ಕೊರೊನಾ ಎಫೆಕ್ಟ್ : ಸಿಇಟಿ ಪರೀಕ್ಷೆಯೂ ಮುಂದೂಡಿಕೆ

0

ಬೆಂಗಳೂರು : ಕೊರೊನಾ ಸೋಂಕು ಹಿನ್ನೆಲೆಯಲ್ಲಿ ಈಗಾಗಲೇ ಎಸ್ಎಸ್ಎಲ್ ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಗಳು ಮುಂದೂಡಿಕೆಯಾಗಿರೋ ಬೆನ್ನಲ್ಲೇ (ವೃತ್ತಿಪರ ಕೋರ್ಸ್ ಗಳ ಪ್ರವೇಶಗಳಿಗಾಗಿ ಏಪ್ರಿಲ್ 22, 23ರಂದು ನಡೆಸಬೇಕಿದ್ದ ಸಿಇಟಿ (ಸಾಮಾನ್ಯ ಪ್ರವೇಶ ಪರೀಕ್ಷೆ) ಯನ್ನು ಅನಿರ್ದಿಷ್ಟಾವಧಿಗೆ ಮುಂದೂಡಿಕೆ ಮಾಡಲಾಗಿದೆ. ಈ ಕುರಿತು ಉನ್ನತ ಶಿಕ್ಷಣ ಸಚಿವ, ಉಪ ಮುಖ್ಯಮಂತ್ರಿ ಡಾ.ಸಿ.ಎನ್ ಅಶ್ವತ್ಥನಾರಾಯಣ್ ಹೇಳಿದ್ದಾರೆ.

ಕೊವಿಡ್-19 (ಕೊರೊನಾ) ಕಾರಣಕ್ಕೆ ದ್ವಿತೀಯ ಪಿಯುಸಿ ಪರೀಕ್ಷೆಗಳು ಇನ್ನೂ ಪೂರ್ಣವಾಗಿಲ್ಲ. ಅಲ್ಲದೆ ಸಹಜ ಸ್ಥಿತಿಯೂ ಇಲ್ಲ. ಹೀಗಾಗಿ ಸಿಇಟಿ ಪರೀಕ್ಷೆ ಮುಂದೂಡಲಾಗಿದೆ. ಏಪ್ರಿಲ್ ಮೂರನೇ ವಾರದಲ್ಲಿ ಸಿಇಟಿ ಪರೀಕ್ಷೆಯ ದಿನಾಂಕವನ್ನು ತಿಳಿಸಲಾಗುವುದು ಎಂದಿದ್ದಾರೆ.

ಕೊರೋನಾ ವೈರಸ್ ಸೋಂಕು ದೇಶದಲ್ಲಿ ಇನ್ನೂ ನಿಯಂತ್ರಣಕ್ಕೆ ಬಂದಿಲ್ಲ. ಕೊರೊನಾ ಪ್ರಕರಣ ಹೆಚ್ಚುತ್ತಿರೋ ಹಿನ್ನೆಲೆಯಲ್ಲಿ ಈ ನಿರ್ಧಾರಕ್ಕೆ ಬರಲಾಗಿದೆ. ಸಚಿವರು ಈ ಕುರಿತು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಅಧಿಕಾರಿಗಳ ಜತೆಗೂ ಮಾತುಕತೆ ನಡೆಸಿದ್ದಾರೆ.

Leave A Reply

Your email address will not be published.