ನವದೆಹಲಿ : ಕೊರೊನಾ ವೈರಸ್ ಹಿನ್ನೆಲೆಯಲ್ಲಿ ಬಾಗಿಲು ಮುಚ್ಚಿದ್ದ ಕಾಲೇಜುಗಳನ್ನು ಆರಂಭಿಸಲು ಕೇಂದ್ರ ಸರಕಾರ ಕೊನೆಗೂ ಮುಹೂರ್ತ ಫಿಕ್ಸ್ ಮಾಡಿದೆ. ಶೈಕ್ಷಣಿಕ ವರ್ಷದ ಕಾಲೇಜು ತರಗತಿ ನವೆಂಬರ್ 1ರಿಂದ ಶುರುವಾಗಲಿದೆ. ಈ ಕುರಿತು ಯುಜಿಸಿ (ಯೂನಿವರ್ಸಿಟಿ ಗ್ರಾಂಟ್ಸ್ ಕಮಿಷನ್) ಪ್ರಸ್ತಾವಿತ ಮಾರ್ಗಸೂಚಿ ಪ್ರಕಟಿಸಿದೆ.

ನವೆಂಬರ್ 1ರಿಂದ ಕಾಲೇಜು ತರಗತಿಗಳು ಪ್ರಾರಂಭವಾಗಲಿದ್ದು, ಮೊದಲ ಸೆಮಿಸ್ಟರ್ ಪರೀಕ್ಷೆಗಳು ಮಾರ್ಚ್ 8 ರಿಂದ 23ರ ನಡುವೆ ನಡೆಯಲಿದೆ. ಎರಡನೇ ಸೆಮಿಸ್ಟರ್ ಏಪ್ರಿಲ್ 5ರಿಂದ ಆರಂಭವಾಗಲಿದ್ದು, ಪರೀಕ್ಷೆಗಳು ಆಗಸ್ಟ್ನಲ್ಲಿ ನಡೆಯಲಿವೆ. ಹಾಗೆ, ಮೊದಲ ವರ್ಷದ ಕೋರ್ಸ್ ಆಗಸ್ಟ್ 30ಕ್ಕೆ ಪೂರ್ಣಗೊಳ್ಳಲಿದೆ. ಈ ಹಿನ್ನೆಲೆಯಲ್ಲಿ ಅಕ್ಟೋಬರ್ 31ರ ಒಳಗೆ ಪ್ರಥಮ ವರ್ಷದ ಪದವಿ, ಸ್ನಾತಕೋತ್ತರ ಪದವಿ ತರಗತಿಗಳ ಅಡ್ಮಿಷನ್ ಪ್ರಕ್ರಿಯೆ ಪೂರ್ಣಗೊಳ್ಳಲಿದೆ ಎಂದು ತಿಳಿಸಿದೆ.

ಕೊರೊನಾ ವೈರಸ್ ಸೋಂಕಿನ ಹಿನ್ನೆಲೆಯಲ್ಲಿ ಆರ್ಥಿಕ ಸಂಕಷ್ಟಕ್ಕೆ ಒಳಗಾಗಿರುವ ಪೋಷಕರು ವಿದ್ಯಾರ್ಥಿಗಳ ಅಡ್ಮಿಷನ್ ಕ್ಯಾನ್ಸಲ್ ಮಾಡಿದ್ರೆ ಹಾಗೂ ಇತರ ಕಾಲೇಜುಗಳಲ್ಲಿ ಪ್ರವೇಶ ಬಯಸಿದ್ರೆ ವಿದ್ಯಾರ್ಥಿಗಳು ಪಾವತಿ ಮಾಡಿರುವ ಸಂಪೂರ್ಣ ಶುಲ್ಕವನ್ನು ಕಾಲೇಜು ಆಡಳಿತ ಮಂಡಳಿ ಕಡ್ಡಾಯವಾಗಿ ಹಿಂದಿರುಗಿಸಬೇಕು. ಪೋಷಕರು ನವೆಂಬರ್ 30ರ ವರೆಗೆ ಮಾತ್ರವೇ ಈ ವಿನಾಯಿತಿಯನ್ನು ಪಡೆದುಬಹುದಾಗಿದೆ ಎಂದು ಕೇಂದ್ರ ಶಿಕ್ಷಣ ಸಚಿವ ಡಾ.ರಮೇಶ್ ಪೋಖ್ರಿಯಾಲ್ ನಿಶಂಕ್ ಅವರು ಟ್ವೀಟ್ ಮಾಡಿದ್ದಾರೆ.