1 ರಿಂದ 9ನೇ ತರಗತಿ ಶಾಲೆ ಆರಂಭ : ಇಡೀ ದಿನ ನಡೆಯುತ್ತೆ SSLC, PUC ಕ್ಲಾಸ್.. !

ಚಾಮರಾಜನಗರ : ರಾಜ್ಯದಲ್ಲಿ ಎಸ್ಎಸ್ಎಲ್ ಸಿ, ದ್ವಿತೀಯ ಪಿಯುಸಿ ತರಗತಿಗಳು ಆರಂಭಗೊಂಡಿರುವ ಬೆನ್ನಲ್ಲೇ ರಾಜ್ಯ ಸರಕಾರ ಪೂರ್ಣ ಪ್ರಮಾಣದಲ್ಲಿ ಶೈಕ್ಷಣಿಕ ತರಗತಿಗಳನ್ನು ಆರಂಭಿಸಲು ಚಿಂತೆ ನಡೆಸಿದೆ.

1 ರಿಂದ 9 ಹಾಗೂ ಪ್ರಥಮ ಪಿಯುಸಿ ತರಗತಿಗಳನ್ನು ಆರಂಭಿಸುವ ಕುರಿತಂತೆ ಒತ್ತಡಗಳು ಬರುತ್ತಿತ್ತು. ಈ ಹಿನ್ನೆಲೆಯಲ್ಲಿ ಜನವರಿ 27ರಂದು ಆರೋಗ್ಯ ಸಚಿವ ಡಾ.ಡಿ.ಸುಧಾಕರ್ ಅವರೊಂದಿಗೆ ಸಭೆ ಕರೆಯಲಾಗಿದ್ದು, ಸಭೆಯಲ್ಲಿ ತೀರ್ಮಾನಕೈಗೊಳ್ಳಲಾಗುವುದು ಎಂದು ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ.

ಈಗಾಗಲೇ ನಡೆಯುತ್ತಿರುವ ಎಸ್ಎಸ್ಎಲ್ ಸಿ ಮತ್ತು ದ್ವಿತೀಯ ಪಿಯುಸಿ ತರಗತಿಗಳನ್ನು ಅರ್ಧ ದಿನದ ಬದಲಿಗೆ ಪೂರ್ಣ ದಿನ ನಡೆಸಬೇಕೆಂಬ ಬೇಡಿಕೆ ಬಗ್ಗೆಯೂ ಚರ್ಚೆ ನಡೆಸಲಾಗುತ್ತದೆ. ಅಲ್ಲದೇ
ಒಂದರಿಂದ 9ನೇ ತರಗತಿ, ಪ್ರಥಮ ಪಿಯುಸಿ ತರಗತಿಗಳನ್ನು ಆರಂಭಿಸುವ ಬೇಡಿಕೆ ಇದ್ದು, ಸಭೆಯಲ್ಲಿ ಈ ಕುರಿತು ತೀರ್ಮಾನವನ್ನು ಕೈಗೊಂಡು ಶಾಲಾರಂಭದ ದಿನಾಂಕ ಪ್ರಕಟಿಸಲಾಗುವುದು ಎಂದಿದ್ದಾರೆ.

Comments are closed.