ಇಂದು ಸಿಇಟಿ ಫಲಿತಾಂಶ ಪ್ರಕಟ : ಫಲಿತಾಂಶಕ್ಕಾಗಿ ಇಲ್ಲಿ ಕ್ಲಿಕ್ ಮಾಡಿ

0

ಬೆಂಗಳೂರು : ರಾಜ್ಯದಲ್ಲಿ ಸಿಇಟಿ (ಸಾಮಾನ್ಯ ಪ್ರವೇಶ ಪರೀಕ್ಷೆ) ಫಲಿತಾಂಶ ಇಂದು ಪ್ರಕಟವಾಗಲಿದೆ. ಮಧ್ಯಾಹ್ನ 12.30ಕ್ಕೆ ಫಲಿತಾಂಶ ಪ್ರಕಟವಾಗಲಿದ್ದು, ಪದವಿ ಪೂರ್ವ ಶಿಕ್ಷಣ ಇಲಾಖೆ ಫಲಿತಾಂಶ ಪ್ರಕಟಿಸಲು ಸಕಲ ಸಿದ್ದತೆಗಳನ್ನು ಮಾಡಿಕೊಂಡಿದೆ.

ಕೊರೊನಾ ವೈರಸ್ ಸೋಂಕಿನ ನಡುವಲ್ಲೇ ವಿದ್ಯಾರ್ಥಿಗಳು ಸಿಇಟಿ ಪರೀಕ್ಷೆಯನ್ನು ಬರೆದಿದ್ದರು. ಈ ಬಾರಿಯ ರಾಜ್ಯದಲ್ಲಿ ಒಟ್ಟು 1,94,356 ವಿದ್ಯಾರ್ಥಿಗಳು ಪರೀಕ್ಷೆಗೆ ನೊಂದಾಯಿಸಿಕೊಂಡಿದ್ದರು ಈ ಪೈಕಿ ಪರೀಕ್ಷೆಗೆ 1,47,491 ವಿದ್ಯಾರ್ಥಿಗಳು ಹಾಜರಾಗಿದ್ದರು. ಪರೀಕ್ಷೆ ನಡೆದ ಕೇವಲ 20 ದಿನಗಳಲ್ಲೆ ಇಲಾಖೆ ಫಲಿತಾಂಶವನ್ನು ಪ್ರಕಟಿಸುತ್ತಿದೆ. ಈ ಬಾರಿಯ ಪರೀಕ್ಷೆಯಲ್ಲಿ ಸುಮಾರು 63 ಮಂದಿ ಕೊರೊನಾ ಸೋಂಕಿತ ವಿದ್ಯಾರ್ಥಿಗಳು ಕೂಡ ಪರೀಕ್ಷೆಯನ್ನು ಬರೆದಿದ್ದರು. ಕೊರೊನಾ ವೈರಸ್ ಸೋಂಕಿನ ಹಿನ್ನೆಲೆಯಲ್ಲಿ ಸಕಲ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡು ಈ ಬಾರಿ ಸಿಇಟಿ ಪರೀಕ್ಷೆಯನ್ನು ನಡೆಸಲಾಗಿತ್ತು.

ಪದವಿ ಪೂರ್ವ ಶಿಕ್ಷಣ ಇಲಾಖೆ ಅಗಸ್ಟ್ 20ರಂದು ಸಿಇಟಿ ಫಲಿತಾಂಶ ಪ್ರಕಟಿಸುವುದಾಗಿ ಘೋಷಿಸಿತ್ತು. ಆದರೆ ಇಲಾಖೆ ಒಂದು ದಿನಗಳ ಕಾಲ ಫಲಿತಾಂಶವನ್ನು ಮುಂದೂಡಿಕೆ ಮಾಡಲಾಗಿದೆ. ಇಂದು ಮಧ್ಯಾಹ್ನ 12.30ಕ್ಕೆ ಫಲಿತಾಂಶ ಪ್ರಕಟವಾಗಲಿದ್ದು, ವಿದ್ಯಾರ್ಥಿಗಳು ಇಲಾಖೆಯ ಅಧಿಕೃತ ವೆಬ್ ಸೈಟ್ ಮೂಲಕ ಫಲಿತಾಂಶವನ್ನು ಈ ಕೆಳಗಿನ ಲಿಂಕ್ ಕ್ಲಿಕ್ ಮಾಡುವ ಮೂಲಕ ಪಡೆಯಬಹುದಾಗಿದೆ.

Leave A Reply

Your email address will not be published.