10ನೇ ತರಗತಿ ಪರೀಕ್ಷೆ ರದ್ದು, 12ನೇ ತರಗತಿ ಪರೀಕ್ಷೆ ಮುಂದೂಡಿಕೆ

ದೆಹಲಿ : ಕೊರೊನಾ ಎರಡನೇ ಅಲೆಯ ಆರ್ಭಟ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸಿಬಿಎಸ್ಇ ಬೋರ್ಡ್ ಮಹತ್ವದ ನಿರ್ಧಾರ ಕೈಗೊಂಡಿದ್ದು, 10ನೇ‌ ತರಗರಿ ಪರೀಕ್ಷೆಯನ್ನು ರದ್ದು ಮಾಡಲಾಗಿದ್ದು, 12ನೇ‌ ತರಗತಿ ಪರೀಕ್ಷೆಯನ್ನು ಮುಂದೂಡಿಕೆ ಮಾಡಿ ಆದೇಶ ಹೊರಡಿಸಿದೆ.

ಕೊರೊನಾ ಸೋಂಕಿತರ ಪ್ರಮಾಣ ಏರಿಕೆಯಾದ ಬೆನ್ನಲ್ಲೇ ಸಿಬಿಎಸ್​ಇ ಬೋರ್ಡ್​ನ 10 ಮತ್ತು 12ನೇ ತರಗತಿಗಳಿಗೆ ಪರೀಕ್ಷೆಗಳನ್ನು ನಡೆಸುವ ಕುರಿತು ಪ್ರಧಾನಿ ನರೇಂದ್ರ ಮೋದಿ ಶಿಕ್ಷಣ ಇಲಾಖೆಯೊಂದಿಗೆ ಸಭೆ ನಡೆಸಿದ್ದಾರೆ. ವಿವಿಧ ರಾಜ್ಯಗಳ ಅಭಿಪ್ರಾಯ ವನ್ನು ಸಂಗ್ರಹಿಸಿ ಸ್ಥಿತಿಗಳನ್ನು ಪರಿಸ್ಥಿತಿಯನ್ನು ಅವಲೋಕಿಸಿದ ನಂತರ 10ನೇ ತರಗತಿ ಪರೀಕ್ಷೆಯನ್ನು ರದ್ದು ಮಾಡಿ, 12ನೇ ತರಗತಿ ಪರೀಕ್ಷೆಯ ದಿನಾಂಕ ಮುಂದೂಡಿ ಆದೇಶ ಹೊರಡಿಸಲಾಗಿದೆ.

ಸಿಬಿಎಸ್​ಇ ಪರೀಕ್ಷೆಗಳನ್ನು ಮುಂದೂಡುವಂತರ ಆಗ್ರಹಿಸಿ 2 ಲಕ್ಷಕ್ಕೂ ಹೆಚ್ಚು ಪಿಟಿಷನ್ ಸಲ್ಲಿಸಲಾಗಿತ್ತು. ಅಲ್ಲದೇ #cancelboardexam2021 ಎಂಬ ಹ್ಯಾಷ್​ಟ್ಯಾಗ್​ನಡಿ ಪರೀಕ್ಷೆ ರದ್ದುಗೊಳಿಸಲು ಟ್ವಿಟರ್​ನಲ್ಲಿ ಅಭಿಯಾನ ಕೈಗೊಳ್ಳಲಾಗಿತ್ತು. ಒಂದೇ ದಿನ 5 ಲಕ್ಷಕ್ಕೂ ಹೆಚ್ಚು ಟ್ವೀಟ್​ಗಳನ್ನು ಮಾಡಲಾಗಿತ್ತು. ಇದರ ಬೆನ್ನಲ್ಲೇ ಕೇಂದ್ರ ಸರಕಾರ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ.

ವಿದ್ಯಾರ್ಥಿಗಳ ಹಿತರಕ್ಷಣೆ ಮುಖ್ಯ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅಭಿಪ್ರಾಯಪಟ್ಟಿದ್ದಾರೆ‌. ಕೊರೊನಾ ಸೋಂಕು ಹೆಚ್ಚುತ್ತಿರುವ ಪ್ರಮಾಣವನ್ನು ಅವಲೋಕಿಸಿದಾಗ ಸದ್ಯದ ಪರಿಸ್ಥಿತಿಯಲ್ಲಿ ಪರೀಕ್ಷೆ ನಡೆಸುವುದು ದುಸ್ಥರವಾಗಿದ್ದು,ಆನ್​ಲೈನ್​ ಪರೀಕ್ಷೆ ನಡೆಸಲು ತಂತ್ರಜ್ಞಾನದ ಕೊರತೆಯಿದೆ. ಹೀಗಾಗಿಯೇ 10ನೇ ತರಗತಿ ಪರಿಕ್ಷೆಯನ್ನು ರದ್ದುಗೊಳಿಸಲಾಗಿದ್ದು, 12ನೇ ತರಗತಿ ಪರೀಕ್ಷೆಯನ್ನು ಮುಂದೂಡಿಕೆ ಮಾಡಲಾಗಿದೆ.

Comments are closed.