BIG UPDATE: ಭಾರತದ ಎಲ್ಲಾ ಶಾಲೆ, ಕಾಲೇಜುಗಳಲ್ಲಿ ಲೈಂಗಿಕ ಶಿಕ್ಷಣ ಕಡ್ಡಾಯ ? ಸುಪ್ರೀಂಗೆ ಕೇಂದ್ರದ ಅಫಿಡವಿಟ್

comprehensive sex education mandatory : ಹದಿಹರೆಯದವರಲ್ಲಿಯೇ ಪರಸ್ಪರ ಸಮ್ಮತಿ ಸಂಬಂಧ, ಗರ್ಭಧಾರಣೆಯ ಪ್ರಕರಣಗಳು ಹೆಚ್ಚುತ್ತಿವೆ. ಇವು ಪೋಕ್ಸೋ (POCSO) ಕಾಯ್ದೆಯ ಅಡಿಯಲ್ಲಿ ಕ್ರಿಮಿನಲ್ ಪ್ರಕರಣಗಳಾಗುವುದನ್ನು ತಪ್ಪಿಸುವ ಸಲುವಾಗಿ ಲೈಂಗಿಕ ಶಿಕ್ಷಣ ಕಡ್ಡಾಯ ಮಾಡಲಾಗಿದೆ.

ನವದೆಹಲಿ: ಶಾಲಾ, ಕಾಲೇಜು ಹಂತದಲ್ಲಿಯೇ ವಿದ್ಯಾರ್ಥಿಗಳಿಗೆ ‘ಸಮಗ್ರ ಲೈಂಗಿಕ ಶಿಕ್ಷಣ’ (Comprehensive Sex Education)ಒದಗಿಸುವ ನಿಟ್ಟಿನಲ್ಲಿ ಭಾರತ ಸರಕಾರ ಮಹತ್ವದ ಹೆಜ್ಜೆ ಇರಿಸಿದೆ. ಸುಪ್ರೀಂ ಕೋರ್ಟ್‌ಗೆ ಈ ಕುರಿತು ಮಾಹಿತಿಯನ್ನು ನೀಡಿರುವ ಕೇಂದ್ರ ಸರಕಾರ, ತಜ್ಞರ ಸಮಿತಿಯ ಶಿಫಾರಸ್ಸಿನ ಅನ್ವಯ ಎಲ್ಲಾ ಶಿಕ್ಷಣ ಸಂಸ್ಥೆಗಳ ಪಠ್ಯಕ್ರಮದಲ್ಲಿ ಈ ವಿಷಯವನ್ನು ಕಡ್ಡಾಯವಾಗಿ ಅಳವಡಿಸಲು ನಿರ್ಧರಿಸಿದೆ.

ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿಗಳಾದ ಬಿ.ವಿ. ನಾಗರತ್ನ ಹಾಗೂ ಆರ್. ಮಹದೇವನ್ ಅವರನ್ನು ಒಳಗೊಂಡ ದ್ವಿಸದಸ್ಯ ಪೀಠದ ಮುಂದೆ ಹಾಜರಾದ ಹೆಚ್ಚುವರಿ ಸಾಲಿಸಿಟರ್ ಜನರಲ್ ಐಶ್ವರ್ಯಾ ಭಾಟಿ ಅವರು ಕೇಂದ್ರ ಸರಕಾರ ಈ ನಿರ್ಧಾರವನ್ನು ಖಚಿತ ಪಡಿಸಿದ್ದಾರೆ.

ಮಕ್ಕಳಿಗೆ ಯಾಕೆ ಬೇಕು ಸಮಗ್ರ ಲೈಂಗಿಕ ಶಿಕ್ಷಣ ?

ಇತ್ತೀಚಿನ ದಿನಗಳಲ್ಲಿ ಹದಿಹರೆಯದವರಲ್ಲಿಯೇ ಪರಸ್ಪರ ಸಮ್ಮತಿ ಸಂಬಂಧ, ಗರ್ಭಧಾರಣೆಯ ಪ್ರಕರಣಗಳು ಹೆಚ್ಚುತ್ತಿವೆ. ಇವು ಪೋಕ್ಸೋ (POCSO) ಕಾಯ್ದೆಯ ಅಡಿಯಲ್ಲಿ ಕ್ರಿಮಿನಲ್ ಪ್ರಕರಣಗಳಾಗುವುದನ್ನು ತಪ್ಪಿಸುವ ಸಲುವಾಗಿ ಸೂಕ್ತ ಕ್ರಮ ಕೈಗೊಳ್ಳುವಂತೆ ಸುಪ್ರೀಂ ಕೋರ್ಟ್‌ ಈ ಹಿಂದೆಯೇ ಕೇಂದ್ರ ಸರಕಾರಕ್ಕೆ ತಿಳಿಸಿತ್ತು. ಅದ್ರಲ್ಲೂ ಕೇಂದ್ರ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಸಚಿವಾಲಯ, 26 ಸದಸ್ಯರನ್ನು ಒಳಗೊಂಡಿರುವ ತಜ್ಞರ ಸಮಿತಿಯನ್ನು ರಚಿಸಿತ್ತು. ಸಮಿತಿ ಸಲ್ಲಿಸಿದ್ದ ವರದಿಗೆ ಕೇಂದ್ರ ಸರಕಾರ ಸಮ್ಮತಿ ಸೂಚಿಸಿತ್ತು.

ತಜ್ಞರ ಸಮಿತಿಯ ಪ್ರಮುಖ ಶಿಫಾರಸುಗಳೇನು ?

ಕೇಂದ್ರ ಸರಕಾರದ ಶಿಫಾರಸ್ಸಿನ ಮೇರೆಗೆ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಶಿಯಲ್ ಸೈನ್ಸಸ್ (TISS) ತಜ್ಞರು, ನುರಿತ ಮನಃಶಾಸ್ತ್ರಜ್ಞರು ಹಾಗೂ ವಿವಿಧ ಇಲಾಖೆಗಳ ಪ್ರತಿನಿಧಿಗಳನ್ನು ಒಳಗೊಂಡಿರುವ ತಜ್ಞರ ಸಮಿತಿಯು ಈಗಾಗಳೇ ಹಲವು ಶಿಫಾರಸ್ಸುಗಳನ್ನು ಮಾಡಿದೆ.

ಯಾವಾಗ ಜಾರಿ ಆಗುತ್ತೆ ಲೈಂಗಿಕ ಶಿಕ್ಷಣದ ತರಗತಿ ?

ಕೇಂದ್ರ ಸರಕಾರದ ಈ ನಿರ್ಧಾರವನ್ನು ಸುಪ್ರೀಂ ಕೋರ್ಟ್‌ ವಕೀಲರು ಕೂಡ ಸ್ವಾಗತಿಸಿದ್ದಾರೆ. ಲೈಂಗಿಕ ಶಿಕ್ಷಣವನ್ನು ವ್ಯವಸ್ಥಿತವಾಗಿ ಜಾರಿಗೆ ತರಬೇಕು ಅಂತಾ ತಿಳಿಸಿದ್ದಾರೆ. ತಜ್ಞರ ವರದಿಯನ್ನು ಕೂಲಂಕುಶವಾಗಿ ಪರಿಶೀಲನೆ ನಡೆಸಿದ ನಂತರದಲ್ಲಿ ಸುಪ್ರೀಂ ಕೋರ್ಟ್‌ ಅಂತಿಮ ಆದೇಶವನ್ನು ಪ್ರಕಟಿಸಲಿದೆ. ನ್ಯಾಯಾಲಯದಿಂದ ಹರಿಸು ನಿಶಾನೆ ಸಿಕ್ಕ ನಂತರವೇ ಲೈಂಗಿಕ ಶಿಕ್ಷಣದ ಕುರಿತ ಹೊಸ ಪಠ್ಯಕ್ರಮ ದೇಶದಾದ್ಯಂತ ಏಕಕಾಲದಲ್ಲಿ ಜಾರಿಗೆ ಬರಲಿದೆ.

comprehensive sex education mandatory in schools colleges central govt informs supreme court

Exit mobile version