ಬೆಂಗಳೂರು : ಜ್ಞಾನಾರ್ಜನೆಗೆಂದು ಕಾಲೇಜುಗಳಿಗೆ ತೆರಳಬೇಕಿದ್ದ ವಿದ್ಯಾರ್ಥಿಗಳು ಮತಾಂಧತೆಯ ಹೆಸರಿನಲ್ಲಿ ಬೀದಿಗೆ ಇಳಿದಿದ್ದಾರೆ. ಹಿಜಬ್ ಬೇಕೆಂದು ಹೋರಾಡುತ್ತಿರುವ ವಿದ್ಯಾರ್ಥಿನಿಯರು ಒಂದೆಡೆಯಾದರೆ ಹಿಜಬ್ ಧರಿಸುತ್ತಿರುವವರ ಎದುರು ನಾವೇನು ಕಮ್ಮಿ ಅಂತಾ ಹಿಂದೂ ವಿದ್ಯಾರ್ಥಿಗಳು ಕೇಸರಿ ಶಾಲು ತೊಟ್ಟು ಆಕ್ರೋಶ ಹೊರಹಾಕುತ್ತಿದ್ದಾರೆ. ಉಡುಪಿ ಜಿಲ್ಲೆಯಿಂದ ಆರಂಭವಾದ ಈ ಸಮವಸ್ತ್ರ ವಿವಾದ ಇದೀಗ ಹೈಕೋರ್ಟ್ನಲ್ಲಿಯೂ ಪ್ರತಿಧ್ವನಿಸುತ್ತಿದೆ. ಈ ಎಲ್ಲದರ ನಡುವೆ ಸಿಎಂ ಬಸವರಾಜ ಬೊಮ್ಮಾಯಿ ಶಾಂತಿ ಕಾಪಾಡುವಂತೆ ರಾಜ್ಯದ ವಿದ್ಯಾರ್ಥಿಗಳ ಬಳಿಯಲ್ಲಿ ಮನವಿ ಮಾಡಿದ್ದಾರೆ.
ರಾಜ್ಯದ ಎಲ್ಲಾ ಶಾಲಾ – ಕಾಲೇಜುಗಳಿಗೆ ರಜೆ ಘೋಷಣೆ ಮಾಡಿ ಟ್ವೀಟ್ ಮಾಡಿರುವ ಸಿಎಂ ಬಸವರಾಜ ಬೊಮ್ಮಾಯಿ, ಮುಂದಿನ ಮೂರು ದಿನಗಳ ಅವಧಿಗೆ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸುವಂತೆ ಆದೇಶಿಸಲಾಗಿದೆ .ರಾಜ್ಯದಲ್ಲಿ ಶಿಕ್ಷಕರು,ವಿದ್ಯಾರ್ಥಿಗಳು, ಶಾಲೆ, ಕಾಲೇಜುಗಳ ಆಡಳಿತ ಮಂಡಳಿ ಹಾಗೂ ನಾಡಿನ ಸಮಸ್ತ ಜನತೆಯಲ್ಲಿ ಶಾಂತಿ ಕಾಪಾಡುವಂತೆ ಮನವಿ ಮಾಡುತ್ತೇವೆ ಎಂದು ಟ್ವೀಟಾಯಿಸಿದ್ದಾರೆ.
ರಾಜ್ಯದಲ್ಲಿ ವಿದ್ಯಾರ್ಥಿಗಳು, ಶಿಕ್ಷಕರು, ಶಾಲೆ, ಕಾಲೇಜುಗಳ ಆಡಳಿತ ಮಂಡಳಿಗಳು ಹಾಗೂ ನಾಡಿನ ಸಮಸ್ತ ಜನತೆಯಲ್ಲಿ ಶಾಂತಿ ಸೌಹಾರ್ದತೆ ಕಾಪಾಡುವಂತೆ ಮನವಿ ಮಾಡುತ್ತೇನೆ. ಮುಂದಿನ ಮೂರು ದಿನಗಳ ಅವಧಿಗೆ ಶಾಲೆ ಕಾಲೇಜುಗಳಿಗೆ ರಜೆ ಘೋಷಿಸುವಂತೆ ಆದೇಶಿಸಲಾಗಿದ್ದು, ಸಂಬಂಧಿಸಿದ ಎಲ್ಲರೂ ಸಹಕರಿಸಲು ಕೋರುತ್ತೇನೆ.
— Basavaraj S Bommai (@BSBommai) February 8, 2022
ಸದ್ಯ ದೆಹಲಿ ಪ್ರವಾಸದಲ್ಲಿರುವ ಸಿಎಂ ಬಸವರಾಜ ಬೊಮ್ಮಾಯಿ ರಾಜ್ಯದ ಪರಿಸ್ಥಿತಿಯ ಬಗ್ಗೆ ಕ್ಷಣ ಕ್ಷಣದ ಮಾಹಿತಿಯನ್ನು ಪಡೆಯುತ್ತಿದ್ದಾರೆ. ಕೋರ್ಟ್ ವಿಚಾರಣೆ ನಡೆಯುವವರೆಗೆ ವಿದ್ಯಾರ್ಥಿಗಳ ಪ್ರತಿಭಟನೆ ಮಿತಿಮೀರಬಹುದು. ಪದವಿ ಪೂರ್ವ ವಿದ್ಯಾರ್ಥಿಗಳ ಈ ಗಲಾಟೆಯು, ಶಾಲೆಗಳು, ಪದವಿ ಕಾಲೇಜಿನವರೆಗೂ ವ್ಯಾಪಿಸಬಹುದು ಎಂಬ ಕಾರಣಕ್ಕೆ ಫೆಬ್ರವರಿ 11ರವರೆಗೂ ರಾಜ್ಯದಲ್ಲಿ ರಜೆ ಘೋಷಣೆ ಮಾಡಲಾಗಿದೆ.ಈ ನಡುವೆ ಸಮವಸ್ತ್ರ ವಿವಾದವನ್ನು ಕೈಗೆತ್ತಿಕೊಂಡಿರುವ ರಾಜ್ಯ ಹೈಕೋರ್ಟ್ ವಿಚಾರಣೆಯನ್ನು ನಾಳೆ ಮಧ್ಯಾಹ್ನ 2:30ಕ್ಕೆ ಮುಂದೂಡಿದೆ.
CM Basavaraja Bommai appealed to the people of the state to maintain peace
ಇದನ್ನು ಓದಿ : ಸಮವಸ್ತ್ರ ವಿವಾದ : ಹೈಕೋರ್ಟ್ ವಿಚಾರಣೆ ನಾಳೆ ಮಧ್ಯಾಹ್ನ 2:30ಕ್ಕೆ ಮುಂದೂಡಿಕೆ
ಇದನ್ನೂ ಓದಿ : ನಾಳೆಯಿಂದ ಮೂರು ದಿನಗಳ ಕಾಲ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ
