Classrooms Construction: ಮುಂದಿನ 3 ವರ್ಷಗಳಲ್ಲಿ 25 ಸಾವಿರ ತರಗತಿ ಕೊಠಡಿ ನಿರ್ಮಾಣ: ಸಿಎಂ ಬೊಮ್ಮಾಯಿ

ಬೆಂಗಳೂರು : (Classrooms Construction) ಕರ್ನಾಟಕದಲ್ಲಿ ಮುಂದಿನ ಮೂರು ವರ್ಷಗಳಲ್ಲಿ 25,000 ತರಗತಿ ಕೊಠಡಿಗಳನ್ನು ನಿರ್ಮಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿದ್ದಾರೆ. ಶಿಗ್ಗಾಂವ ತಾಲೂಕಿನ ಕೋಣನಕೆರೆ ಗ್ರಾಮದಲ್ಲಿ ಕರ್ನಾಟಕ ಮಾದರಿ ಶಾಲಾ ಮಾರ್ಗದರ್ಶನ ಕಾರ್ಯಕ್ರಮದಡಿ ವಿಜ್ಞಾನ ಪ್ರಯೋಗಾಲಯ ಹಾಗೂ ನೂತನ ತರಗತಿ ಕೊಠಡಿಗಳನ್ನು ಉದ್ಘಾಟಿಸಿ ಮಾತನಾಡಿದ ಸಿಎಂ ಬೊಮ್ಮಾಯಿ ಅವರು, ಸಾರ್ವಜನಿಕ ಸಹಭಾಗಿತ್ವದಲ್ಲಿ ತಮ್ಮ ವಿಧಾನಸಭಾ ಕ್ಷೇತ್ರದಲ್ಲಿ 151 ತರಗತಿ ಕೊಠಡಿಗಳನ್ನು ನಿರ್ಮಿಸಲಾಗುತ್ತಿದೆ. ಮುಂದಿನ ಮೂರು ವರ್ಷಗಳಲ್ಲಿ ತಾಲೂಕಿನಲ್ಲಿ ಇನ್ನೂ 500 ತರಗತಿ ಕೊಠಡಿಗಳನ್ನು ನಿರ್ಮಿಸಲು ಸರ್ಕಾರ ಯೋಜಿಸಿದೆ ಎಂದಿದ್ದಾರೆ.

‘‘ರಾಜ್ಯದ ಎಲ್ಲ ಸರಕಾರಿ ಶಾಲೆಗಳಲ್ಲಿ ಆ.15ರ ಸ್ವಾತಂತ್ರ್ಯೋತ್ಸವದ ಮೊದಲು ಬಾಲಕ ಮತ್ತು ಬಾಲಕಿಯರಿಗೆ ಪ್ರತ್ಯೇಕ ಶೌಚಾಲಯ ನಿರ್ಮಿಸಲು ಸರಕಾರ ₹280 ಕೋಟಿ ಬಿಡುಗಡೆ ಮಾಡಿದೆ. ಅಟಲ್ ಟಿಂಕರಿಂಗ್ ಮಾದರಿಯಲ್ಲಿ ಟಿಂಕರಿಂಗ್ ಪ್ರಯೋಗಾಲಯ ನಿರ್ಮಾಣಕ್ಕೆ ಅನುದಾನ ಬಿಡುಗಡೆ ಮಾಡಲಾಗಿದೆ,’’ ಎಂದು ಬೊಮ್ಮಾಯಿ ತಿಳಿಸಿದರು. ಶಿಗ್ಗಾಂವ ವಿಧಾನಸಭಾ ಕ್ಷೇತ್ರದಲ್ಲಿ 10 ಪಿಯು ಕಾಲೇಜುಗಳನ್ನು ನಿರ್ಮಿಸಲು ಮಂಜೂರಾತಿ ನೀಡಲಾಗಿದ್ದು, ಈ ಕಾಲೇಜುಗಳಲ್ಲಿ ಕಡ್ಡಾಯವಾಗಿ ವಿಜ್ಞಾನ ವಿಷಯಗಳನ್ನು ಬೋಧಿಸುವಂತೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದರು.

ಮೈಕ್ರೋಸಾಫ್ಟ್ ಸಹ-ಸಂಸ್ಥಾಪಕ ಬಿಲ್ ಗೇಟ್ಸ್ ಮತ್ತು ಅವರ ಮಾಜಿ ಪತ್ನಿ ಮೆಲಿಂಡಾ ನಡೆಸುತ್ತಿರುವ ಜಾಗತಿಕ ಲೋಕೋಪಕಾರಿ ಸಂಸ್ಥೆಯಾದ ಬಿಲ್ ಮತ್ತು ಮಿಲಿಂಡ್ ಗೇಟ್ಸ್ ಫೌಂಡೇಶನ್ ಸಹಯೋಗದಲ್ಲಿ ಕರ್ನಾಟಕ ಮಾದರಿ ಶಾಲಾ ಮಾರ್ಗದರ್ಶನ ಕಾರ್ಯಕ್ರಮವನ್ನು ಹಾವೇರಿ, ದಾವಣಗೆರೆ, ತುಮಕೂರು ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಜಾರಿಗೊಳಿಸಲಾಗುತ್ತಿದೆ ಎಂದು ಮುಖ್ಯಮಂತ್ರಿ ಹೇಳಿದರು. ‘‘ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರಗಳಲ್ಲಿ ದೊಡ್ಡ ಬದಲಾವಣೆ ತರಲಾಗಿದೆ. ಕಳೆದ ಎರಡು ಬಜೆಟ್‌ಗಳಲ್ಲಿ ಆರೋಗ್ಯ ಕ್ಷೇತ್ರಕ್ಕೆ ಶೇ 11 ಮತ್ತು ಶಿಕ್ಷಣ ಕ್ಷೇತ್ರಕ್ಕೆ ಶೇ 12ರಷ್ಟು ಬಜೆಟ್‌ ಹಂಚಿಕೆಯಾಗಿದೆ. ಜಿಂದಾಲ್ ಕಂಪನಿ ಸಹಯೋಗದಲ್ಲಿ ನನ್ನ ಕ್ಷೇತ್ರದ ಶಾಲೆಗಳು ಶೈಕ್ಷಣಿಕ ಗುಣಮಟ್ಟವನ್ನು ಹೆಚ್ಚಿಸುವ ನಿಟ್ಟಿನಲ್ಲಿ ಅಭಿವೃದ್ಧಿ ಪಡಿಸಲಾಗಿದೆ ಎಂದು ಸಿಎಂ ಹೇಳಿದರು.

ಇದನ್ನೂ ಓದಿ : KSRTC bus Rate hike: ಪ್ರಯಾಣಿಕರಿಗೆ ಬಿಗ್‌ ಶಾಕ್‌ ನೀಡಿದ KSRTC: ಮೈಸೂರು ‌- ಬೆಂಗಳೂರು ನಡುವೆ ಪ್ರಯಾಣದ ಬಸ್ ದರ ಹೆಚ್ಚಳ

Classrooms Construction: Construction of 25 thousand classrooms in next 3 years: CM Bommai

Comments are closed.