ಕಾಲೇಜು ಆರಂಭಕ್ಕೆ ಡೇಟ್ ಫಿಕ್ಸ್ : ಪದವಿ ಪರೀಕ್ಷೆ ರದ್ದು, ಅಂತಿಮ ವರ್ಷಕ್ಕೆ ಮಾತ್ರ ಪರೀಕ್ಷೆ

1

ಬೆಂಗಳೂರು : ಕೊರೋನಾ ವೈರಸ್ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಎಲ್ಲ ಪದವಿ ಪರೀಕ್ಷೆಗಳನ್ನು ರದ್ದು ಮಾಡಿದ್ದು, ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಮಾತ್ರ ಪರೀಕ್ಷೆ ನಡೆಸಲು ತೀರ್ಮಾನಿಸಲಾಗಿದೆ. 2019-20ನೇ ಸಾಲಿನಲ್ಲಿ ಎಂಜಿನಿಯರಿಂಗ್ ಸೇರಿ ಇತರ ಪದವಿ, ಸ್ನಾತಕೋತ್ತರ, ಡಿಪ್ಲೊಮಾ ತರಗತಿಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮಧ್ಯಂತರ ಸೆಮಿಸ್ಟರ್ ವಿದ್ಯಾರ್ಥಿಗಳನ್ನು ಅಂತಿಮ ಪರೀಕ್ಷೆ ಇಲ್ಲದೆಯೇ ಮುಂದಿನ ಹಂತಕ್ಕೆ ಉತ್ತೀರ್ಣಗೊಳಿಸುವುದಾಗಿ ಪ್ರಕಟಿಸಿದೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಡಿಸಿಎಂ ಮತ್ತು ಉನ್ನತ ಶಿಕ್ಷಣ ಸಚಿವ ಅಶ್ವಥ್ ನಾರಾಯಣ ಅವರು, ಪ್ರಸಕ್ತ ಶೈಕ್ಷಣಿಕ ವರ್ಷದ ಅಂತಿಮ ಸೆಮಿಸ್ಟರ್ ಅಥವಾ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಯುಜಿಸಿ ಮಾರ್ಗಸೂಚಿ ಅನ್ವಯ ಸೆಪ್ಟೆಂಬರ್ ಅಂತ್ಯದೊಳಗೆ ಪರೀಕ್ಷೆ ನಡೆಸಲೂ ನಿರ್ಧರಿಸಿದೆ. ಪ್ರಸಕ್ತ ಶೈಕ್ಷಣಿಕ ವರ್ಷದ ಅಂತಿಮ ಸೆಮಿಸ್ಟರ್‌ ಅಥವಾ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಯುಜಿಸಿ ಮಾರ್ಗಸೂಚಿ ಅನ್ವಯ ಸೆಪ್ಟೆಂಬರ್ ಅಂತ್ಯದೊಳಗೆ ಪರೀಕ್ಷೆ ನಡೆಸಲೂ ನಿರ್ಧರಿಸಲಾಗಿದೆ.

ಎಂಜಿನಿಯರಿಂಗ್, ಪದವಿ, ಸ್ನಾತ್ತಕೋತ್ತರ ಪದವಿಗೆ ಪರೀಕ್ಷೆ ನಡೆಸಬೇಕಾಗಿತ್ತು. ಆದರೆ ಕೊರೊನಾದಿಂದ ತಡವಾಗಿತ್ತು. ಹೀಗಾಗಿ ವಿದ್ಯಾರ್ಥಿಗಳಿಗೆ ಅನಾನುಕೂಲ ಆಗದಂತೆ ಕ್ರಮವಹಿಸಿದ್ದೇವೆ. ಆನ್‍ಲೈನ್ ಶಿಕ್ಷಣ, ಡಿಜಿಟಲ್ ಮೂಲಕ ಶಿಕ್ಷಣ ನೀಡಲಾಗಿದೆ. ಅನೇಕ ಮಾರ್ಗದಲ್ಲಿ ಶಿಕ್ಷಣ ನೀಡಲಾಗಿದೆ. ವಿವಿಗಳಲ್ಲಿ ಅಗತ್ಯ ಪಾಠ ಮಾಡಲಾಗಿದೆ. ಕೆಲವರಿಗೆ ನೆಟ್ ಸಮಸ್ಯೆ ಅಂತ ಹೇಳಲಾಗುತ್ತಿದೆ ಎಂದರು.

ವಿದ್ಯಾರ್ಥಿಗಳ ಶೈಕ್ಷಣಿಕ ಮೌಲ್ಯಮಾಪನದ ಜೊತೆಗೆ ಉದ್ಯೋಗ ಹಾಗೂ ಭವಿಷ್ಯದ ದೃಷ್ಟಿಯಿಂದ ಅಂತಿಮ ಸೆಮಿಸ್ಟರ್‌ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸಲಾಗುತ್ತಿದೆ. ಉದ್ಯೋಗದಾತ ಕಂಪನಿಗಳು ಕೂಡ ಉದ್ಯೋಗಾ ಕಾಂಕ್ಷಿಗಳ ಶೈಕ್ಷಣಿಕ ಗುಣಮಟ್ಟ ಹಾಗೂ ಅವರು ಗಳಿಸಿರುವ ಶ್ರೇಣಿಯನ್ನು ಗುರುತಿಸುತ್ತವೆ. ಇವರಿಗೆ ಪರೀಕ್ಷೆ ನಡೆಸದಿದ್ದರೆ ಭವಿಷ್ಯ ದಲ್ಲಿ ತೊಂದರೆಯಾಗುವುದು ಖಚಿತ.

ಹೀಗಾಗಿ ಈ ಪರೀಕ್ಷೆಗೆ ಬೇಕಾದ ಎಲ್ಲ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ಎಲ್ಲ ವಿವಿಗಳಿಗೆ ಸೂಚಿಸಲಾಗಿದೆ. 2020-21ರ ಶೈಕ್ಷಣಿಕ ಸಾಲಿನ ಮೊದಲ ಸೆಮಿಸ್ಟರ್ ಗೆ ಸೆಪ್ಟೆಂಬರ್ 1 ರಿಂದಲೇ ಆನ್‌ಲೈನ್ ತರಗತಿಗಳು ಹಾಗೂ ಅಕ್ಟೋಬರ್ 1 ರಿಂದ ಆಫ್‌ಲೈನ್ ತರಗತಿಗಳು ಆರಂಭ ವಾಗುತ್ತವೆ. ಅದಕ್ಕೆ ಬೇಕಾದ ಎಲ್ಲ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ವಿವಿಗಳು, ಕಾಲೇಜುಗಳಿಗೆ ಸೂಚಿಸಲಾಗಿದೆ ಎಂದರು.

ಮಧ್ಯಂತರ ಸೆಮಿಸ್ಟರ್‌/ವರ್ಷದಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾ ರ್ಥಿಗಳನ್ನು ಇಂಟರ್ ನಲ್ ಮಾರ್ಕ್ಸ್ ಮತ್ತು ಹಿಂದಿನ ಸೆಮಿಸ್ಟರ್‌/ವರ್ಷದ ಅಂಕಗಳ (50:50) ಸಮಗ್ರ ಮೌಲ್ಯಮಾಪನದ ಆಧಾರದ ಮೇಲೆ ತೇರ್ಗಡೆ ಮಾಡಲಾಗುತ್ತದೆ. ಒಂದೊಮ್ಮೆ ತಮ್ಮ ಅಂಕಗಳನ್ನು ಉತ್ತಮಗೊಳಿಸಿಕೊಳ್ಳಬೇಕೆನ್ನುವ ವಿದ್ಯಾರ್ಥಿಗಳು ಸೆಮಿಸ್ಟರ್‌ನಲ್ಲಿ ಪ್ರತ್ಯೇಕವಾಗಿ ಪರೀಕ್ಷೆಗಳನ್ನು ಬರೆಯಲು ಅವಕಾಶ ನೀಡಲಾಗುತ್ತದೆ. ಬ್ಯಾಕ್‌ಲಾಗ್‌ ವಿಷಯಗಳ ಕ್ಯಾರಿ ಓವರ್‌ಗೂ ಅವಕಾಶ ಇರುತ್ತದೆ. ಈ ಸಂಬಂಧ ಯಾವುದೆ ಅನುಮಾನಗಳಿದ್ದರೆ ಈ ಹೆಲ್ಪ್ ಲೈನ್ ನಂಬರ್ ದೂರವಾಣಿ ಸಂಖ್ಯೆ- 080 22341394 ಗೆ ಕರೆ ಮಾಡಬಹುದು.

1 Comment
  1. Kousar banu says

    Sir what about B. Ed exams

Leave A Reply

Your email address will not be published.