ಫಲಿತಾಂಶ ಶೀಘ್ರದಲ್ಲೇ ಪ್ರಕಟ

ನವದೆಹಲಿ : ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (CBSE Board Exam 2023), ಪರೀಕ್ಷಾ ನಿರ್ವಾಹಕ ಸಂಸ್ಥೆಯು 2023ರ 10 ನೇ ತರಗತಿ ಫಲಿತಾಂಶವನ್ನು ಶೀಘ್ರದಲ್ಲೇ ಪ್ರಕಟಿಸಲಿದೆ. ಬೋರ್ಡ್ ಪರೀಕ್ಷೆಗೆ ಹಾಜರಾಗಿರುವ ವಿದ್ಯಾರ್ಥಿಗಳು CBSE 10 ನೇ ತರಗತಿ ಫಲಿತಾಂಶವನ್ನು ಅಧಿಕೃತ ವೆಬ್‌ಸೈಟ್‌ಗಳಿಗೆ cbse.gov.in, ಮತ್ತು results.cbse.nic.in. ಭೇಟಿ ನೀಡುವ ಮೂಲಕ ಪರಿಶೀಲಿಸಬಹುದು. 10 ನೇ ತರಗತಿ ಫಲಿತಾಂಶವನ್ನು ಯಾವಾಗ ಘೋಷಿಸಲಾಗುತ್ತದೆ ಎಂಬುದರ ಕುರಿತು ಯಾವುದೇ ಅಧಿಕೃತ ದೃಢೀಕರಣವಿಲ್ಲವಾದರೂ, ಮುಂದಿನ ವಾರದ ವೇಳೆಗೆ CBSE 10 ನೇ ತರಗತಿಯ ಫಲಿತಾಂಶಗಳನ್ನು ಮಂಡಳಿಯು ಘೋಷಿಸುವ ನಿರೀಕ್ಷೆಯಿದೆ ಎಂದು ವರದಿಗಳು ತಿಳಿಸಿದೆ.

ಪರೀಕ್ಷೆಗೆ ಹಾಜರಾದ ಎಲ್ಲಾ ವಿದ್ಯಾರ್ಥಿಗಳು ಅಧಿಕೃತ ವೆಬ್‌ಸೈಟ್‌ಗಳಲ್ಲಿ ಲಭ್ಯವಿರುವ ಫಲಿತಾಂಶ ಲಿಂಕ್ ಅನ್ನು ಬಳಸಿಕೊಂಡು ತಮ್ಮ CBSE 10 ನೇ ಅಂಕಪಟ್ಟಿಯನ್ನು ಮಾತ್ರ ಪ್ರವೇಶಿಸಲು ಸಾಧ್ಯವಾಗುತ್ತದೆ. ಈ ವರ್ಷ, ಸುಮಾರು 18 ಲಕ್ಷ ವಿದ್ಯಾರ್ಥಿಗಳು CBSE 10 ನೇ ಬೋರ್ಡ್ ಪರೀಕ್ಷೆಗೆ ಕುಳಿತುಕೊಂಡಿದ್ದಾರೆ ಎಂದು ಹೇಳಲಾಗುತ್ತದೆ. ಫಲಿತಾಂಶಗಳು ಶೀಘ್ರದಲ್ಲೇ ಪ್ರಕಟವಾಗುವ ನಿರೀಕ್ಷೆಯಿದೆ.

CBSE 10 ನೇ ಫಲಿತಾಂಶ 2023 : ತಾತ್ಕಾಲಿಕ ದಿನಾಂಕ ಮತ್ತು ಸಮಯಕ್ಕಾಗಿ ಇಲ್ಲಿ ಪರಿಶೀಲಿಸಿ :
ವರದಿಗಳ ಪ್ರಕಾರ, CBSE 10ನೇ ತರಗತಿ ಉತ್ತರ ಪತ್ರಿಕೆಗಳ ಮೌಲ್ಯಮಾಪನವು ಏಪ್ರಿಲ್ 16 ರಂದು ಮುಕ್ತಾಯಗೊಂಡಿದೆ ಎಂದು ಮೂಲಗಳು ತಿಳಿಸಿವೆ. ಇದರ ಪರಿಣಾಮವಾಗಿ, ಮಂಡಳಿಯು 10 ನೇ ತರಗತಿಯ ಫಲಿತಾಂಶವನ್ನು ಏಪ್ರಿಲ್ 29 ರೊಳಗೆ ಬಿಡುಗಡೆ ಮಾಡುವ ಸಾಧ್ಯತೆಗಳಿವೆ. ಹಿಂದಿನ ವರ್ಷದಲ್ಲಿ ಫಲಿತಾಂಶ ಬಿಡುಗಡೆಯಾಗಿರುವುದನ್ನು ಗಮನಿಸಿದರೆ, ಮೊದಲು 10ನೇ ತರಗತಿ ಫಲಿತಾಂಶವನ್ನು ಸಾಮಾನ್ಯವಾಗಿ 12ನೇ ತರಗತಿಯ ಫಲಿತಾಂಶದ ನಂತರ ಪ್ರಕಟಿಸಲಾಗಿದೆ. ಇನ್ನು ದ್ವಿತೀಯ ಪಿಯುಸಿ ಫಲಿತಾಂಶವನ್ನು ಇಂದು (ಏಪ್ರಿಲ್‌ 21) ಶುಕ್ರವಾರದಂದು ಪ್ರಕಟವಾಗಿದೆ.

ಇದನ್ನೂ ಓದಿ : ಕರ್ನಾಟಕ ದ್ವಿತೀಯ ಪಿಯುಸಿ ಫಲಿತಾಂಶ : ಮರು ಪರೀಕ್ಷೆಗೆ ಅರ್ಜಿ ಸಲ್ಲಿಸುವುದು ಹೇಗೆ ಗೊತ್ತಾ ?

ಇದನ್ನೂ ಓದಿ : ಕರ್ನಾಟಕ ದ್ವಿತೀಯ ಪಿಯುಸಿ ಫಲಿತಾಂಶ : ಮರು-ಮೌಲ್ಯಮಾಪನ ಪ್ರಕ್ರಿಯೆಗಾಗಿ ಇಲ್ಲಿ ಕ್ಲಿಕ್ಕಿಸಿ

2022 ರಲ್ಲಿ, CBSE 10 ನೇ ಮತ್ತು 12 ನೇ ತರಗತಿಯ ಫಲಿತಾಂಶಗಳನ್ನು ಜುಲೈ 22 ರಂದು ಘೋಷಿಸಿತು. ಹೀಗಾಗಿ ಎಸ್‌ಎಸ್‌ಎಲ್‌ಸಿ ಫಲಿತಾಂಶವನ್ನು ಈ ತಿಂಗಳ ಕೊನೆಯಲ್ಲಿ ಪ್ರಕಟಗೊಳ್ಳುವ ಎಲ್ಲಾ ಸಾಧ್ಯತೆ ಇರುತ್ತದೆ. ಮೇ 5, 2023 ರೊಳಗೆ ವಿದ್ಯಾರ್ಥಿಗಳು ತಮ್ಮ CBSE 10 ನೇ ಫಲಿತಾಂಶಗಳನ್ನು ನಿರೀಕ್ಷಿಸಬಹುದು. ಆದರೆ, ಈ ದಿನಗಳು ತಾತ್ಕಾಲಿಕವಾಗಿವೆ. ಮಂಡಳಿಯ ಅಧಿಕಾರಿಗಳಿಂದ ಯಾವುದೇ ಅಧಿಕೃತ ದೃಢೀಕರಣವನ್ನು ನೀಡಲಾಗಿಲ್ಲ. ಸುಳ್ಳು ಮಾಹಿತಿ ಮತ್ತು ನಕಲಿ ಸುದ್ದಿಗಳಿಗೆ ಬಲಿಯಾಗುವುದನ್ನು ತಪ್ಪಿಸಲು ವಿದ್ಯಾರ್ಥಿಗಳು ನಿಯಮಿತವಾಗಿ CBSE ವೆಬ್‌ಸೈಟ್‌ಗೆ ಭೇಟಿ ನೀಡಬೇಕು.

CBSE Board Exam 2023 : 10 Class Result Declared Soon

Comments are closed.