Changes in PUC question paper: ದ್ವಿತೀಯ ಪಿಯುಸಿ ಪ್ರಶ್ನೆ ಪತ್ರಿಕೆ ಮಾದರಿಯಲ್ಲಿ ದೊಡ್ಡ ಬದಲಾವಣೆ

ಬೆಂಗಳೂರು: (Changes in PUC question paper) ದ್ವಿತೀಯ ಪಿಯುಸಿ ಪರೀಕ್ಷೆಗೆ ಕ್ಷಣಗಣನೆ ಪ್ರಾರಂಭವಾಗಿದ್ದು, ನಾಲ್ಕು ದಿನಗಳು ಬಾಕಿ ಉಳಿದಿವೆ. ಈ ಬಾರಿ ಪರೀಕ್ಷೆ ಬರುವ ವಿದ್ಯಾರ್ಥಿಗಳಿಗೆ ಕರ್ನಾಟಕ ಶಾಲಾ ಪರೀಕ್ಷೆ ಹಾಗೂ ಮೌಲ್ಯ ನಿರ್ಣಯ ಮಂಡಳಿ ಗುಡ್‌ ನ್ಯೂಸ್‌ ನೀಡಿದೆ. ದ್ವಿತೀಯ ಪಿಯುಸಿ ಪರೀಕ್ಷೆಯ ಪ್ರಶ್ನೆಪತ್ರಿಕೆ ಮಾದರಿಯಲ್ಲಿ ದೊಡ್ಡ ಬದಲಾವಣೆಯಾಗಿದ್ದು, ಪರೀಕ್ಷೆಯನ್ನು ಸರಳೀಕರಣ ಮಾಡಲಾಗಿದೆ.

ಮಾರ್ಚ್‌ 9 ರಿಂದ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭವಾಗಲಿದ್ದು, ವಿದ್ಯಾರ್ಥಿಗಳು ಭರ್ಜರಿಯಾಗೇ ತಯಾರಿ ನಡೆಸುತ್ತಿದ್ದಾರೆ. ಕಳೆದ ಎರಡು ವರ್ಷಗಳಲ್ಲಿ ಕೊರೋನಾ ಕಾರಣದಿಂದಾಗಿ ಪರೀಕ್ಷೆಗಳು ಸರಿಯಾದ ರೀತಿಯಲ್ಲಿ ನಡೆದಿರಲಿಲ್ಲ. ಈ ಹಿನ್ನಲೆಯಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಈ ಬಾರಿ ಇಲಾಖೆ ಸಿಹಿ ಸುದ್ದಿಯನ್ನು ನೀಡಿದ್ದು, ಪ್ರಶ್ನೆ ಪತ್ರಿಕೆಯನ್ನು ಸರಳ ಮಾಡಿದೆ. ದ್ವಿತೀಯ ಪಿಯುಸಿ ಫಲಿತಾಂಶವನ್ನು ಉತ್ತಮಗೊಳಿಸುವ ನಿಟ್ಟಿನಲ್ಲಿ ಇಲಾಖೆ ಈ ಬಾರಿ ಬದಲಾವಣೆಯನ್ನು ತಂದಿದ್ದು, ಪ್ರಶ್ನೆ ಪತ್ರಿಕೆಯಲ್ಲಿ ಒಂದು ಅಂಕದ 20 ಪ್ರಶ್ನೆಗಳನ್ನು ನೀಡಿದೆ. ಈ 20 ಪ್ರಶ್ನೆಗಳಲ್ಲಿ 12 ಬಹು ಆಯ್ಕೆ ಪ್ರಶ್ನೆಗಳು, ಬಿಟ್ಟ ಸ್ಥಳ ತುಂಬಿರಿ, ಹಾಗೂ ಹೊಂದಿಸಿ ಬರೆಯಿರಿ ಇತ್ಯಾದಿಯಾಗಿ ಸರಳ ರೀತಿಯಲ್ಲಿ ಪ್ರಶ್ನೆಗಳನ್ನು ಕೇಳಿದೆ ಎಂದು ಕೆಎಸ್‌ಇಎಬಿಯ ನಿರ್ದೇಶಕ ಗೋಪಾಲಕೃಷ್ಣ ಹೇಳಿದ್ದಾರೆ.

ಫಲಿತಾಂಶವನ್ನು ಸುಧಾರಿಸುವ ನಿಟ್ಟಿನಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕೆಲವು ನಿಯಮಗಳ ಬದಲಾವಣೆ ಮಾಡಲಾಗಿದ್ದು, ಒಂದು ಭಾಷೆಯಲ್ಲಿ ಮತ್ತು ಇನ್ನೊಂದು ಪ್ರಮುಖ ವಿಷಯದಲ್ಲಿ ವಿದ್ಯಾರ್ಥಿಗಳು ಯಾವುದೇ ಎರಡು ವಿಷಯಗಳಲ್ಲೂ ಒಂದೇ ರೀತಿ ಗ್ರೇಸ್‌ ಮಾರ್ಕ್ಸ್‌ ಪಡೆಯುತ್ತಾರೆ. ಒಟ್ಟು 600 ಅಂಕಗಳಲ್ಲಿ 210 ಅಂಕಗಳನ್ನು ಪಡೆಯುವ ವಿದ್ಯಾರ್ಥಿಯು ಗ್ರೇಸ್‌ ಮಾರ್ಕ್‌ಗಳನ್ನು ಪಡೆಯಲು ಅರ್ಹನಾಗಿರುತ್ತಾನೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ : NTA NEET UG 2023: ಮಾ 5 ರಿಂದ ಪರೀಕ್ಷಾ ನೋಂದಣಿ ಪ್ರಾರಂಭ

ಇದನ್ನೂ ಓದಿ : NEET UG 2023 Registration: ನೋಂದಣಿ ಪ್ರಕ್ರಿಯೆ ಪ್ರಾರಂಭ: ವಿವರಗಳಿಗಾಗಿ ಇಲ್ಲಿ ಕ್ಲಿಕ್‌ ಮಾಡಿ

ಇದನ್ನೂ ಓದಿ : NEET UG 2023: ಪರೀಕ್ಷಾ ನೋಂದಣಿ ದಿನಾಂಕ ಪ್ರಕಟ: ವಿವರಗಳಿಗಾಗಿ ಇಲ್ಲಿ ಪರಿಶೀಲಿಸಿ

Changes in PUC question paper: Major change in secondary PUC question paper pattern

Comments are closed.