ಬೆಂಗಳೂರು : ಕೊರೊನಾ ವೈರಸ್ ಸೋಂಕಿನ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಸ್ಥಗಿತಗೊಂಡಿಲ್ಲ ವಿದ್ಯಾಗಮ ಯೋಜನೆಯನ್ನು ಪುನರಾರಂಭಿಸುವ ಕುರಿತು ಸಾರ್ವಜನಿಕ ಶಿಕ್ಷಣ ಇಲಾಖೆ ಅಧಿಕೃತ ಆದೇಶ ಹೊರಡಿಸಿದ್ದು, ಜನವರಿ 1 ರಿಂದಲೇ ವಿದ್ಯಾಗಮ ಯೋಜನೆ ಪರಿಷ್ಕೃತ ರೂಪದಲ್ಲಿ ಆರಂಭಗೊಳ್ಳಲಿದೆ.
ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯ ಹಿನ್ನೆಲೆಯಲ್ಲಿ ವಿದ್ಯಾಗಮ ಯೋಜನೆಯಲ್ಲಿ ಹಲವು ಬದಲಾವಣೆಗಳನ್ನು ಮಾಡಲಾಗಿದೆ. ಶಾಲೆಯ ಆವರಣದಲ್ಲಿಯೇ ವಿದ್ಯಾರ್ಥಿಗಳಿಗೆ ವಿದ್ಯಾಗಮ ತರಗತಿಗಳು ನಡೆಯಲಿವೆ. ಪರಿಷ್ಕೃತ ರೂಪದ ವಿದ್ಯಾಗಮ ಜ.1ರಿಂದ ಜಾರಿಗೆ ಬರಲಿದೆ. ಈ ಸಂಬಂಧ ಸುರಕ್ಷತಾ ಮಾರ್ಗಸೂಚಿ, ಎಸ್ಒಪಿಯನ್ನು ಸಾರ್ವಜನಿಕ ಶಿಕ್ಷಣ ಇಲಾಖೆ ಬಿಡುಗಡೆ ಮಾಡಿದೆ. ವಿದ್ಯಾಗಮ ತರಗತಿ ಹೇಗಿರಬೇಕು. ವೇಳಾಪಟ್ಟಿ ಇತ್ಯಾದಿಗಳನ್ನು ಇಲಾಖೆ ಬಿಡುಗಡೆ ಮಾಡಿದೆ.
ವಿದ್ಯಾಗಮ ಯೋಜನೆಯ ಆರಂಭದ ಹಿನ್ನೆಲೆಯಲ್ಲಿ ಸಿದ್ದತೆಗಳನ್ನು ಮಾಡಿಕೊಳ್ಳುವಂತೆ ಈಗಾಗಲೇ ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಹಾಗೂ ಶಿಕ್ಷಕರಿಗೆ ಸೂಚನೆಯನ್ನು ನೀಡಲಾಗಿದೆ. ವಿದ್ಯಾರ್ಥಿಗಳು ಕಡ್ಡಾಯವಾಗಿ ಪೋಷಕರ ಅನುಮತಿಯನ್ನು ಪಡೆದು ವಿದ್ಯಾಗಮ ಯೋಜನೆಯಲ್ಲಿ ಭಾಗಿಯಾಗಬಹುದಾಗಿದೆ. ಆದರೆ ವಿದ್ಯಾಗಮ ಶಾಲಾರಂಭವಲ್ಲ ಎಂದು ಸಚಿವ ಸುರೇಶ್ ಕುಮಾರ್ ತಿಳಿಸಿದ್ದರು.

ಸಾರ್ವಜನಿಕ ಶಿಕ್ಷಣ ಇಲಾಖೆ ವಿದ್ಯಾಗಮ ಯೋಜನೆಯನ್ನು ಆರಂಭಿಸುವ ಕುರಿತು ಈಗಾಗಲೇ ಅಧಿಕೃತ ಆದೇಶವನ್ನು ಹೊರಡಿಸಿದ್ದು, ಹೊಸ ವರ್ಷದಿಂದಲೇ ಯೋಜನೆ ಪುನರಾರಂಭಗೊಳ್ಳಲಿದೆ.