CET ಪರೀಕ್ಷಾರ್ಥಿಗಳಿಗೆ ಗುಡ್ ನ್ಯೂಸ್

0

ಬೆಂಗಳೂರು : ಕೊರೊನಾ ಲಾಕ್‍ಡೌನ್‍ನಿಂದಾಗಿ ತಮ್ಮ ತಮ್ಮ ಊರುಗಳಲ್ಲಿಯೇ ಬಂಧಿಯಾಗಿರುವ ವಿದ್ಯಾರ್ಥಿಗಳಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಗುಡ್ ನ್ಯೂಸ್ ಕೊಟ್ಟಿದೆ. ವಿದ್ಯಾರ್ಥಿಗಳು ತಮ್ಮ ಊರಿನಲ್ಲಿಯೇ ಪರೀಕ್ಷೆಗಳನ್ನು ಬರೆಯಲು ಅವಕಾಶ ಕಲ್ಪಿಸಿದೆ.

ಪರೀಕ್ಷೆ ನಡೆಯುತ್ತೋ ಇಲ್ಲವೋ ಅನ್ನೊ ಆತಂಕದಲ್ಲಿದ್ದ ದ್ವಿತೀಯ ಪಿಯುಸಿ ಅಂತಿಮ ಪರೀಕ್ಷಾ ವೇಳಾಪಟ್ಟಿ ಹೊರಬಿದ್ದ ಬೆನ್ನಲ್ಲೇ ಪಿಯುಸಿ ವಿದ್ಯಾರ್ಥಿಗಳಿಗೆ ಮತ್ತೊಂದು ರಿಲೀಫ್ ಸಿಕ್ಕಿದೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ವಿದ್ಯಾರ್ಥಿಗಳು ಇರುವ ಕಡೆಯಲ್ಲೇ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿಕೊಟ್ಟಿದೆ. ಇದರಿಂದಾಗಿ ವಿದ್ಯಾರ್ಥಿಗಳು ತಾವು ಇರುವ ಹತ್ತಿರದ ಪರೀಕ್ಷಾ ಕೇಂದ್ರವನ್ನು ಆಯ್ಕೆ ಮಾಡಿಕೊಳ್ಳಬಹುದುದಾಗಿದೆ. ಹೀಗಾಗಿ ಹೆಚ್ಚುವರಿಯಾಗಿ 75 ಹೊಸ ಕೇಂದ್ರಗಳನ್ನು ಗುರುತಿಸಲಾಗಿದೆ.

ವಿದ್ಯಾರ್ಥಿಗಳಿಗೆ ಅನುಕೂಲವಾಗುವ ಪರೀಕ್ಷಾ ಕೇಂದ್ರಗಳನ್ನು ಬದಲಾವಣೆ ಮಾಡಿಕೊಳ್ಳಲು ಪರೀಕ್ಷಾ ಪ್ರಾಧಿಕಾರ ಎರಡು ದಿನಗಳ ಕಾಲಾವಕಾಶವನ್ನು ನೀಡಿದ್ದು, ಮೇ 20ರ ಸಂಜೆ 6 ಗಂಟೆಯಿಂದ ಮೇ 22ರ ಸಂಜೆ 6 ಗಂಟೆಯ ಒಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ವಿದ್ಯಾರ್ಥಿಗಳಿಗೆ ಮೂರು ಕೇಂದ್ರಗಳ ಆಯ್ಕೆಯನ್ನು ನೀಡಲಾಗುತ್ತಿದ್ದು, ಲಭ್ಯತೆಯ ಆಧಾರದ ಮೇಲೆ ವಿದ್ಯಾರ್ಥಿಗಳಿಗೆ ಪರೀಕ್ಷಾ ಪ್ರಾಧಿಕಾರ ಪರೀಕ್ಷಾ ಕೇಂದ್ರಗಳನ್ನು ಹಂಚಿಕೆ ಮಾಡಲಿದೆ.

ಕೊರೊನಾ ಹಿನ್ನೆಲೆಯಲ್ಲಿ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡು ಸಿಇಟಿ ಪರೀಕ್ಷೆ ನಡೆಸಲು ಪರೀಕ್ಷಾ ಪ್ರಾಧಿಕಾರ ಮುಂದಾಗಿದ್ದು, ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಮಾಸ್ಕ್ ಕಡ್ಡಾಯಗೊಳಿಸಲಾಗಿದೆ. ಸಾಮಾಜಿಕ ಅಂತರ ಕಾಪಾಡುವ ನಿಟ್ಟಿನಲ್ಲಿ ಕೊಠಡಿಗಳಲ್ಲಿ ವಿದ್ಯಾರ್ಥಿಗಳ ಸಂಖ್ಯೆಯನ್ನು ಕಡಿತಗೊಳಿಸಲಾಗಿದೆ. ಇನ್ನು ಜುಲೈ 30 ಮತ್ತು 31ರಂದು ಸಿಇಟಿ ಪರೀಕ್ಷೆಗಳು ನಡೆಯಲಿವೆ. ಜುಲೈ 30ರಂದು ಗಣಿತ, ಜೀವಶಾಸ್ತ್ರ ಪರೀಕ್ಷೆಗಳು ನಡೆದ್ರೆ, ಜುಲೈ 31ರಂದು ಭೌತಶಾಸ್ತ್ರ ಹಾಗೂ ರಸಾಯನ ಶಾಸ್ತ್ರ ಪರೀಕ್ಷೆಗಳಿಗೆ ದಿನ ನಿಗದಿಗೊಳಿಸಲಾಗಿದೆ.

ಎಂದಿನಂತೆ ಈ ಬಾರಿಯೂ ಆಫ್ ಲೈನ್ ನಲ್ಲಿಯೇ ಪರೀಕ್ಷೆಗಳು ನಡೆಯಲಿದ್ದು, ಅಗಸ್ಟ್ 1ರಂದು ಹೊರನಾಡು ಮತ್ತು ಗಡಿನಾಡು ಕನ್ನಡಗ ಅಭ್ಯರ್ಥಿಗಳಿಗೆ ಕನ್ನಡ ಪರೀಕ್ಷೆ ನಡೆಸಲಾಗುತ್ತದೆ ಎಂದು ಉನ್ನತ ಶಿಕ್ಷಣ ಸಚಿವ ಅಶ್ವತ್ಥ ನಾರಾಯಣ್ ತಿಳಿಸಿದ್ದಾರೆ.

Leave A Reply

Your email address will not be published.