Coastal Heavy Rain : ಉಡುಪಿ ಜಿಲ್ಲೆಯಲ್ಲಿ ರೆಡ್‌ ಅಲರ್ಟ್‌ ಘೋಷಣೆ : ಭಾರೀ ಮಳೆ ಹಿನ್ನೆಲೆ ನಾಳೆ ಶಾಲೆ, ಕಾಲೇಜಿಗೆ ರಜೆ

ಉಡುಪಿ : ಮುಂದಿನ ಎರಡು ದಿನಗಳ ಕಾಲ ಕರಾವಳಿ ಭಾಗದಲ್ಲಿ ಭಾರೀ ಪ್ರಮಾಣದಲ್ಲಿ ಮಳೆಯಾಗುವ (Coastal Heavy Rain) ಸಾಧ್ಯತೆಯ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲೆಯಲ್ಲಿ ರೆಡ್‌ ಅಲರ್ಟ್‌ ಘೋಷಣೆ ಮಾಡಲಾಗಿದೆ. ಅಲ್ಲದೇ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಜುಲೈ7 ರಂದು ಶಾಲೆ, ಕಾಲೇಜುಗಳ ವಿದ್ಯಾರ್ಥಿಗಳಿಗೆ ರಜೆ ಘೋಷಣೆ ಮಾಡಲಾಗಿದೆ.

ಉಡುಪಿ ಜಿಲ್ಲೆಯ ಅಂಗನವಾಡಿ, ಪ್ರಾಥಮಿಕ ಶಾಲೆ, ಪ್ರೌಢಶಾಲೆ, ಪದವಿ ಪೂರ್ವ ಕಾಲೇಜು, ಪದವಿ ಕಾಲೇಜುಗಳಿಗೆ ಉಡುಪಿ ಜಿಲ್ಲಾಧಿಕಾರಿ ಕೂರ್ಮರಾವ್‌ ಅವರು ರಜೆ ಘೋಷಣೆ ಮಾಡಿ ಆದೇಶ ಹೊರಡಿಸಿದ್ದಾರೆ. ಕಳೆದ 24 ಗಂಟೆಯ ಅವಧಿಯಲ್ಲಿ ಉಡುಪಿ ಜಿಲ್ಲೆಯಾದ್ಯಂತ ಭಾರೀ ಪ್ರಮಾಣದಲ್ಲಿ ಮಳೆ ಸುರಿದಿದೆ. ಅಲ್ಲದೇ ಮುಂದಿನ ಎರಡು ದಿನಗಳ ಕಾಲ ಮಳೆ ಮುಂದುವರಿಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲೆ, ಕಾಲೇಜುಗಳಿಗೆ ರಜೆ ಘೋಷಣೆ

ಮಂಗಳೂರು : ಕರಾವಳಿ ಭಾಗದಲ್ಲಿ ಸುರಿಯುತ್ತಿರುವ ಮಳೆ ಸದ್ಯಕ್ಕೆ ಬಿಡುವು ಪಡೆಯುವ ಲಕ್ಷಣ ಕಾಣಿಸುತ್ತಿಲ್ಲ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮುಂದಿನ ೨೪ ಗಂಟೆಗಳ ಅವಧಿಯಲ್ಲಿ ಭಾರೀ ಮಳೆ ಸುರಿಯುವ ಸಾಧ್ಯತೆಯಿದೆ. ಈ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ರೆಡ್‌ ಅಲರ್ಟ್‌ ಘೋಷಣೆ ಮಾಡಿದೆ. ಜೊತೆಗೆ ಮಕ್ಕಳ ಸುರಕ್ಷತೆಯ ದೃಷ್ಟಿಯಿಂದ ಜಿಲ್ಲೆಯಲ್ಲಿನ ಶಾಲೆ, ಕಾಲೇಜುಗಳಿಗೆ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಧಾರಾಕಾರವಾಗಿ ಮಳೆ ಸುರಿಯುತ್ತಿದೆ. ಕಳೆದ ಎರಡು ದಿನಗಳ ಅವಧಿಯಲ್ಲಿ ಜಿಲ್ಲೆಯಲ್ಲಿ ದಾಖಲೆಯ ಪ್ರಮಾಣದಲ್ಲಿ ಮಳೆಯಾಗಿದೆ. ಅಲ್ಲದೇ ಮುಂದಿನ ೨೪ ಗಂಟೆಗಳ ಅವಧಿಯಲ್ಲಿ ಭಾರೀ ಮಳೆ ಸುರಿಯುವ ಕುರಿತು ಹವಾಮಾನ ಇಲಾಖೆ ಎಚ್ಚರಿಕೆಯನ್ನು ನೀಡಿದೆ. ಈ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾಡಳಿತ ರೆಡ್‌ ಅಲರ್ಟ್‌ ಘೋಷಣೆ ಮಾಡಿದೆ. ದಕ್ಷಿಣ ಕನ್ನಡ ಜಿಲ್ಲೆಯ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢಶಾಲೆ, ಪದವಿ ಪೂರ್ವ ಕಾಲೇಜು, ಪದವಿ, ಸ್ನಾತಕೋತ್ತರ ಪದವಿ, ಡಿಪ್ಲೋಮಾ, ಇಂಜಿನಿಯರಿಂಗ್‌, ಐಟಿಐ ಸೇರಿದಂತೆ ಸರಕಾರಿ, ಅನುದಾನಿತ ಹಾಗೂ ಖಾಸಗಿ ವಿದ್ಯಾಸಂಸ್ಥೆಗಳಿಗೆ ಜುಲೈ ೭ ರಂದು ರಜೆ ಘೋಷಣೆ ಮಾಡಲಾಗಿದೆ.

ಜಿಲ್ಲೆಯಾದ್ಯಂತ ರೆಡ್‌ ಅಲರ್ಟ್‌ ಘೋಷಣೆಯಾಗಿರುವ ಹಿನ್ನೆಲೆಯಲ್ಲಿ ತಗ್ಗು ಪ್ರದೇಶ, ಕೆರೆ, ನದಿ ತೀರ ಹಾಗೂ ಸಮುದ್ರ ತೀರಕ್ಕೆ ಮಕ್ಕಳು, ಪ್ರವಾಸಿಗರು ಹಾಗೂ ಸಾರ್ವಜನಿಕರು ಜಾಗ್ರತೆವಹಿಸುವಂತೆ ಸೂಚಿಸಲಾಗಿದೆ. ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಚಾಚೂ ತಪ್ಪದೇ ಕಡ್ಡಾಯವಾಗಿ ಕಾರ್ಯನಿರ್ವಹಿಸುವಂತೆ ಸೂಚಿಸಲಾಗಿದೆ.

ಉತ್ತರ ಕನ್ನಡ ಜಿಲ್ಲೆಯಲ್ಲಿ ನಾಳೆ ಶಾಲೆ – ಕಾಲೇಜಿಗೆ ರಜೆ, ಆರೆಂಜ್‌ ಅಲರ್ಟ್‌ ಘೋಷಣೆ

ಕಾರವಾರ : ಉತ್ತರ ಕನ್ನಡ ಜಿಲ್ಲೆಯಲ್ಲಿ ನಿರಂತರವಾಗಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ, ಪದವಿ ಪೂರ್ವ ಕಾಲೇಜು ಹಾಗೂ ಪದವಿ ಕಾಲೇಜುಗಳಿಗೆ ನಾಳೆ ರಜೆ (Schools and colleges holiday) ಘೋಷಣೆ ಮಾಡಲಾಗಿದೆ. ಅಲ್ಲದೇ ಜಿಲ್ಲೆಯಲ್ಲಿ ಭಾರಿ ಮಳೆ ಸುರಿಯುವ ಹಿನ್ನೆಲೆಯಲ್ಲಿ ಆರೆಂಜ್‌ ಅಲರ್ಟ್‌ ಘೋಷಿಸಲಾಗಿದೆ. ಕಳೆದ ನಾಲ್ಕೈದು ದಿನಗಳಿಂದಲೂ ಉತ್ತರ ಕನ್ನಡ ಜಿಲ್ಲೆಯಾದ್ಯಂತ ಭಾರೀ ಪ್ರಮಾಣದಲ್ಲಿ ಮಳೆ ಸುರಿಯುತ್ತಿದೆ. ಅದ್ರಲ್ಲೂ ಜಿಲ್ಲೆಯ ಜೀವನದಿಗಳು ಅಪಾಯದ ಮಟ್ಟವನ್ನು ಮೀರಿ ಹರಿಯುತ್ತಿವೆ. ಇನ್ನೊಂದೆಡೆಯಲ್ಲಿ ಕಡಲ ತೀರದಲ್ಲಿ ಕಡಲ್ಕೊರೆತ ಉಂಟಾಗುತ್ತಿರುವ ಹಿನ್ನೆಲೆಯಲ್ಲಿ ನಿವಾಸಿಗಳು ಆತಂಕದಲ್ಲಿಯೇ ಬದುಕು ಸಾಗಿಸುತ್ತಿದ್ದಾರೆ. ಈ ನಡುವಲ್ಲೇ ಜಿಲ್ಲೆಯಲ್ಲಿ ನಾಳೆಯೂ ಮಳೆ ಮುಂದುವರಿಯುವ ಕುರಿತು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ.

ಹವಾಮಾನ ಇಲಾಖೆಯ ಮುನ್ಸೂಚನೆಯ ಹಿನ್ನೆಲೆಯಲ್ಲಿ ಜುಲೈ ೭ರಂದು ಉತ್ತರ ಕನ್ನಡ ಜಿಲ್ಲೆಯಾದ್ಯಂತ ಆರೆಂಜ್‌ ಅಲರ್ಟ್‌ ಘೋಷಣೆ ಮಾಡಿ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ. ಅಲ್ಲದೇ ಮಕ್ಕಳ ಸುರಕ್ಷತೆಯ ಹಿತದೃಷ್ಟಿಯಿಂದ ಶಾಲೆ ಸೇರಿದಂತೆ ಎಲ್ಲಾ ಶೈಕ್ಷಣಿಕ ಸಂಸ್ಥೆಗಳಿಗೆ ರಜೆ ಘೋಷಣೆಯನ್ನು ಮಾಡಲಾಗಿದ್ದು, ಮುಂದಿನ ದಿನಗಳಲ್ಲಿ ರಜೆಯ ಅವಧಿಯನ್ನು ಹೊಂದಾಣಿಕೆ ಮಾಡಿಕೊಳ್ಳುವಂತೆ ಸೂಚಿಸಲಾಗಿದೆ.

ಇದನ್ನೂ ಓದಿ : ಕೋವಿಡ್​ 19 ಬೂಸ್ಟರ್​ ಡೋಸ್​ ನಡುವಿನ ಅಂತರ ಇಳಿಕೆ ಮಾಡಿದ ಕೇಂದ್ರ

ಇದನ್ನೂ ಓದಿ : ನಿರಂತರ ಅತ್ಯಾಚಾರವೆಸಗಿ ಬಾಲಕಿಯನ್ನು ಗರ್ಭಿಣಿಯನ್ನಾಗಿಸಿದ 50ರ ಕಾಮುಕ ಅರೆಸ್ಟ್​

Coastal Heavy Rain: schools, college holiday declared in Udupi and Dakshina Kannada tomorrow Red Alert

Comments are closed.