ಕೊರೊನಾ ಹಿನ್ನೆಲೆ : ಪದವಿ ಪ್ರಾಧ್ಯಾಪಕರಿಗೆ ಜೂ.30ರ ವರೆಗೆ ರಜೆ : ಉನ್ನತ ಶಿಕ್ಷಣ ಇಲಾಖೆಯಿಂದ ಆದೇಶ

0

ಬೆಂಗಳೂರು : ಕೊರೊನಾ ಲಾಕ್ ಡೌನ್ ಹಿನ್ನೆಲೆ ಜೂನ್ 16 ರಿಂದ 30 ರವರೆಗೆ ಪದವಿ ಮತ್ತು ವಿಶ್ವವಿದ್ಯಾಲಯದ ಪ್ರಾಧ್ಯಾಪಕರಿಗೆ ರಜೆ ಘೋಷಿಸಿ ಉನ್ನತ ಶಿಕ್ಷಣ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ರಮಣ ರೆಡ್ಡಿ ಮಹತ್ವದ ಆದೇಶ ಹೊರಡಿಸಿದ್ದಾರೆ.

ಕೊರೊನಾ ಲಾಕ್ ಡೌನ್ ಹಿನ್ನೆಲೆಯಲ್ಲಿ ಕಳೆದೆರಡು ತಿಂಗಳಿಗೂ ಅಧಿಕ ಕಾಲದಿಂದಲೂ ಶಾಲಾ, ಕಾಲೇಜುಗಳು ಬಂದ್ ಆಗಿವೆ. ಆದ್ರೀಗ ಇಂದಿನಿಂದ ಶಾಲೆಗಳು ಪುನರಾರಂಭಗೊಂಡಿವೆ. ಆದರೆ ಪದವಿ ತರಗತಿಗಳಿಗೆ ಈ ಹಿಂದೆ ಜೂನ್ 15ರ ಒಳಗೆ ಆನ್ ಲೈನ್ ತರಗತಿಗಳನ್ನು ಪೂರೈಸಬೇಕೆಂದು ಉನ್ನತ ಶಿಕ್ಷಣ ಇಲಾಖೆ ಸೂಚನೆಯನ್ನು ನೀಡಿತ್ತು.

ಇದೀಗ ಕೊರೊನಾ ವೈರಸ್ ಸೋಂಕು ಹರಡುತ್ತಿರುವ ಹಿನ್ನೆಲೆಯಲ್ಲಿ ಜೂನ್ 16 ರಿಂದ 30 ರವರೆಗೆ ಪದವಿ ಕಾಲೇಜು ಮತ್ತು ವಿಶ್ವವಿದ್ಯಾಲಯದ ಪ್ರಾಧ್ಯಾಪಕರಿಗೆ ರಜೆ ಘೋಷಿಸಲಾಗಿದೆ.

ಉನ್ನತ ಶಿಕ್ಷಣ ಸಂಸ್ಥೆಗಳ ಮುಂದಿನ ಶೈಕ್ಷಣಿಕ ವರ್ಷದ ಕುರಿತು ಕೇಂದ್ರ ಸರ್ಕಾರ ಜುಲೈನಲ್ಲಿ ನಿರ್ಧಾರ ಕೈಗೊಳ್ಳಲಿದ್ದು, ಈ ಹಿನ್ನೆಲೆ ಈ ಆದೇಶ ಹೊರಡಿಸಲಾಗಿದೆ.

Leave A Reply

Your email address will not be published.